
ದಕ್ಷಿಣ ಆಫ್ರಿಕಾದ ಬಿನೋಯ್‌ನ ವಿಲ್ಮೋರ್ ಪಾರ್ಕ್‌ನಲ್ಲಿ ನಡೆದ ಆಸ್ಟ್ರೇಲಿಯಾ ಹಾಗೂ ಪಾಕಿಸ್ತಾನ (Australia vs Pakistan) ನಡುವಿನ ಅಂಡರ್-19 ವಿಶ್ವಕಪ್ನ (Under-19 World Cup 2024) ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು 1 ವಿಕೆಟ್ಗಳಿಂದ ಮಣಿಸಿ ಆಸ್ಟ್ರೇಲಿಯಾ ಫೈನಲ್‌ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 48.5 ಓವರ್‌ಗಳಲ್ಲಿ ಕೇವಲ 179 ರನ್ ಗಳಿಸಿ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಆಸ್ಟ್ರೇಲಿಯದ ತಂಡ 9 ವಿಕೆಟ್ ಕಳೆದುಕೊಂಡು ಇನ್ನು 5 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಮುಟ್ಟಿತ್ತು. ಇದೀಗ ಫೆಬ್ರವರಿ 11 ರ ಭಾನುವಾರದಂದು ನಡೆಯುವ ಈ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಬಲಿಷ್ಠ ಟೀಂ ಇಂಡಿಯಾವನ್ನು (Australia vs India) ಎದುರಿಸಲಿದೆ. ಈ ಎರಡು ತಂಡಗಳ ನಡುವಿನ ಫೈನಲ್ ಕಾಳಗ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲ್ಲಿದೆ.
ಈ ವಿಶ್ವಕಪ್ನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್ಗೇರಿರುವ ಭಾರತ, ಇದುವರೆಗೆ ಒಟ್ಟು ಆರು ಪಂದ್ಯಗಳನ್ನು ಆಡಿದೆ. ಆಡಿದ ಈ 6 ಪಂದ್ಯಗಳಲ್ಲಿ ಭಾಗಶಃ ಎಲ್ಲಾ ಪಂದ್ಯಗಳಲ್ಲೂ ಏಕಪಕ್ಷೀಯ ಗೆಲುವು ಸಾಧಿಸಿದೆ. ಭಾರತ ಯುವ ಪಡೆ ಎಷ್ಟು ಬಲಿಷ್ಠವಾಗಿದೆ ಎಂಬುದಕ್ಕೆ ಅದರ ಅಜೇಯ ಓಟವೇ ಸಾಕ್ಷಿಯಾಗಿದೆ. ಇನ್ನು ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನೇ ಮಣಿಸಿದ ಉದಯ್ ಸಹಾರನ್ ಪಡೆ ಆತ್ಮವಿಶ್ವಾಸದಿಂದ ಬೀಗುತ್ತಿದೆ.
Stage set for a cracking Sunday Final in the #U19WorldCup! 🏟️
India 🆚 Australia
Follow the match on https://t.co/Z3MPyeL1t7 and the official BCCI App 📱#BoysInBlue | #TeamIndia | #INDvAUS pic.twitter.com/lwJ4ag4wOc
— BCCI (@BCCI) February 8, 2024
ಇತ್ತ ಆಸ್ಟ್ರೇಲಿಯಾ ಕೂಡ ಲೀಗ್ನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್ ಪ್ರವೇಶಿಸಿದೆ. ಹೀಗಾಗಿ ಎರಡೂ ತಂಡಗಳ ನಡುವೆ ಜಿದ್ದಾಜಿದ್ದಿನ ಕಾಳಗವನ್ನು ನಿರೀಕ್ಷಿಸಲಾಗಿದೆ. 19 ವರ್ಷದೊಳಗಿನವರ ವಿಶ್ವಕಪ್ನಲ್ಲಿ ಭಾರತ ದಾಖಲೆಯ 9ನೇ ಬಾರಿಗೆ ಫೈನಲ್ಗೇರಿದ್ದರೆ, ಆಸ್ಟ್ರೇಲಿಯಾ ತಂಡ ಕೂಡ 6ನೇ ಬಾರಿಗೆ ಫೈನಲ್ ಟಿಕೆಟ್ ಪಡೆದುಕೊಂಡಿದೆ. ಸಮಾಧಾನಕಾರ ಸಂಗತಿಯೆಂದರೆ, ಇದಕ್ಕೂ ಮೊದಲು ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಎರಡು ಬಾರಿ ಫೈನಲ್ನಲ್ಲಿ ಮುಖಾಮುಖಿಯಾಗಿದ್ದು, ಈ ಎರಡೂ ಮುಖಾಮುಖಿಯಲ್ಲೂ ಭಾರತ ಜಯಭೇರಿ ಬಾರಿಸುವಲ್ಲಿ ಯಶಸ್ವಿಯಾಗಿದೆ. ಇದೀಗ ಈ ಗೆಲುವಿನ ಸರಣಿಯನ್ನು ಭಾರತ ಮುಂದುವರೆಸಲಿ ಎಂಬುದು ಟೀಂ ಇಂಡಿಯಾ ಅಭಿಮಾನಿಗಳ ಆಶಯವಾಗಿದೆ. ಇನ್ನು ಫೈನಲ್ ಪಂದ್ಯದ ಬಗ್ಗೆ ಹೇಳುವುದಾದರೆ..
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಫೆಬ್ರವರಿ 11 ರ ಭಾನುವಾರದಂದು ನಡೆಯಲ್ಲಿದೆ.
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಸಹಾರಾ ಪಾರ್ಕ್ ವಿಲೋಮೂರ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲ್ಲಿದೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.
ಅಂಡರ್ 19 ವಿಶ್ವಕಪ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಟಿವಿಯಲ್ಲಿ ವೀಕ್ಷಿಸಬಹುದು. ಹಾಗೆಯೇ ಮೊಬೈಲ್‌ನಲ್ಲಿ ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಪಂದ್ಯವನ್ನು ವೀಕ್ಷಿಸಬಹುದು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:56 pm, Thu, 8 February 24