R Ashwin: 436 ವಿಕೆಟ್ಗಳಲ್ಲಿ ಅಶ್ವಿನ್ ಅತೀ ಹೆಚ್ಚು ಬಾರಿ ಔಟ್ ಮಾಡಿದ್ದು ಯಾರನ್ನ ಗೊತ್ತಾ?
Ravichandran Ashwin: ಅಶ್ವಿನ್ ಅತೀ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ವಿಶ್ವದ ಬೌಲರುಗಳ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಇನ್ನು ನಾಲ್ಕು ವಿಕೆಟ್ ಪಡೆದರೆ ದಕ್ಷಿಣ ಆಫ್ರಿಕಾದ ಬೌಲರ್ ಡೇಲ್ ಸ್ಟೇನ್ (439) ಅವರನ್ನು ಹಿಂದಿಕ್ಕಬಹುದು.
ಮೊಹಾಲಿಯಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಸ್ಪಿನ್ ಬೌಲರ್ ಆರ್ ಅಶ್ವಿನ್ (R Ashwin) ಒಟ್ಟು 6 ವಿಕೆಟ್ ಪಡೆದು ಮಿಂಚಿದ್ದರು. ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಎರಡು ವಿಕೆಟ್ ಪಡೆದ ಅಶ್ವಿನ್ 2ನೇ ಇನಿಂಗ್ಸ್ನಲ್ಲಿ 4 ವಿಕೆಟ್ ಕಬಳಿಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ನಲ್ಲಿ 434 ವಿಕೆಟ್ ಪಡೆದಿದ್ದ ಕಪಿಲ್ ದೇವ್ ಅವರನ್ನು ಹಿಂದಿಕ್ಕಿ ಟೀಮ್ ಇಂಡಿಯಾ ಪರ ಅತೀ ಹೆಚ್ಚು ವಿಕೆಟ್ ಪಡೆದ ಬೌಲರುಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು. ಸದ್ಯ ಅನಿಲ್ ಕುಂಬ್ಳೆ ಅವರು ಅಶ್ವಿನ್ ಅವರ ಮುಂದಿದ್ದಾರೆ. ಕುಂಬ್ಳೆ 132 ಪಂದ್ಯಗಳಲ್ಲಿ 619 ವಿಕೆಟ್ ಪಡೆದಿದ್ದಾರೆ.
ಸದ್ಯ 436 ವಿಕೆಟ್ ಕಬಳಿಸಿರುವ ಅಶ್ವಿನ್ ಅವರ ಸ್ಪಿನ್ ಮೋಡಿ ಅತೀ ಹೆಚ್ಚು ಬಲಿಯಾಗಿದ್ದು, ಇಂಗ್ಲೆಂಡ್ ಆಲ್ರೌಂಡರ್ ಬೆನ್ ಸ್ಟೋಕ್ಸ್ ಎಂಬುದು ವಿಶೇಷ. ಅಂದರೆ ಅಶ್ವಿನ್ ಎಸೆತದಲ್ಲಿ ಬೆನ್ ಸ್ಟೋಕ್ಸ್ 11 ಬಾರಿ ಔಟಾಗಿದ್ದಾರೆ.
ಹಾಗೆಯೇ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 10 ಬಾರಿ ಅಶ್ವಿನ್ ಎಸೆತದಲ್ಲಿ ಔಟಾಗಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದ್ದಾರೆ.
ಮೂರನೇ ಸ್ಥಾನದಲ್ಲಿ ಇಂಗ್ಲೆಂಡ್ ಮಾಜಿ ನಾಯಕ ಅಲಿಸ್ಟರ್ ಕುಕ್ ಇದ್ದು, ಕುಕ್ ಒಟ್ಟು 9 ಬಾರಿ ಅಶ್ವಿನ್ಗೆ ವಿಕೆಟ್ ಒಪ್ಪಿಸಿದ್ದರು.
ನಾಲ್ಕನೇ ಸ್ಥಾನದಲ್ಲಿ ನ್ಯೂಜಿಲೆಂಡ್ನ ಟಾಮ್ ಲಾಥಮ್ ಇದ್ದು, ಕಿವೀಸ್ ಆಟಗಾರ ಅಶ್ವಿನ್ ಸ್ಪಿನ್ ಮೋಡಿಗೆ 8 ಬಾರಿ ಔಟಾಗಿದ್ದರು.
ಇನ್ನು ಐದನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಎಡ್ ಕೋವನ್, ಇಂಗ್ಲೆಂಡ್ನ ಜೇಮ್ಸ್ ಅಂಡರ್ಸನ್ ಹಾಗೂ ಶ್ರೀಲಂಕಾದ ಲಹಿರು ತಿರಿಮಿನ್ನೆ ಇದ್ದಾರೆ. ಈ ಮೂವರು ಆಟಗಾರರು ಅಶ್ವಿನ್ ಎಸೆತಗಳಲ್ಲಿ 7 ಬಾರಿ ಔಟಾಗಿದ್ದರು.
ಸದ್ಯ ಅಶ್ವಿನ್ ಅತೀ ಹೆಚ್ಚು ಟೆಸ್ಟ್ ವಿಕೆಟ್ ಪಡೆದ ವಿಶ್ವದ ಬೌಲರುಗಳ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದ್ದು, ಇನ್ನು ನಾಲ್ಕು ವಿಕೆಟ್ ಪಡೆದರೆ ದಕ್ಷಿಣ ಆಫ್ರಿಕಾದ ಬೌಲರ್ ಡೇಲ್ ಸ್ಟೇನ್ (439) ಅವರನ್ನು ಹಿಂದಿಕ್ಕಬಹುದು.
ಇದನ್ನೂ ಓದಿ: Ab de villiers: IPL ನಲ್ಲಿ ಎಬಿಡಿ ಹೆಸರಿನಲ್ಲಿರುವ ಅಪರೂಪದ ದಾಖಲೆಗಳಿವು..!
ಇದನ್ನೂ ಓದಿ: RCB ತಂಡವನ್ನು ಮುನ್ನಡೆಸಿದ 5 ನಾಯಕರುಗಳು ಯಾರೆಲ್ಲಾ ಗೊತ್ತಾ?
(Top victims of Ravichandran Ashwin in Tests)