AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 Asia Cup 2023: ಅಫ್ಘಾನ್ ವಿರುದ್ಧ ಸುಲಭವಾಗಿ ಗೆದ್ದ ಭಾರತ; ಮೊದಲ ಪಂದ್ಯ ಗೆದ್ದ ಪಾಕ್

U19 Asia Cup 2023: ನಿನ್ನೆಯಿಂದ ಅಂದರೆ ಡಿಸೆಂಬರ್ 08 ರಿಂದ ಯುಎಇಯಲ್ಲಿ ಆರಂಭವಾಗಿರುವ 19 ವರ್ಷದೊಳಗಿನವರ ಏಷ್ಯಾಕಪ್​ನಲ್ಲಿ ತನ್ನ ಮೊದಲ ಪಂದ್ಯವನ್ನಾಡಿದ ಟೀಂ ಇಂಡಿಯಾ, ಎದುರಾಳಿ ಅಫ್ಘಾನಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

U19 Asia Cup 2023: ಅಫ್ಘಾನ್ ವಿರುದ್ಧ ಸುಲಭವಾಗಿ ಗೆದ್ದ ಭಾರತ; ಮೊದಲ ಪಂದ್ಯ ಗೆದ್ದ ಪಾಕ್
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on:Dec 09, 2023 | 11:36 AM

ನಿನ್ನೆಯಿಂದ ಅಂದರೆ ಡಿಸೆಂಬರ್ 08 ರಿಂದ ಯುಎಇಯಲ್ಲಿ ಆರಂಭವಾಗಿರುವ 19 ವರ್ಷದೊಳಗಿನವರ ಏಷ್ಯಾಕಪ್​ನಲ್ಲಿ (ACC U19 Asia Cup 2023) ತನ್ನ ಮೊದಲ ಪಂದ್ಯವನ್ನಾಡಿದ ಟೀಂ ಇಂಡಿಯಾ, ಎದುರಾಳಿ ಅಫ್ಘಾನಿಸ್ತಾನವನ್ನು 7 ವಿಕೆಟ್‌ಗಳಿಂದ (India beat Afghanistan) ಸೋಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಟೀಂ ಇಂಡಿಯಾ ಪರ ಅದ್ಭುತ ಪ್ರದರ್ಶನ ನೀಡಿದ ಅರ್ಶಿನ್ ಕುಲಕರ್ಣಿ (Arshin Kulkarni) ಮತ್ತು ಮುಶೀರ್ ಖಾನ್ (Musheer Khan ) ಅವರ ಆಲ್ ರೌಂಡ್ ಪ್ರದರ್ಶನದಿಂದಾಗಿ ಟೀಂ ಇಂಡಿಯಾ ಸುಲಭ ಜಯ ದಾಖಲಿಸಿತು. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡ 173 ರನ್​ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಭಾರತ ಕೇವಲ 3 ವಿಕೆಟ್ ಕಳೆದುಕೊಂಡು ಗೆಲುವಿನ ದಡ ಮುಟ್ಟಿತು.

ಭಾರತದ ಅದ್ಭುತ ಬೌಲಿಂಗ್

ದುಬೈನಲ್ಲಿರುವ ಐಸಿಸಿ ಅಕಾಡೆಮಿಯಲ್ಲಿ ಟೀಂ ಇಂಡಿಯಾ ತನ್ನ ಗುಂಪಿನ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು ಎದುರಿಸಿತು. ಈ ಟೂರ್ನಿಯಲ್ಲಿ ಭಾರತ ಅಂಡರ್-19 ತಂಡದ ನಾಯಕರಾಗಿರುವ ಉದಯ್ ಸಹರಾನ್ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ನಾಯಕನ ಆಯ್ಕೆಯನ್ನು ಸಮರ್ಥಿಸಿಕೊಂಡ ತಂಡದ ಬೌಲರ್‌ಗಳು, ಕೇವಲ 130 ರನ್​ಗಳೊಳಗೆ ಆಫ್ಘಾನಿಸ್ತಾನ ತಂಡದ ಅರ್ಧದಷ್ಟು ಆಟಗಾರರನ್ನು ಪೆವಿಲಿಯನ್‌ಗೆ ಕಳುಹಿಸಿದರು. ಇಲ್ಲಿಂದ ಅಫ್ಘಾನ್ ತಂಡಕ್ಕೆ ಪಂದ್ಯದಲ್ಲಿ ಸ್ಪರ್ಧಾತ್ಮಕ ಸ್ಕೋರ್ ತಲುಪುವುದು ತುಂಬಾ ಕಷ್ಟಕರವಾಯಿತು. ಹೀಗಾಗಿ ಇಡೀ ತಂಡವು 173 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಬೌಲಿಂಗ್​ನಲ್ಲಿ ಮಿಂಚಿದ ರಾಜ್ ಲಿಂಬಾನಿ ಮತ್ತು ಅರ್ಶಿನ್ ಕುಲಕರ್ಣಿ ತಲಾ 3 ವಿಕೆಟ್ ಪಡೆದರೆ, ನಮನ್ ತಿವಾರಿ ಕೂಡ 2 ವಿಕೆಟ್ ಪಡೆದರು.

ಅಂಡರ್-19 ಏಷ್ಯಾಕಪ್​ಗೆ ಟೀಂ ಇಂಡಿಯಾ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್

ಟೀಂ ಇಂಡಿಯಾಗೆ ಸುಲಭ ಜಯ

ಇದಕ್ಕುತ್ತರವಾಗಿ ಟೀಂ ಇಂಡಿಯಾ ಕಳಪೆ ಆರಂಭ ಪಡೆದು ಕೇವಲ 32 ರನ್ ಗಳಿಸುವಷ್ಟರಲ್ಲಿ ಎರಡು ವಿಕೆಟ್ ಕಳೆದುಕೊಂಡಿತು. ನಾಯಕ ಸಹರನ್ ಕೂಡ ಹೆಚ್ಚು ಹೊತ್ತು ಮೈದಾನದಲ್ಲಿ ನಿಲ್ಲಲಿಲ್ಲ. ಹೀಗಾಗಿ ತಂಡ 20 ನೇ ಓವರ್‌ ಆಗುವಷ್ಟರಲ್ಲಿ 3 ವಿಕೆಟ್‌ ಕಳೆದುಕೊಂಡು 76 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇಲ್ಲಿಂದ ಆರಂಭಿಕ ಆಟಗಾರ ಅರ್ಶಿನ್ ಕುಲಕರ್ಣಿಗೆ ಮುಶೀರ್ ಖಾನ್ ಉತ್ತಮ ಸಾಥ್ ನೀಡಿದರು. ಇವರಿಬ್ಬರೂ ಮುಂದಿನ 18 ಓವರ್‌ಗಳವರೆಗೆ ಆಟವಾಡಿ ತಂಡವನ್ನು 174 ರನ್‌ಗಳ ಗುರಿಯತ್ತ ಕೊಂಡೊಯ್ದರು. ಅರ್ಶಿನ್ 70 ರನ್ ಮತ್ತು ಮುಶೀರ್ 48 ರನ್ ಗಳಿಸಿ ಅಜೇಯರಾಗಿ ಮರಳಿದರು.

ಈ ಗೆಲುವಿನೊಂದಿಗೆ ಭಾರತ ತಂಡ 2 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಇದೀಗ ಟೂರ್ನಿಯಲ್ಲಿ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯವನ್ನು ಡಿಸೆಂಬರ್ 10 ರಂದು ಪಾಕಿಸ್ತಾನದ ಅಂಡರ್-19 ತಂಡದ ವಿರುದ್ಧ ಆಡಬೇಕಿದೆ.

ಮೊದಲ ಪಂದ್ಯ ಗೆದ್ದ ಪಾಕ್

ಏತನ್ಮಧ್ಯೆ, ಪಾಕಿಸ್ತಾನ ತಂಡ ಕೂಡ ದಿನದ ಇನ್ನೊಂದು ಪಂದ್ಯದಲ್ಲಿ ನೇಪಾಳ ವಿರುದ್ಧ ಏಳು ವಿಕೆಟ್‌ಗಳ ಸುಲಭ ಜಯ ದಾಖಲಿಸಿತು. ತಂಡದ 17ರ ಹರೆಯದ ಬಲಗೈ ವೇಗಿ ಮೊಹಮ್ಮದ್ ಜೀಶಾನ್ ಕೇವಲ 19ರನ್ ನೀಡಿ ಆರು ವಿಕೆಟ್ ಪಡೆದು ನೇಪಾಳವನ್ನು ಕೇವಲ 152 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು. ನಂತರ ನಾಯಕ ಸಾದ್ ಬೇಗ್ ಮತ್ತು ಅಗ್ರ ಕ್ರಮಾಂಕದ ಬ್ಯಾಟರ್ ಅಜಾನ್ ಅವೈಸ್ ತಲಾ ಅರ್ಧಶತಕಗಳನ್ನು ದಾಖಲಿಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:15 am, Sat, 9 December 23

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ