IND vs SA: ಫೈನಲ್ ಫೈಟ್​ಗೆ ಬೆಂಗಳೂರು ಸಿದ್ಧ; ಪೊಲೀಸ್ ಸರ್ಪಗಾವಲು, ಟ್ರಾಫಿಕ್ ತಪ್ಪಿಸಲು ಹತ್ತಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು

| Updated By: ಪೃಥ್ವಿಶಂಕರ

Updated on: Jun 19, 2022 | 4:36 PM

IND vs SA: ಸಂಜೆ ಏಳು ಗಂಟೆಗೆ ಪಂದ್ಯ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಎರಡು ವರ್ಷಗಳ ನಂತರ ಅಂತರರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಪಂದ್ಯ ವೀಕ್ಷಣೆಗೆ ಜನಸಾಗರವೇ ಹರಿದು ಬರುತ್ತಿದೆ. ಹೀಗಾಗಿ ಸ್ಟೇಡಿಯಂ ಸುತ್ತಮುತ್ತ ಭದ್ರತೆಗೆ ಒಂದು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.

IND vs SA: ಫೈನಲ್ ಫೈಟ್​ಗೆ ಬೆಂಗಳೂರು ಸಿದ್ಧ; ಪೊಲೀಸ್ ಸರ್ಪಗಾವಲು, ಟ್ರಾಫಿಕ್ ತಪ್ಪಿಸಲು ಹತ್ತಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು
ಪ್ರಾತಿನಿಧಿಕ ಚಿತ್ರ
Follow us on

ಭಾರತ ಮತ್ತು ದಕ್ಷಿಣ ಆಫ್ರಿಕಾ (India and South Africa ) ನಡುವೆ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿ (five-match T20 series) ಇದೀಗ ರೋಚಕ ತಿರುವನ್ನು ತಲುಪಿದೆ. ಮೊದಲೆರಡು ಪಂದ್ಯಗಳಲ್ಲಿ ಸೋತ ನಂತರ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಸರಣಿಯನ್ನು 2-2ರಲ್ಲಿ ಸಮಬಲಗೊಳಿಸಿದೆ. ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಐದನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಭಾರತದ ಯುವ ತಂಡ ತಮ್ಮ ದೌರ್ಬಲ್ಯಗಳನ್ನು ಮೆಟ್ಟಿ ನಿಂತು ಗೆಲುವು ದಾಖಲಿಸುವ ಉದ್ದೇಶದಿಂದ ತಂಡವಾಗಿ ಉತ್ತಮ ಪ್ರದರ್ಶನ ತೋರಲಿದೆ. ಇದಕ್ಕಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಕೂಡ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಇದರೊಂದಿಗೆ ಭಾರತ ತಂಡ ಇದುವರೆಗೆ ತವರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ದ್ವಿಪಕ್ಷೀಯ T20I ಸರಣಿಯನ್ನು ಗೆದ್ದಿಲ್ಲದಿರುವುದು ಈ ಪಂದ್ಯಕ್ಕೆ ಮತ್ತಷ್ಟು ಹೈಪ್ ಕ್ರಿಯೆಟ್ ಮಾಡಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಲೂ ಹಬ್ಬದ ವಾತಾವರಣ

ಸಿಲಿಕಾನ್ ಸಿಟಿಯಲ್ಲಿ ಟಿ 20 ಕ್ರಿಕೆಟ್​ ಸರಣಿಯ ಫೈನಲ್​ ಪಂದ್ಯಕ್ಕೆ ಕೌಂಟ್​ಡೌನ್ ಶುರುವಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಲೂ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಸಂಜೆ ಏಳು ಗಂಟೆಗೆ ಪಂದ್ಯ ಆರಂಭವಾಗಲಿದೆ. ಬೆಂಗಳೂರಿನಲ್ಲಿ ಎರಡು ವರ್ಷಗಳ ನಂತರ ಅಂತರರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಪಂದ್ಯ ವೀಕ್ಷಣೆಗೆ ಜನಸಾಗರವೇ ಹರಿದು ಬರುತ್ತಿದೆ. ಹೀಗಾಗಿ ಸ್ಟೇಡಿಯಂ ಸುತ್ತಮುತ್ತ ಭದ್ರತೆಗೆ ಒಂದು ಸಾವಿರ ಪೊಲೀಸರ ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ
IND vs SA: ಬೆಂಗಳೂರಿನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಗೆಲುವು ತಂದುಕೊಡಬಲ್ಲ ಐವರು ಕ್ರಿಕೆಟಿಗರಿವರು
ಕಾರ್ತಿಕ್ ಆಯ್ತು ಇದೀಗ ಮುರಳಿ ವಿಜಯ್; 2 ವರ್ಷಗಳ ನಂತರ ಮತ್ತೆ ಫೀಲ್ಡಿಗಿಳಿದ ತಮಿಳುನಾಡು ಕ್ರಿಕೆಟರ್

ಇದನ್ನೂ ಓದಿ:T20 World Cup: ಟಿ20 ವಿಶ್ವಕಪ್​ಗೆ ಟೀಂ ಇಂಡಿಯಾದ ಆಯ್ಕೆ ಪ್ರಕ್ರಿಯೆ ಯಾವಾಗ? ಗಂಗೂಲಿ ನೀಡಿದ್ರು ಬಿಗ್​ ಅಪ್​ಡೇಟ್

ಜನದಟ್ಟಣೆಯಿಂದಾಗಿ ವಾಹನ ಸವಾರರಿಗೆ ಟ್ರಾಫಿಕ್ ಕಿರಿಕಿರಿ ಉಂಟಾಗುತ್ತಿದೆ. ಹಾಗಾಗಿ ಬೆಂಗಳೂರು ಸಂಚಾರಿ ಪೊಲೀಸರು ಕ್ರೀಡಾಂಗಣಕ್ಕೆ ಸಂಪರ್ಕಿಸುವ ಮಾರ್ಗಗಗಳಲ್ಲಿ ಸಂಚಾರ ಮಾರ್ಪಾಡು ಮಾಡಿದ್ದಾರೆ. ಹತ್ತಕ್ಕೂ ಹೆಚ್ಚು ರಸ್ತೆಗಳಲ್ಲಿ ಸಂಚಾರ ಮಾರ್ಪಾಡು ಮಾಡಲಾಗಿದ್ದು, ಈ ರಸ್ತೆಗಳಲ್ಲಿ ಪಾರ್ಕಿಂಗ್ ನಿಷೇಧ ಕೂಡ ಮಾಡಲಾಗಿದೆ. ಇದರೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಾ ಭಾರಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಇದಕ್ಕಾಗಿ 20ಕ್ಕ ಹೆಚ್ಚು ಎಸಿಪಿ, 50 ಇನ್ಸ್‌ಪೆಕ್ಟರ್,150 ಸಬ್ ಇನ್ಸ್‌ಪೆಕ್ಟರ್, 800 ಕಾನ್ಸ್‌ಟೇಬಲ್, ಕೆಎಸ್ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.

5 ನೇ T20I ಗೆ ಭಾರತದ ಸಂಭಾವ್ಯ ಪ್ಲೇಯಿಂಗ್ XI: ಇಶಾನ್ ಕಿಶನ್, ರಿತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್ / ದೀಪಕ್ ಹೂಡಾ, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಮತ್ತು ಯುಜ್ವೇಂದ್ರ ಚಾಹಲ್.

Published On - 4:36 pm, Sun, 19 June 22