
ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು (ಮೇ 31) ಇಂಡಿಯನ್ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯ ಜರುಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಟಾಸ್ ಗೆಲ್ಲುವ ತಂಡ ಏನನ್ನು ಆಯ್ಕೆ ಮಾಡಿಕೊಳ್ಳಬೇಕು? ಟಾಸ್ ಸೋತರೆ ಏನು ಮಾಡಬೇಕು ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ನರೇಂದ್ರ ಮೋದಿ ಸ್ಟೇಡಿಯಂ ಪಿಚ್‌ನ ಗುಣಲಕ್ಷಣಗಳು:
ದ್ವಿತೀಯ ಇನಿಂಗ್ಸ್ ವೇಳೆ ಇಬ್ಬನಿ ಬೀಳುವ ಸಾಧ್ಯತೆ ಇರುವುದರಿಂದ ಟಾಸ್ ಗೆಲ್ಲುವ ತಂಡ ಬೌಲಿಂಗ್ ಆಯ್ದುಕೊಳ್ಳುವುದು ಉತ್ತಮ ನಿರ್ಧಾರ. ಏಕೆಂದರೆ ಇಬ್ಬನಿಯಿಂದಾಗಿ 2ನೇ ಇನಿಂಗ್ಸ್ ವೇಳೆ ಬೌಲಿಂಗ್ ಮಾಡುವುದು ಕಷ್ಟ. ಇದರ ಸಂಪೂರ್ಣ ಲಾಭ ಪಡೆದು ಚೇಸ್ ಮಾಡಬಹುದು.
ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡುವ ತಂಡ ಬೃಹತ್ ಮೊತ್ತ ಪೇರಿಸುವುದು ಅನಿವಾರ್ಯ. ಒಂದು ವೇಳೆ 220+ ರನ್ಗಳಿಸಿದರೆ ಮ್ಯಾಚ್ ಗೆಲ್ಲುವ ಅವಕಾಶ ಇರುತ್ತದೆ. ಇದಕ್ಕೆ ತಾಜಾ ಉದಾಹರಣೆ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯ.
ಮೇ 21 ರಂದು ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ 20 ಓವರ್ಗಳಲ್ಲಿ 229 ರನ್ ಗಳಿಸಿದ್ದರು. ಅಲ್ಲದೆ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 140 ರನ್ಗಳಿಗೆ ಆಲೌಟ್ ಮಾಡಿ 89 ರನ್‌ಗಳ ಬೃಹತ್ ಗೆಲುವು ಸಾಧಿಸಿತ್ತು. ಅಂದರೆ ಇಲ್ಲಿ ಮೊದಲು ಬ್ಯಾಟ್ ಮಾಡಿದರೂ ಪಂದ್ಯ ಗೆಲ್ಲಲು ಅವಕಾಶವಿದೆ. ಇದಕ್ಕೆ ಸಾಕ್ಷಿ ಈ ಕೆಳಗಿನ ಅಂಕಿ ಅಂಶಗಳು.
ಅಂದರೆ ಇಲ್ಲಿ ಆಡಲಾದ 51 ಮ್ಯಾಚ್ಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 26 ಬಾರಿ ಗೆದ್ದರೆ, ಚೇಸಿಂಗ್ ಮಾಡಿದ ತಂಡ 25 ಬಾರಿ ಗೆದ್ದಿದೆ. ಅಂದರೆ ಟಾಸ್ ಫ್ಯಾಕ್ಟರ್ ಸಮವಾಗಿದೆ ಎಂದೇ ಹೇಳಬಹುದು. ಇದಾಗ್ಯೂ ಇಬ್ಬನಿ ಭೀತಿ ಇರುವ ಕಾರಣ ಟಾಸ್ ಗೆದ್ದ ತಂಡಗಳು ಬೌಲಿಂಗ್ ಆಯ್ದುಕೊಳ್ಳುವುದು ಸೂಕ್ತ.
ಇದನ್ನೂ ಓದಿ: Rajat Patidar: ಅವರನ್ನು ಕಣಕ್ಕಿಳಿಸುವ ಬಗ್ಗೆ ಇನ್ನೂ ಕೂಡ ನಿರ್ಧಾರ ಮಾಡಿಲ್ಲ!
ಒಂದು ವೇಳೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಬೇಕಾಗಿ ಬಂದರೆ ಬೃಹತ್ ಮೊತ್ತ ಪೇರಿಸಿ ಪಂದ್ಯ ಗೆಲ್ಲಲು ಕೂಡ ಅವಕಾಶವಿದೆ. ಇದಕ್ಕೆ ಸಾಕ್ಷಿ ಈ ಮೈದಾನದಲ್ಲಿ ಮೊದಲು ಬ್ಯಾಟ್ ಮಾಡಿದ ತಂಡಗಳು 26 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಟಾಸ್ ಸೋತರೂ, ಗೆದ್ದರೂ ಉಭಯ ತಂಡಗಳಿಂದ ಭರ್ಜರಿ ಪೈಪೋಟಿಯನ್ನು ನಿರೀಕ್ಷಿಸಬಹುದು.