AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 Asia Cup: ಕ್ರಿಸ್ ಮಸ್ ದಿನ ಭಾರತ-ಪಾಕ್ ಮುಖಾಮುಖಿ! ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ

U19 Asia Cup: ಅಂಡರ್-19 ಏಷ್ಯಾಕಪ್‌ನಲ್ಲಿ ಭಾರತ ತಂಡ ಅತಿ ಹೆಚ್ಚು ಪ್ರಶಸ್ತಿ ಗೆದ್ದಿದೆ. ಇಲ್ಲಿಯವರೆಗೆ ತಂಡ 7 ಬಾರಿ ಏಷ್ಯಾಕಪ್ ಗೆದ್ದಿದೆ. ಈ ಬಾರಿ ತಂಡದ ಕಮಾಂಡ್ ಯಶ್ ಧುಲ್​ಗೆ ನೀಡಲಾಗಿದೆ.

U19 Asia Cup: ಕ್ರಿಸ್ ಮಸ್ ದಿನ ಭಾರತ-ಪಾಕ್ ಮುಖಾಮುಖಿ! ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿ ಹೀಗಿದೆ
ಭಾರತ ತಂಡ
TV9 Web
| Edited By: |

Updated on: Dec 11, 2021 | 4:04 PM

Share

BCCI ಯ ಜೂನಿಯರ್ ಆಯ್ಕೆ ಸಮಿತಿಯು UAE ನಲ್ಲಿ ಡಿಸೆಂಬರ್ 23 ರಿಂದ ಪ್ರಾರಂಭವಾಗುವ ಅಂಡರ್-19 ಏಷ್ಯಾ ಕಪ್‌ಗಾಗಿ ತಂಡವನ್ನು ಪ್ರಕಟಿಸಿದೆ. ಟಿ20 ವಿಶ್ವಕಪ್ ಬಳಿಕ ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯವನ್ನು ಅಭಿಮಾನಿಗಳು ಕಣ್ತುಂಬಿಕೊಳ್ಳಲಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಭಾರತ ಮೊದಲ ಬಾರಿಗೆ ಪಾಕಿಸ್ತಾನ ವಿರುದ್ಧ ಸೋತಿತು, ನಂತರ ಅದು ಪಂದ್ಯಾವಳಿಯಿಂದಲೇ ಹೊರಬಿತ್ತು. ಹೀಗಿರುವಾಗ ಜೂನಿಯರ್ ತಂಡ ಸೇಡು ತೀರಿಸಿಕೊಳ್ಳಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ಯುಎಇಯಲ್ಲಿ ನಡೆಯುತ್ತಿರುವ ಈ ಏಷ್ಯಾಕಪ್‌ನಲ್ಲಿ ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ನೇಪಾಳ, ಅಫ್ಘಾನಿಸ್ತಾನ, ಕುವೈತ್ ಮತ್ತು ಯುಎಇ ತಂಡಗಳು ಭಾಗವಹಿಸುತ್ತಿವೆ. ಈ 8 ತಂಡಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ. ಭಾರತ, ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಯುಎಇ ತಂಡಗಳು ಎ ಗುಂಪಿನಲ್ಲಿದ್ದು, ಎರಡನೇ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ, ಕುವೈತ್ ಮತ್ತು ನೇಪಾಳ ತಂಡಗಳು ಸೇರಿವೆ. ಪ್ರತಿ ಗುಂಪಿನಿಂದ ಎರಡು ತಂಡಗಳು ಮುಂದಿನ ಸುತ್ತಿಗೆ ಮುನ್ನಡೆಯುತ್ತವೆ, ಅದರ ನಡುವೆ ಸೆಮಿಫೈನಲ್ ಪಂದ್ಯಗಳನ್ನು ಆಡಲಾಗುತ್ತದೆ.

ಭಾರತವು ಡಿಸೆಂಬರ್ 23 ರಿಂದ ಅಭಿಯಾನವನ್ನು ಪ್ರಾರಂಭಿಸುತ್ತದೆ 19 ವರ್ಷದೊಳಗಿನವರ ವಿಶ್ವಕಪ್ ಮುಂದಿನ ವರ್ಷ ಜನವರಿ-ಫೆಬ್ರವರಿ ತಿಂಗಳಲ್ಲಿ ನಡೆಯಲಿದೆ. ಅಂತಹ ಪರಿಸ್ಥಿತಿಯಲ್ಲಿ, ಈ ಪಂದ್ಯಾವಳಿಯು ಎಲ್ಲಾ ತಂಡಗಳಿಗೆ ಬಹಳ ಮುಖ್ಯವಾಗಿದೆ, ಇದರಿಂದಾಗಿ ತಂಡಗಳು ತಮ್ಮ ಸಂಯೋಜನೆ ಮತ್ತು ಸಿದ್ಧತೆಯನ್ನು ಪರೀಕ್ಷಿಸಬಹುದು. ಭಾರತ ತನ್ನ ಅಭಿಯಾನವನ್ನು ಡಿಸೆಂಬರ್ 23 ರಂದು ಪ್ರಾರಂಭಿಸಲಿದೆ. ಅದೇ ಸಮಯದಲ್ಲಿ, ಪಾಕಿಸ್ತಾನದ ವಿರುದ್ಧದ ಹೈ ವೋಲ್ಟೇಜ್ ಪಂದ್ಯವು ಡಿಸೆಂಬರ್ 25 ರಂದು ನಡೆಯಲಿದೆ. ಟೂರ್ನಿಯ ಅಂತಿಮ ಪಂದ್ಯ ಜನವರಿ 1ರಂದು ನಡೆಯಲಿದೆ.

ಪಂದ್ಯಾವಳಿಯ ಸಂಪೂರ್ಣ ವೇಳಾಪಟ್ಟಿ 23 ಡಿಸೆಂಬರ್ – ಭಾರತ vs ಯುಎಇ

ಪಾಕಿಸ್ತಾನ vs ಅಫ್ಘಾನಿಸ್ತಾನ

ಬಾಂಗ್ಲಾದೇಶ vs ನೇಪಾಳ

24 ಡಿಸೆಂಬರ್ – ಶ್ರೀಲಂಕಾ vs ಕುವೈತ್

ಡಿಸೆಂಬರ್ 25 – ಭಾರತ vs ಪಾಕಿಸ್ತಾನ

ಬಾಂಗ್ಲಾದೇಶ vs ಕುವೈತ್

ಅಫ್ಘಾನಿಸ್ತಾನ vs ಯುಎಇ

ಡಿಸೆಂಬರ್ 26 – ಶ್ರೀಲಂಕಾ vs ನೇಪಾಳ

ಡಿಸೆಂಬರ್ 27 – ಭಾರತ vs ಅಫ್ಘಾನಿಸ್ತಾನ

ಪಾಕಿಸ್ತಾನ vs ಯುಎಇ

ಡಿಸೆಂಬರ್ 28 – ನೇಪಾಳ vs ಕುವೈತ್

ಶ್ರೀಲಂಕಾ vs ಬಾಂಗ್ಲಾದೇಶ

30 ಡಿಸೆಂಬರ್ – 1ನೇ ಮತ್ತು 2ನೇ ಸೆಮಿಫೈನಲ್‌ ಪಂದ್ಯ

ಜನವರಿ 1 – ಫೈನಲ್ ಪಂದ್ಯ

ಏಷ್ಯಾಕಪ್‌ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ ಅಂಡರ್-19 ಏಷ್ಯಾಕಪ್‌ನಲ್ಲಿ ಭಾರತ ತಂಡ ಅತಿ ಹೆಚ್ಚು ಪ್ರಶಸ್ತಿ ಗೆದ್ದಿದೆ. ಇಲ್ಲಿಯವರೆಗೆ ತಂಡ 7 ಬಾರಿ ಏಷ್ಯಾಕಪ್ ಗೆದ್ದಿದೆ. ಈ ಬಾರಿ ತಂಡದ ಕಮಾಂಡ್ ಯಶ್ ಧುಲ್​ಗೆ ನೀಡಲಾಗಿದೆ. 19 ವರ್ಷದೊಳಗಿನವರ ವಿಶ್ವಕಪ್‌ಗೂ ಮುನ್ನ ಯಶ್‌ಗೆ ನಾಯಕನಾಗಿ ತನ್ನನ್ನು ತಾನು ಸಾಬೀತುಪಡಿಸಲು ದೊಡ್ಡ ಅವಕಾಶವಿದೆ.

ತಂಡ: ಹರ್ನೂರ್ ಸಿಂಗ್ ಪನ್ನು, ಆಂಗ್ಕ್ರಿಶ್ ರಘುವಂಶಿ, ಅಂಶ್ ಗೋಸಾಯಿ, ಎಸ್‌ಕೆ ರಶೀದ್, ಯಶ್ ಧುಲ್ (ನಾಯಕ), ಅನೇಶ್ವರ್ ಗೌತಮ್, ಸಿದ್ಧಾರ್ಥ್ ಯಾದವ್, ಕೌಶಲ್ ತಾಂಬೆ, ನಿಶಾಂತ್ ಸಿಂಧು, ದಿನೇಶ್ ಬಾನಾ (ವಿಕೆಟ್ ಕೀಪರ್), ಆರಾಧ್ಯ ಯಾದವ್ (ವಿಕೆಟ್ ಕೀಪರ್), ರಾಜವರ್ಧನ್ ಬಾವಾಗೆ, ರಾಜವರ್ಧನ್ ಬಾವಾಗೆ , ಗರ್ವ್ ಸಾಂಗ್ವಾನ್, ರವಿ ಕುಮಾರ್, ರಿಷಿತ್ ರೆಡ್ಡಿ, ಮಾನವ್ ಪರಾಖ್, ಅಮೃತ್ ರಾಜ್ ಉಪಾಧ್ಯಾಯ, ವಿಕ್ಕಿ ಓಸ್ತ್ವಾಲ್, ವಾಸು ವಾಟ್ಸ್ (ಫಿಟ್ನೆಸ್ ಅನುಮೋದನೆಗೆ ಒಳಪಟ್ಟಿರುತ್ತದೆ).

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ