AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ- ಲಂಕಾ ನಡುವೆ ತ್ರಿಕೋನ ಸರಣಿ ಫೈನಲ್; ಕೆಣಕ್ಕಿದವರ ವಿರುದ್ದ ಅಬ್ಬರಿಸ್ತಾರಾ ವೈಭವ್?

India A vs SL A Tri-Series Final: ತಿಲಕ್ ವರ್ಮಾ ನಾಯಕತ್ವದ ಭಾರತ ಎ ತಂಡ ಭಾನುವಾರ ಶ್ರೀಲಂಕಾ ಎ ವಿರುದ್ಧ ತ್ರಿಕೋನ ಸರಣಿ ಫೈನಲ್‌ನಲ್ಲಿ ಸೆಣಸಲಿದೆ. ಸರಣಿ ಸಮಬಲದಲ್ಲಿದ್ದು, ಇದು ನಿರ್ಣಾಯಕ ಪಂದ್ಯವಾಗಿದೆ. ವೈಭವ್ ಸೂರ್ಯವಂಶಿ ಮತ್ತು ಲಂಕಾ ಆಟಗಾರರ ನಡುವಿನ ಹಿಂದಿನ ವಾಗ್ವಾದವು ಪಂದ್ಯಕ್ಕೆ ಹೆಚ್ಚಿನ ಕುತೂಹಲ ಮೂಡಿಸಿದೆ. ದಂಬುಲ್ಲಾದಲ್ಲಿ ನಡೆಯುವ ಈ ಪಂದ್ಯ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದ್ದು, ಟ್ರೋಫಿಗಾಗಿ ಉಭಯ ತಂಡಗಳ ನಡುವೆ ರೋಚಕ ಹೋರಾಟ ನಿರೀಕ್ಷಿಸಲಾಗಿದೆ.

ಭಾರತ- ಲಂಕಾ ನಡುವೆ ತ್ರಿಕೋನ ಸರಣಿ ಫೈನಲ್; ಕೆಣಕ್ಕಿದವರ ವಿರುದ್ದ ಅಬ್ಬರಿಸ್ತಾರಾ ವೈಭವ್?
Ind A Vs Sl A
ಪೃಥ್ವಿಶಂಕರ
|

Updated on: Jun 20, 2026 | 10:34 PM

Share

ತಿಲಕ್ ವರ್ಮಾ ನಾಯಕತ್ವದ ಭಾರತ ಎ ತಂಡವು ಭಾನುವಾರ ನಡೆಯಲಿರುವ ಏಕದಿನ ತ್ರಿಕೋನ ಸರಣಿಯ ಫೈನಲ್ ಪಂದ್ಯದಲ್ಲಿ ಆತಿಥೇಯ ಶ್ರೀಲಂಕಾ ಎ (India A vs Sri Lanka A) ತಂಡವನ್ನು ಎದುರಿಸುತ್ತಿದೆ. ಈ ಸರಣಿಯಲ್ಲಿ ಉಭಯ ತಂಡಗಳು ಮುಖಾಮುಖಿಯಾಗುತ್ತಿರುವುದು ಇದು ಮೂರನೇ ಬಾರಿ. ಮೊದಲ ಮುಖಾಮುಖಿಯಲ್ಲಿ ಭಾರತ ಗೆದ್ದಿದ್ದರೆ, ಎರಡನೇ ಮುಖಾಮುಖಿಯಲ್ಲಿ ಶ್ರೀಲಂಕಾ ತಂಡ ಗೆಲುವು ಸಾಧಿಸಿತ್ತು. ಇದೀಗ ಮೂರನೇ ಮುಖಾಮುಖಿಯಲ್ಲಿ ಗೆದ್ದ ತಂಡಕ್ಕೆ ಟ್ರೋಫಿ ಕೂಡ ಸಿಗಲಿದೆ. ಇದರ ಜೊತೆಗೆ ಕಳೆದ ಮುಖಾಮುಖಿಯಲ್ಲಿ ವೈಭವ್ ಸೂರ್ಯವಂಶಿ (Vaibhav Sooryavanshi) ಹಾಗೂ ಶ್ರೀಲಂಕಾದ ಆಟಗಾರರ ನಡುವೆ ಏರ್ಪಟ್ಟಿದ್ದ ವಾಗ್ವಾದದಿಂದಾಗಿ ದೊಡ್ಡ ವಿವಾದ ಹುಟ್ಟಕೊಂಡಿತ್ತು. ಹೀಗಾಗಿ ತನ್ನನ್ನು ಕೆಣಕ್ಕಿದ್ದ ಲಂಕಾ ಆಟಗಾರರು ವಿರುದ್ಧ ವೈಭವ್ ಯಾವ ರೀತಿಯ ಪ್ರದರ್ಶನ ನೀಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ಯಾವಾಗ ನಡೆಯಲಿದೆ?

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ಜೂನ್ 21 ರ ಭಾನುವಾರದಂದು ನಡೆಯಲಿದೆ.

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ದಂಬುಲ್ಲಾದಲ್ಲಿ ನಡೆಯಲಿದೆ.

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯ ಭಾರತೀಯ ಕಾಲಮಾನ ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿದೆ.

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ ಎ ಹಾಗೂ ಶ್ರೀಲಂಕಾ ಎ ನಡುವಿನ ತ್ರಿಕೋನ ಸರಣಿಯ ಫೈನಲ್ ಪಂದ್ಯವನ್ನು ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನ ವಿವಿದ ಚಾನೆಲ್​ಗಳಲ್ಲಿ ವೀಕ್ಷಿಸಬಹುದು.

ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ ಎಂದ ಟೀಂ ಇಂಡಿಯಾದ ಮಾಜಿ ನಾಯಕ

ಉಭಯ ತಂಡಗಳು

ಭಾರತ ಎ ತಂಡ: ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ(ಸಿ), ಕುಮಾರ್ ಕುಶಾಗ್ರಾ(ಡಬ್ಲ್ಯೂ), ಸೂರ್ಯಾಂಶ್ ಶೆಡ್ಗೆ, ನಿಶಾಂತ್ ಸಿಂಧು, ವಿಪ್ರಜ್ ನಿಗಮ್, ಅನುಕುಲ್ ರಾಯ್, ಅನ್ಶುಲ್ ಕಾಂಬೋಜ್, ಯಶ್ ಠಾಕೂರ್, ಆಯುಷ್ ಬದೋನಿ, ಪ್ರಭ್‌ಸಿಮ್ರನ್ ಸಿಂಗ್, ಯುದ್ಧವೀರ್ ಸಿಂಗ್ ಚರಕ್, ಅರ್ಷದ್ ಖಾನ್, ಅಶೋಕ್ ಶರ್ಮಾ.

ಶ್ರೀಲಂಕಾ ಎ ತಂಡ: ನಿರೋಶನ್ ಡಿಕ್ವೆಲ್ಲಾ(ಡಬ್ಲ್ಯೂ), ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಸದೀರ ಸಮರವಿಕ್ರಮ, ಸಹನ್ ಅರಾಚ್ಚಿಗೆ(ಸಿ), ಅಹಾನ್ ವಿಕ್ರಮಸಿಂಘೆ, ರವಿಂದು ಫೆರ್ನಾಂಡೊ, ವನುಜಾ ಸಹನ್, ವಿಜಯಕಾಂತ್ ವಿಯಸ್ಕಂತ್, ದುಲಾಜ್ ಸಮುದಿತ, ಕುಗತಸ್ ಮಾಥುಲನ್, ವಿಶೇನ್ ಹಲಂಬಗೆ, ಗರುಕ ಸಂಕೇತ್, ಚಾಮಿಕ ಗುಣಶೇಖರ, ಮೊಹಮ್ಮದ್ ಶಿರಾಜ್, ಚಾಮಿಕ ಕರುಣಾರತ್ನ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ