AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಡರ್-19 ಏಷ್ಯಾಕಪ್ ವೇಳಾಪಟ್ಟಿ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್

ಓಮನ್‌ನಲ್ಲಿ ನವೆಂಬರ್ 8 ರಿಂದ ನಡೆಯಲಿರುವ ಅಂಡರ್-19 ಏಷ್ಯಾಕಪ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಭಾಗವಹಿಸಲಿವೆ, ನವೆಂಬರ್ 8 ರಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಭಾರತ ತಂಡ ಇದುವರೆಗೆ 7 ಬಾರಿ ಪ್ರಶಸ್ತಿ ಗೆದ್ದು ಹೆಚ್ಚು ಬಾರಿ ಚಾಂಪಿಯನ್ ಆಗಿದೆ, ಆದರೆ ಕಳೆದ ಎರಡು ಫೈನಲ್‌ಗಳಲ್ಲಿ ಸೋತಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ನಿರೀಕ್ಷೆಯಲ್ಲಿದೆ.

ಅಂಡರ್-19 ಏಷ್ಯಾಕಪ್ ವೇಳಾಪಟ್ಟಿ ಪ್ರಕಟ; ಈ ದಿನದಂದು ಭಾರತ- ಪಾಕ್ ಫೈಟ್
ಅಂಡರ್-19 ತಂಡ, (ಪ್ರಾತಿನಿಧಿಕ ಚಿತ್ರ)Image Credit source: ACC X
ಪೃಥ್ವಿಶಂಕರ
|

Updated on: Oct 09, 2026 | 2:48 PM

Share

ನವೆಂಬರ್ 8 ರಿಂದ ಓಮನ್‌ನಲ್ಲಿ ನಡೆಯಲಿರುವ ಅಂಡರ್-19 ಏಷ್ಯಾಕಪ್ ವೇಳಾಪಟ್ಟಿಯನ್ನು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪ್ರಕಟಿಸಿದೆ. ಈ ಪಂದ್ಯಾವಳಿಯಲ್ಲಿ ಎಂಟು ತಂಡಗಳು ಭಾಗವಹಿಸಲಿದ್ದು, ಈ 8 ತಂಡಗಳ ಪಟ್ಟಿಯಲ್ಲಿ ಭಾರತ, ಶ್ರೀಲಂಕಾ, ಮಲೇಷ್ಯಾ, ಯುಎಇ, ಪಾಕಿಸ್ತಾನ, ಅಫ್ಘಾನಿಸ್ತಾನ, ನೇಪಾಳ ಮತ್ತು ಬಾಂಗ್ಲಾದೇಶ ತಂಡಗಳು ಸೇರಿವೆ. ಲೀಗ್ ಹಂತದಲ್ಲಿಯೇ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಈ ಹೈವೋಲ್ಟೇಜ್ ಕದನ ನವೆಂಬರ್ 8 ರಂದು ನಡೆಯಲಿದೆ. ಮೊದಲ ಪಂದ್ಯ ಶ್ರೀಲಂಕಾ ಮತ್ತು ಮಲೇಷ್ಯಾ ನಡುವೆ ನಡೆಯಲಿದ್ದು, ಇದರೊಂದಿಗೆ ಪಂದ್ಯಾವಳಿಗೆ ಚಾಲನೆ ಸಿಗಲಿದೆ.

19 ವರ್ಷದೊಳಗಿನವರ ಏಷ್ಯಾಕಪ್ ವೇಳಾಪಟ್ಟಿ

  • ನವೆಂಬರ್ 5: ಶ್ರೀಲಂಕಾ vs ಮಲೇಷ್ಯಾ, ಬಾಂಗ್ಲಾದೇಶ vs ಅಫ್ಘಾನಿಸ್ತಾನ
  • ನವೆಂಬರ್ 6: ಪಾಕಿಸ್ತಾನ vs ಯುಎಇ, ಭಾರತ vs ನೇಪಾಳ
  • ನವೆಂಬರ್ 7: ಅಫ್ಘಾನಿಸ್ತಾನ vs ಮಲೇಷ್ಯಾ, ಶ್ರೀಲಂಕಾ vs ಬಾಂಗ್ಲಾದೇಶ
  • ನವೆಂಬರ್ 8: ಯುಎಇ vs ನೇಪಾಳ, ಭಾರತ vs ಪಾಕಿಸ್ತಾನ
  • ನವೆಂಬರ್ 9: ಬಾಂಗ್ಲಾದೇಶ vs ಮಲೇಷ್ಯಾ, ಶ್ರೀಲಂಕಾ vs ಅಫ್ಘಾನಿಸ್ತಾನ
  • ನವೆಂಬರ್ 10: ಭಾರತ vs ಯುಎಇ, ಪಾಕಿಸ್ತಾನ vs ನೇಪಾಳ
  • ನವೆಂಬರ್ 12: ಸೆಮಿಫೈನಲ್‌ ಸುತ್ತು; A1 vs B2, B1 vs A2
  • ನವೆಂಬರ್ 14: ಫೈನಲ್

ಅಂಡರ್-19 ಏಷ್ಯಾಕಪ್‌ನಲ್ಲಿ ಭಾರತದ ಪ್ರದರ್ಶನ

ಅಂಡರ್-19 ಏಷ್ಯಾಕಪ್ ಭಾರತ ಯುವ ಪಡೆಯ ಪ್ರದರ್ಶನದ ಬಗ್ಗೆ ಹೇಳುವುದಾದರೆ.. ಕಳೆದ ಆವೃತ್ತಿಯಲ್ಲಿ ಅಂದರೆ 2026ರ ಏಷ್ಯಾಕಪ್‌ ಫೈನಲ್‌ನಲ್ಲಿ ಭಾರತ ತಂಡ ಪಾಕಿಸ್ತಾನದ ವಿರುದ್ಧ ಸೋತಿತು. ಆ ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 50 ಓವರ್‌ಗಳಲ್ಲಿ 347 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ತಂಡ ಕೇವಲ 156 ರನ್‌ಗಳಿಗೆ ಆಲೌಟ್ ಆಯಿತು. ಹೀಗಾಗಿ ಪಾಕಿಸ್ತಾನ ಪಂದ್ಯವನ್ನು 191 ರನ್‌ಗಳಿಂದ ಗೆದ್ದು, ಟ್ರೋಫಿ ಎತ್ತಿಹಿಡಿದಿತ್ತು.

ಭಾರತ ತಂಡ ಸತತ ಎರಡು ಅಂಡರ್-19 ಏಷ್ಯಾಕಪ್ ಫೈನಲ್‌ಗಳಲ್ಲಿ ಸೋಲು ಕಂಡಿದೆ. ಇನ್ನು ಭಾರತ ಸತತ ಮೂರು ಬಾರಿ ಈ ಟ್ರೋಫಿ ಗೆದ್ದಿದ್ದು, ಕೊನೆಯದಾಗಿ 2021 ರಲ್ಲಿ ಅಂಡರ್-19 ಏಷ್ಯಾಕಪ್ ಚಾಂಪಿಯನ್ ಆಗಿತ್ತು. ಹಾಗೆಯೇ ಟೀಂ ಇಂಡಿಯಾ 2018, 2019 ಮತ್ತು 2021 ರಲ್ಲಿ ಚಾಂಪಿಯನ್ ಆಗಿದ್ದು, ಇದುವರೆಗೆ 7 ಬಾರಿ ಪ್ರಶಸ್ತಿ ಗೆಲ್ಲುವ ಮೂಲಕ ಅತಿ ಹೆಚ್ಚು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ತಂಡವೆಂಬ ದಾಖಲೆ ಬರೆದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More