ಟೀಮ್ ಇಂಡಿಯಾಗೆ 2 ಗುಡ್ ನ್ಯೂಸ್, 1 ಬ್ಯಾಡ್ ನ್ಯೂಸ್
T20 World Cup 2026: ಟಿ20 ವಿಶ್ವಕಪ್ 2026ರ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಅಭಿಷೇಕ್ ಶರ್ಮಾ ಅಲಭ್ಯರಾಗುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಟೀಮ್ ಇಂಡಿಯಾದ ಯುವ ದಾಂಡಿಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ಮುಂದಿನ ಪಂದ್ಯದಲ್ಲಿ ಕಣಕ್ಕಿಳಿಯುವುದು ಡೌಟ್.

T20 World Cup 2026: ಟಿ20 ವಿಶ್ವಕಪ್ನಲ್ಲಿ ಜಯದೊಂದಿಗೆ ಶುಭಾರಂಭ ಮಾಡಿರುವ ಭಾರತ ತಂಡವು ತನ್ನ ಮುಂದಿನ ಪಂದ್ಯದಲ್ಲಿ ನಮೀಬಿಯ ತಂಡವನ್ನು ಎದುರಿಸಲಿದೆ. ಫೆಬ್ರವರಿ 12 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಕಡೆಯಿಂದ 2 ಗುಡ್ ನ್ಯೂಸ್ ಸಿಕ್ಕಿದೆ. ಇದರ ಬೆನ್ನಲ್ಲೇ ಒಂದು ಬ್ಯಾಡ್ ಕೂಡ ಅಪ್ಪಳಿಸಿದೆ.
ಗುಡ್ ನ್ಯೂಸ್:
- ಯುಎಸ್ಎ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ನಮೀಬಿಯ ವಿರುದ್ಧ ಕಣಕ್ಕಿಳಿಯುವುದು ಖಚಿತವಾಗಿದೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯಲ್ಲಿ ಬುಮ್ರಾ ಕಣಕ್ಕಿಳಿದಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಜ್ವರ. ಇದೀಗ ಜ್ವರದಿಂದ ಸಂಪೂರ್ಣ ಚೇತರಿಸಿಕೊಂಡಿರುವ ಬುಮ್ರಾ ಅಭ್ಯಾಸವನ್ನು ಆರಂಭಿಸಿದ್ದಾರೆ. ಹೀಗಾಗಿ ನಮೀಬಿಯ ವಿರುದ್ಧ ಅವರು ಕಣಕ್ಕಿಳಿಯುವುದು ಖಚಿತ.
- ಮುಂಬೈನಲ್ಲಿ ನಡೆದ ಯುಎಸ್ಎ ವಿರುದ್ಧದ ಪಂದ್ಯದ ವೇಳೆ ಟೀಮ್ ಇಂಡಿಯಾ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಮುಖ್ಯ ಕಾರಣ ಫಿಟ್ನೆಸ್ ಸಮಸ್ಯೆ. ಪೆಕ್ಕೆಲುಬಿನ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಸುಂದರ್ ಇದೀಗ ಸಂಪೂರ್ಣ ಫಿಟ್ನೆಸ್ನೊಂದಿಗೆ ದೆಹಲಿಯಲ್ಲಿ ಭಾರತ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ನಮೀಬಿಯ ವಿರುದ್ಧದ ಪಂದ್ಯದ ಆಯ್ಕೆಗೆ ಅವರು ಸಹ ಲಭ್ಯರಿರಲಿದ್ದಾರೆ.
ಬ್ಯಾಡ್ ನ್ಯೂಸ್:
- ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಹೊಟ್ಟೆ ಸೋಂಕಿನಿಂದ ಬಳಲುತ್ತಿರುವ ಅವರು ದೆಹಲಿಯ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹೀಗಾಗಿ ಟೀಮ್ ಇಂಡಿಯಾದ ಮುಂದಿನ ಪಂದ್ಯಕ್ಕೆ ಅಲಭ್ಯರಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಅಭಿಷೇಕ್ ಶರ್ಮಾ ನಮೀಬಿಯ ವಿರುದ್ಧದ ಪಂದ್ಯದಿಂದ ಹೊರಗುಳಿದರೆ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯಬಹುದು. ಅದರಂತೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಇನಿಂಗ್ಸ್ ಆರಂಭಿಸುವ ಸಾಧ್ಯತೆ ಹೆಚ್ಚಿದೆ.
ಇದಾಗ್ಯೂ ಫೆಬ್ರವರಿ 15 ರಂದು ನಡೆಯಲಿರುವ ಮೂರನೇ ಪಂದ್ಯಕ್ಕೂ ಮುನ್ನ ಅಭಿಷೇಕ್ ಶರ್ಮಾ ಸಂಪೂರ್ಣವಾಗಿ ಚೇತರಿಸಿಕೊಳ್ಳುವ ನಿರೀಕ್ಷೆಯಿದೆ. ಹೀಗಾಗಿ ಪಾಕ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಹಾಗೂ ಇಶಾನ್ ಕಿಶನ್ ಜೊತೆಯಾಗಿ ಮತ್ತೆ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.
ಇದನ್ನೂ ಓದಿ: IPL 2026: ಐಪಿಎಲ್ಗೆ ‘ಯುಪಿ ವಾರಿಯರ್ಸ್’ ತಂಡ ಎಂಟ್ರಿ?
ಟಿ20 ವಿಶ್ವಕಪ್ 2026 ಭಾರತದ ವೇಳಾಪಟ್ಟಿ:
- ಫೆಬ್ರವರಿ 7: ಭಾರತ vs ಯುಎಸ್ಎ- (ಮುಂಬೈ)- ಭಾರತ ತಂಡಕ್ಕೆ 29 ರನ್ಗಳ ಜಯ
- ಫೆಬ್ರವರಿ 12: ಭಾರತ vs ನಮೀಬಿಯಾ- (ದೆಹಲಿ)
- ಫೆಬ್ರವರಿ 15: ಭಾರತ vs ಪಾಕಿಸ್ತಾನ್- (ಕೊಲಂಬೊ)
- ಫೆಬ್ರವರಿ 18: ಭಾರತ vs ನೆದರ್ಲೆಂಡ್ಸ್- (ಅಹಮದಾಬಾದ್)
