AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ

England vs Australia, 1st T20I: ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಟ್ರಾವಿಸ್ ಹೆಡ್ ಅವರ ಅರ್ಧಶತಕದ ನೆರವಿನಿಂದ 179 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಆತಿಥೇಯ ಇಂಗ್ಲೆಂಡ್ ತಂಡವು 19.2 ಓವರ್​ಗಳಲ್ಲಿ 151 ರನ್​ಗಳಿಸಿ ಆಲೌಟ್ ಆಗಿದೆ.

ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
Travis Head
ಝಾಹಿರ್ ಯೂಸುಫ್
|

Updated on:Sep 12, 2024 | 3:00 PM

Share

ಸೌಥಾಂಪ್ಟನ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ ಆರಂಭಿಕ ದಾಂಡಿಗ ಟ್ರಾವಿಸ್ ಹೆಡ್ ಅಬ್ಬರಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್ ಹಾಗೂ ಮ್ಯಾಥ್ಯೂ ಶಾರ್ಟ್ ಸ್ಪೋಟಕ ಆರಂಭ ಒದಗಿಸಿದ್ದರು. ಮೊದಲ ಓವರ್​ನಿಂದಲೇ ಅಬ್ಬರಿಸಲಾರಂಭಿಸಿದ ಹೆಡ್ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

ಪವರ್​ಪ್ಲೇನ 5ನೇ ಓವರ್​ನಲ್ಲಿ ಅಕ್ಷರಶಃ ಅಬ್ಬರಿಸಿದ ಟ್ರಾವಿಸ್ ಹೆಡ್ ಒಂದೇ ಓವರ್​ನಲ್ಲಿ 30 ರನ್ ಚಚ್ಚಿದರು. ಸ್ಯಾಮ್ ಕರನ್ ಎಸೆದ ಈ ಓವರ್​ನ ಮೊದಲೆರಡು ಎಸೆತಗಳಲ್ಲಿ ಹೆಡ್ ಬ್ಯಾಟ್​ನಿಂದ ಫೋರ್​ಗಳು ಮೂಡಿಬಂತು. ಆ ಬಳಿಕ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದರು. ಇದಾದ ಬಳಿಕ ಮತ್ತೊಂದು ಫೋರ್ ಬಾರಿಸುವ ಮೂಲಕ ಒಟ್ಟು 30 ರನ್​ ಕಲೆಹಾಕಿದರು. ಈ ಸಿಡಿಲಬ್ಬರದ ಬ್ಯಾಟಿಂಗ್​ ನೆರವಿನಿಂದ ಟ್ರಾವಿಸ್ ಹೆಡ್ ಕೇವಲ 19 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.

ಅಲ್ಲದೆ 23 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಟ್ರಾವಿಸ್ ಹೆಡ್ 59 ರನ್ ಬಾರಿಸಿದರು. ಹೆಡ್ ಅವರ ಈ ಸ್ಪೋಟಕ ಆರಂಭದ ಹೊರತಾಗಿಯೂ ಆಸ್ಟ್ರೇಲಿಯಾ ತಂಡವು 19.3 ಓವರ್​ಗಳಲ್ಲಿ 179 ರನ್​ಗಳಿಸಿ ಆಲೌಟ್ ಆಯಿತು.

ಟ್ರಾವಿಸ್ ಹೆಡ್ ವಿಡಿಯೋ ವೀಕ್ಷಿಸಿ:

180 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ವಿಲ್ ಜಾಕ್ಸ್ ಕೇವಲ 6 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಚೊಚ್ಚಲ ಪಂದ್ಯವಾಡಿದ ಜೋರ್ಡನ್ ಕಾಕ್ಸ್ ಅವರ ಇನಿಂಗ್ಸ್ 17 ರನ್​ಗಳಿಗೆ ಸೀಮಿತವಾಗಿತ್ತು. ಹಾಗೆಯೇ ನಾಯಕ ಫಿಲ್ ಸಾಲ್ಟ್ 20 ರನ್​ಗಳೊಂದಿಗೆ ಪೆವಿಲಿಯನ್​ಗೆ ಮರಳಿದ್ದರು.

ಪರಿಣಾಮ ಇಂಗ್ಲೆಂಡ್ ತಂಡವು 19.2 ಓವರ್​ಗಳಲ್ಲಿ 151 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಮ್ಯಾಚ್​ನಲ್ಲಿ ಆಸ್ಟ್ರೇಲಿಯಾ ತಂಡವು 28 ರನ್​ಗಳ ಜಯ ಸಾಧಿಸಿದೆ.

Published On - 10:33 am, Thu, 12 September 24

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ