AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 World Cup 2024: ಭಾರತ- ಆಸೀಸ್ ನಡುವೆ ವಿಶ್ವಕಪ್ ಫೈನಲ್ ಫೈಟ್; ಹೈವೋಲ್ಟೇಜ್ ಪಂದ್ಯ ಯಾವಾಗ ಗೊತ್ತಾ?

U19 World Cup 2024: 19 ವರ್ಷದೊಳಗಿನವರ ವಿಶ್ವಕಪ್​ನಲ್ಲಿ ಭಾರತ ದಾಖಲೆಯ 9ನೇ ಬಾರಿಗೆ ಫೈನಲ್​ಗೇರಿದ್ದರೆ, ಆಸ್ಟ್ರೇಲಿಯಾ ತಂಡ ಕೂಡ 6ನೇ ಬಾರಿಗೆ ಫೈನಲ್ ಟಿಕೆಟ್ ಪಡೆದುಕೊಂಡಿದೆ. ಸಮಾಧಾನಕಾರ ಸಂಗತಿಯೆಂದರೆ, ಇದಕ್ಕೂ ಮೊದಲು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಎರಡು ಬಾರಿ ಫೈನಲ್​ನಲ್ಲಿ ಮುಖಾಮುಖಿಯಾಗಿದ್ದು, ಈ ಎರಡೂ ಮುಖಾಮುಖಿಯಲ್ಲೂ ಭಾರತ ಜಯಭೇರಿ ಬಾರಿಸುವಲ್ಲಿ ಯಶಸ್ವಿಯಾಗಿದೆ.

U19 World Cup 2024: ಭಾರತ- ಆಸೀಸ್ ನಡುವೆ ವಿಶ್ವಕಪ್ ಫೈನಲ್ ಫೈಟ್; ಹೈವೋಲ್ಟೇಜ್ ಪಂದ್ಯ ಯಾವಾಗ ಗೊತ್ತಾ?
ಭಾರತ- ಆಸ್ಟ್ರೇಲಿಯಾ
ಪೃಥ್ವಿಶಂಕರ
|

Updated on:Feb 08, 2024 | 9:59 PM

Share

ದಕ್ಷಿಣ ಆಫ್ರಿಕಾದ ಬಿನೋಯ್‌ನ ವಿಲ್ಮೋರ್ ಪಾರ್ಕ್‌ನಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ (Australia vs Pakistan) ನಡುವಿನ ಅಂಡರ್-19 ವಿಶ್ವಕಪ್​ನ (Under-19 World Cup 2024) ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು 1 ವಿಕೆಟ್​ಗಳಿಂದ ಮಣಿಸಿ ಆಸ್ಟ್ರೇಲಿಯಾ ಫೈನಲ್‌ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 48.5 ಓವರ್‌ಗಳಲ್ಲಿ ಕೇವಲ 179 ರನ್ ಗಳಿಸಿ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಆಸ್ಟ್ರೇಲಿಯದ ತಂಡ 9 ವಿಕೆಟ್ ಕಳೆದುಕೊಂಡು ಇನ್ನು 5 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತ್ತು. ಇದೀಗ ಫೆಬ್ರವರಿ 11 ರ ಭಾನುವಾರದಂದು ನಡೆಯುವ ಈ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಬಲಿಷ್ಠ ಟೀಂ ಇಂಡಿಯಾವನ್ನು (Australia vs India) ಎದುರಿಸಲಿದೆ. ಈ ಎರಡು ತಂಡಗಳ ನಡುವಿನ ಫೈನಲ್ ಕಾಳಗ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.

ವಿಶ್ವಕಪ್​ನಲ್ಲಿ ಭಾರತ ಅಜೇಯ

ಈ ವಿಶ್ವಕಪ್​ನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್​ಗೇರಿರುವ ಭಾರತ, ಇದುವರೆಗೆ ಒಟ್ಟು ಆರು ಪಂದ್ಯಗಳನ್ನು ಆಡಿದೆ. ಆಡಿದ ಈ 6 ಪಂದ್ಯಗಳಲ್ಲಿ ಭಾಗಶಃ ಎಲ್ಲಾ ಪಂದ್ಯಗಳಲ್ಲೂ ಏಕಪಕ್ಷೀಯ ಗೆಲುವು ಸಾಧಿಸಿದೆ. ಭಾರತ ಯುವ ಪಡೆ ಎಷ್ಟು ಬಲಿಷ್ಠವಾಗಿದೆ ಎಂಬುದಕ್ಕೆ ಅದರ ಅಜೇಯ ಓಟವೇ ಸಾಕ್ಷಿಯಾಗಿದೆ. ಇನ್ನು ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನೇ ಮಣಿಸಿದ ಉದಯ್ ಸಹಾರನ್ ಪಡೆ ಆತ್ಮವಿಶ್ವಾಸದಿಂದ ಬೀಗುತ್ತಿದೆ.

ಬಿಸಿಸಿಐ ಟ್ವೀಟ್

ಮೂರನೇ ಬಾರಿಗೆ ಫೈನಲ್ ಫೈಟ್

ಇತ್ತ ಆಸ್ಟ್ರೇಲಿಯಾ ಕೂಡ ಲೀಗ್​ನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್ ಪ್ರವೇಶಿಸಿದೆ. ಹೀಗಾಗಿ ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಲಾಗಿದೆ. 19 ವರ್ಷದೊಳಗಿನವರ ವಿಶ್ವಕಪ್​ನಲ್ಲಿ ಭಾರತ ದಾಖಲೆಯ 9ನೇ ಬಾರಿಗೆ ಫೈನಲ್​ಗೇರಿದ್ದರೆ, ಆಸ್ಟ್ರೇಲಿಯಾ ತಂಡ ಕೂಡ 6ನೇ ಬಾರಿಗೆ ಫೈನಲ್ ಟಿಕೆಟ್ ಪಡೆದುಕೊಂಡಿದೆ. ಸಮಾಧಾನಕಾರ ಸಂಗತಿಯೆಂದರೆ, ಇದಕ್ಕೂ ಮೊದಲು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಎರಡು ಬಾರಿ ಫೈನಲ್​ನಲ್ಲಿ ಮುಖಾಮುಖಿಯಾಗಿದ್ದು, ಈ ಎರಡೂ ಮುಖಾಮುಖಿಯಲ್ಲೂ ಭಾರತ ಜಯಭೇರಿ ಬಾರಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಈ ಗೆಲುವಿನ ಸರಣಿಯನ್ನು ಭಾರತ ಮುಂದುವರೆಸಲಿ ಎಂಬುದು ಟೀಂ ಇಂಡಿಯಾ ಅಭಿಮಾನಿಗಳ ಆಶಯವಾಗಿದೆ. ಇನ್ನು ಫೈನಲ್ ಪಂದ್ಯದ ಬಗ್ಗೆ ಹೇಳುವುದಾದರೆ..

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಯಾವಾಗ ನಡೆಯಲ್ಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಫೆಬ್ರವರಿ 11 ರ ಭಾನುವಾರದಂದು ನಡೆಯಲ್ಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಎಲ್ಲಿ ನಡೆಯಲ್ಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲ್ಲಿದೆ

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದ ನೇರ ಪ್ರಸಾರ ಎಲ್ಲಿ?

ಅಂಡರ್ 19 ವಿಶ್ವಕಪ್​ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು. ಹಾಗೆಯೇ ಮೊಬೈಲ್‌ನಲ್ಲಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 pm, Thu, 8 February 24

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​