AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಆಫ್ರಿಕಾದಲ್ಲಿ ಅಜೇಯ 350 ರನ್ ಚಚ್ಚಿದ ಬಾಂಗ್ಲಾದೇಶ ನಾಯಕ

ದಕ್ಷಿಣ ಆಫ್ರಿಕಾ ಎ ವಿರುದ್ಧದ ಪಂದ್ಯದಲ್ಲಿ ಬಾಂಗ್ಲಾದೇಶ ಎ ತಂಡದ ನಾಯಕ ತೌಹಿದ್ ಹೃದಯ್ ಅಜೇಯ 350 ರನ್ ಬಾರಿಸಿ ಇತಿಹಾಸ ನಿರ್ಮಿಸಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ವಿದೇಶಿ ನೆಲದಲ್ಲಿ ತ್ರಿಶತಕ ಸಿಡಿಸಿದ ಮೊದಲ ಬಾಂಗ್ಲಾದೇಶ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕಠಿಣ ಪರಿಸ್ಥಿತಿಯಲ್ಲಿ ಅವರು ಅಮೂಲ್ಯ ಪಾಲುದಾರಿಕೆಗಳನ್ನು ನಿರ್ಮಿಸಿ ತಂಡಕ್ಕೆ ಬೃಹತ್ ಮೊತ್ತ ಗಳಿಸಲು ನೆರವಾದರು.

ದಕ್ಷಿಣ ಆಫ್ರಿಕಾದಲ್ಲಿ ಅಜೇಯ 350 ರನ್ ಚಚ್ಚಿದ ಬಾಂಗ್ಲಾದೇಶ ನಾಯಕ
ತೌಹಿದ್ ಹೃದಯ್Image Credit source: BCB X
ಪೃಥ್ವಿಶಂಕರ
|

Updated on:Sep 02, 2026 | 8:07 PM

Share

ದಕ್ಷಿಣ ಆಫ್ರಿಕಾ ಎ ಹಾಗೂ ಬಾಂಗ್ಲಾದೇಶ ಎ ತಂಡಗಳ ನಡುವೆ ನಡೆಯುತ್ತಿರುವ ಅನಧಿಕೃತ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ನಾಯಕ ತೌಹಿದ್ ಹೃದಯ್ ಐತಿಹಾಸಿಕ ಇನ್ನಿಂಗ್ಸ್ ಆಡಿದ್ದಾರೆ. ಈ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಅಜೇಯರಾಗಿ ಉಳಿದ ತೌಹಿದ್ ಹೃದಯ್ 350 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ವಿದೇಶಿ ನೆಲದಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ತ್ರಿಶತಕ ಬಾರಿಸಿದ ಮೊದಲ ಬಾಂಗ್ಲಾದೇಶ ಕ್ರಿಕೆಟಿಗ ಎಂಬ ದಾಖಲೆ ನಿರ್ಮಿಸಿದ್ದಾರೆ. ತೌಹಿದ್ ಹೃದಯ್​ಗೂ ಮೊದಲು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ರಕಿಬುಲ್ ಹಸನ್ ಮತ್ತು ತಮೀಮ್ ಇಕ್ಬಾಲ್ ತ್ರಿಶತಕ ಬಾರಿಸಿದ್ದರು. ಆದರೆ ಇವರಿಬ್ಬರು ತಮ್ಮ ತವರು ನೆಲದಲ್ಲಿ ಈ ಸಾಧನೆ ಮಾಡಿದ್ದರು. ಆದರೆ ತೌಹಿದ್ ಹೃದಯ್ ವಿದೇಶಿ ನೆಲದಲ್ಲಿ ಈ ಸಾಧನೆ ಮಾಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

481 ಎಸೆತಗಳಲ್ಲಿ 27 ಬೌಂಡರಿ, 10 ಸಿಕ್ಸರ್‌

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ ಎ ತಂಡ 512 ರನ್​ಗಳ ದಾಖಲೆಯ ಮೊತ್ತ ಕಲೆಹಾಕಿತು. ಅದಾದ ಬಳಿಕ ತನ್ನ ಮೊದಲ ಇನ್ನಿಂಗ್ಸ್ ಆರಂಭಿಸಿದ ಬಾಂಗ್ಲಾದೇಶ ಎ ತಂಡ 8 ವಿಕೆಟ್‌ಗಳನ್ನು ಕಳೆದುಕೊಂಡು ಬರೋಬ್ಬರಿ 676 ರನ್ ಕಲೆಹಾಕಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ತಂಡದ ಪರ ನಾಯಕ ತೌಹಿದ್ ಹೃದಯ್ 481 ಎಸೆತಗಳಲ್ಲಿ 27 ಬೌಂಡರಿ ಹಾಗೂ 10 ಸಿಕ್ಸರ್‌ಗಳ ಸಹಿತ ಅಜೇಯ 350 ರನ್ ಬಾರಿಸಿದರು.

151 ರನ್‌ಗಳ ಜೊತೆಯಾಟ

ಆದಾಗ್ಯೂ ಬಾಂಗ್ಲಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಅಗ್ರ ಬ್ಯಾಟರ್​ಗಳಾದ ಮಹ್ಮದುಲ್ ಹಸನ್ ಜಾಯ್, ಪರ್ವೇಜ್ ಹೊಸೈನ್ ಎಮನ್ ಮತ್ತು ಮೊಹಮ್ಮದ್ ನೈಮ್ ಅವರ ವಿಕೆಟ್‌ಗಳನ್ನು ಬೇಗನೆ ಕಳೆದುಕೊಂಡಿತು. ಆದರೆ ಆ ನಂತರ ತಂಡದ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಹೊತ್ತ ನಾಯಕ ತೌಹಿದ್ ಹೃದಯ್ ವಿಕೆಟ್ ಕೀಪರ್ ಜಾಕಿರ್ ಅಲಿ ಅವರೊಂದಿಗೆ 292 ಎಸೆತಗಳಲ್ಲಿ ಐದನೇ ವಿಕೆಟ್‌ಗೆ 151 ರನ್‌ಗಳ ಜೊತೆಯಾಟ ನಡೆಸಿದರು. ಇತ್ತ ಜಾಕಿರ್ ಅಲಿ ಶತಕ ವಂಚಿತರಾಗಿ 94 ರನ್​ಗಳಿಗೆ ವಿಕೆಟ್ ಒಪ್ಪಿಸಿದರು.

ಇದಾದ ಬಳಿಕ ತೌಹಿದ್ ಹೃದಯ್, ಮೊಹಮ್ಮದ್ ಸೈಫುದ್ದೀನ್ ಅವರೊಂದಿಗೆ ಆರನೇ ವಿಕೆಟ್‌ಗೆ 185 ರನ್‌ಗಳ ಪಾಲುದಾರಿಕೆಯನ್ನು ಹಂಚಿಕೊಂಡರು. ಮೊಹಮ್ಮದ್ ಸೈಫುದ್ದೀನ್ ಕೂಡ 87 ರನ್​ಗಳಿಗೆ ಔಟಾಗುವ ಮೂಲಕ ಶತಕದಿಂದ ವಂಚಿತರಾದರು. ಕೊನೆಯಲ್ಲಿ ಮುಸ್ಫಿಕ್ ಹಸನ್ ಕೂಡ 31 ರನ್​ಗಳ ಅಜೇಯ ಇನ್ನಿಂಗ್ಸ್ ಆಡಿ ತಂಡಕ್ಕೆ ಮುನ್ನಡೆ ತಂದುಕೊಟ್ಟರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:03 pm, Wed, 2 September 26

Follow Us
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!