Trent Boult: ಬ್ಯಾಟಿಂಗ್ ಮೂಲಕ ದಾಖಲೆ ನಿರ್ಮಿಸಿದ ಟ್ರೆಂಟ್ ಬೌಲ್ಟ್

| Updated By: ಝಾಹಿರ್ ಯೂಸುಫ್

Updated on: Jun 12, 2022 | 5:36 PM

ENG Vs NZ 2nd Test: ಈ ಪಂದ್ಯದಲ್ಲಿ ಡೇರಿಲ್​ ಮಿಚೆಲ್ ಅವರ ವೃತ್ತಿಜೀವನದ ಅತ್ಯುತ್ತಮ ಇನ್ನಿಂಗ್ಸ್ ನೆರವಿನಿಂದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 553 ರನ್ ಗಳಿಸಿತು. ಮಿಚೆಲ್ 318 ಎಸೆತಗಳಲ್ಲಿ 23 ಬೌಂಡರಿ ಹಾಗೂ 4 ಸಿಕ್ಸರ್ ಒಳಗೊಂಡ 190 ರನ್ ಗಳಿಸಿದರು.

Trent Boult: ಬ್ಯಾಟಿಂಗ್ ಮೂಲಕ ದಾಖಲೆ ನಿರ್ಮಿಸಿದ ಟ್ರೆಂಟ್ ಬೌಲ್ಟ್
trent boult
Follow us on

ನ್ಯೂಜಿಲೆಂಡ್‌ ತಂಡದ ಅನುಭವಿ ಎಡಗೈ ವೇಗದ ಬೌಲರ್ ಟ್ರೆಂಟ್ ಬೌಲ್ಟ್ (Trent Boult) ಇಂಗ್ಲೆಂಡ್ ವಿರುದ್ಧದ ಸರಣಿಯ ಎರಡನೇ ಟೆಸ್ಟ್ ಪಂದ್ಯದಲ್ಲಿ (ENG vs NZ 2 ನೇ ಟೆಸ್ಟ್) ವಿಶೇಷ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ವಿಶೇಷವೆಂದರೆ ಬೌಲ್ಟ್ ಈ ಅದ್ಭುತ ಸಾಧನೆ ಮಾಡಿರುವುದು ಬೌಲಿಂಗ್​ನಿಂದಲ್ಲ, ಬದಲಾಗಿ ಬ್ಯಾಟಿಂಗ್ ಮೂಲಕ ಎಂಬುದು ವಿಶೇಷ. ನಾಟಿಂಗ್ ಹ್ಯಾಮ್ ಟೆಸ್ಟ್ ನ ಮೊದಲ ಇನ್ನಿಂಗ್ಸ್ ನಲ್ಲಿ 11ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ ಬೌಲ್ಟ್​ 18 ಎಸೆತಗಳಲ್ಲಿ 4 ಬೌಂಡರಿಗಳ ನೆರವಿನಿಂದ 16 ರನ್ ಗಳಿಸಿ ಅಜೇಯರಾಗಿ ಉಳಿದರು. ಇದರೊಂದಿಗೆ ಬೌಲ್ಟ್ ಹೆಸರಿಗೆ ವಿಶೇಷ ದಾಖಲೆ ಸೇರ್ಪಡೆಯಾಯಿತು.

ಟೆಸ್ಟ್ ಕ್ರಿಕೆಟ್‌ನಲ್ಲಿ 11ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿರುವ ಟ್ರೆಂಟ್ ಬೌಲ್ಟ್ ಇದುವರೆಗೆ 69 ಟೆಸ್ಟ್ ಪಂದ್ಯಗಳಿಂದ ಒಟ್ಟು 623 ರನ್​ ಕಲೆಹಾಕಿದ್ದಾರೆ. ಈ ಮೂಲಕ ಕೊನೆಯ ಕ್ರಮಾಂಕದಲ್ಲಿ ಕಣಕ್ಕಿಳಿದು ಟೆಸ್ಟ್​ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಇದೀಗ ಅಗ್ರಸ್ಥಾನಕ್ಕೇರಿದ್ದಾರೆ. ಸದ್ಯ ಅಗ್ರಸ್ಥಾನದಲ್ಲಿರುವ ಮುತ್ತಯ್ಯ ಮುರಳೀಧರನ್ ಅವರೊಂದಿಗೆ ಜಂಟಿಯಾಗಿ ನಂಬರ್ 1 ಸ್ಥಾನ ಹಂಚಿಕೊಂಡಿದ್ದಾರೆ. ಮುತ್ತಯ್ಯ ಮುರಳೀಧರನ್ 87 ಟೆಸ್ಟ್ ಪಂದ್ಯಗಳ ಮೂಲಕ 623 ರನ್​ ಬಾರಿಸಿದ್ದಾರೆ. ಹಾಗೆಯೇ ಇಂಗ್ಲೆಂಡ್ ಬೌಲರ್ ಜೇಮ್ಸ್ ಆಂಡರ್ಸನ್ 609 ರನ್ ಮತ್ತು ಆಸ್ಟ್ರೇಲಿಯಾ ಮಾಜಿ ವೇಗಿ ಗ್ಲೆನ್ ಮೆಕ್‌ಗ್ರಾತ್ 603 ರನ್ ಕಲೆಹಾಕಿದ್ದಾರೆ. ಇನ್ನು 1 ರನ್​ ಗಳಿಸಿದ ಟೆಸ್ಟ್​ನಲ್ಲಿ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅತ್ಯಧಿಕ ರನ್​ ಬಾರಿಸಿದ ವಿಶ್ವ ದಾಖಲೆ ಟ್ರೆಂಟ್ ಬೌಲ್ಟ್ ಪಾಲಾಗಲಿದೆ.

ಇನ್ನು ಈ ಪಂದ್ಯದಲ್ಲಿ ಡೇರಿಲ್​ ಮಿಚೆಲ್ ಅವರ ವೃತ್ತಿಜೀವನದ ಅತ್ಯುತ್ತಮ ಇನ್ನಿಂಗ್ಸ್ ನೆರವಿನಿಂದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 553 ರನ್ ಗಳಿಸಿತು. ಮಿಚೆಲ್ 318 ಎಸೆತಗಳಲ್ಲಿ 23 ಬೌಂಡರಿ ಹಾಗೂ 4 ಸಿಕ್ಸರ್ ಒಳಗೊಂಡ 190 ರನ್ ಗಳಿಸಿದರು. ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಟಾಮ್ ಬ್ಲಂಡೆಲ್ 198 ಎಸೆತಗಳಲ್ಲಿ 14 ಬೌಂಡರಿ ಒಳಗೊಂಡ 106 ರನ್ ಬಾರಿಸಿದ್ದರು. ಇಂಗ್ಲೆಂಡ್ ಪರ ಜೇಮ್ಸ್ ಆಂಡರ್ಸನ್ 3 ವಿಕೆಟ್ ಪಡೆದರು.

ಇದನ್ನೂ ಓದಿ
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಎರಡನೇ ದಿನದಾಟದ ಅಂತ್ಯಕ್ಕೆ ಆತಿಥೇಯ ಇಂಗ್ಲೆಂಡ್ 1 ವಿಕೆಟ್ ಗೆ 90 ರನ್ ಗಳಿಸಿದೆ. ಓಲಿ ಪೋಪ್ 73 ಎಸೆತಗಳಲ್ಲಿ 6 ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 51 ರನ್ ಗಳಿಸಿ ಅಜೇಯರಾಗಿ ಉಳಿದಿದ್ದಾರೆ. ಹಾಗೆಯೇ ಆರಂಭಿಕ ಆಟಗಾರ ಅಲೆಕ್ಸ್ ಲೀಸ್ 77 ಎಸೆತಗಳಲ್ಲಿ 5 ಬೌಂಡರಿಗಳ ನೆರವಿನಿಂದ 34 ರನ್ ಗಳಿಸಿ ಕ್ರೀಸ್​ನಲ್ಲಿದ್ದಾರೆ. ಇನ್ನು ಜ್ಯಾಕ್ ಕ್ರೌಲಿ (4) ಯನ್ನು ಔಟ್ ಮಾಡುವಲ್ಲಿ ಟ್ರೆಂಟ್ ಬೌಲ್ಟ್ ಯಶಸ್ವಿಯಾಗಿದ್ದಾರೆ.

 

 

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

Published On - 2:51 pm, Sun, 12 June 22