AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 World Cup 2024: ಅಂಡರ್-19 ವಿಶ್ವಕಪ್ ಹೊಸ​ ವೇಳಾಪಟ್ಟಿ ಪ್ರಕಟ

ಆತಿಥೇಯ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಟೂರ್ನಿಯ ಮೊದಲ ಪಂದ್ಯವನ್ನು ಆಡಲಿದೆ. ಆದರೆ ಹಾಲಿ ಚಾಂಪಿಯನ್ ಭಾರತ ತಂಡವು ಜನವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

U19 World Cup 2024: ಅಂಡರ್-19 ವಿಶ್ವಕಪ್ ಹೊಸ​ ವೇಳಾಪಟ್ಟಿ ಪ್ರಕಟ
U19 World Cup 2024
TV9 Web
| Edited By: |

Updated on: Dec 11, 2023 | 7:15 PM

Share

ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಅಂಡರ್-19 ಪುರುಷರ ಕ್ರಿಕೆಟ್ ವಿಶ್ವಕಪ್​ನ (U19 World Cup 2024) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಟೂರ್ನಿಯು ಜನವರಿ 19 ರಿಂದ ಫ್ರೆಬ್ರವರಿ 11 ರವರೆಗೆ ಸೌತ್ ಆಫ್ರಿಕಾದಲ್ಲಿ ನಡೆಯಲಿದೆ. ಈ ಹಿಂದೆ ಶ್ರೀಲಂಕಾ ಅಂಡರ್-19 ವಿಶ್ವಕಪ್​ ಆಯೋಜನೆಯ ಹಕ್ಕನ್ನು ಹೊಂದಿತ್ತು. ಆದರೆ ನವೆಂಬರ್​ನಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿದೆ. ಹೀಗಾಗಿ 15ನೇ ಆವೃತ್ತಿಯ ಕಿರಿಯರ ವಿಶ್ವಕಪ್​ನ್ನು ಸೌತ್ ಆಫ್ರಿಕಾಗೆ ಸ್ಥಳಾಂತರಿಸಲಾಗಿದೆ.

ಅದರಂತೆ ಇದೀಗ ಸೌತ್ ಆಫ್ರಿಕಾದ ಐದು ಸ್ಟೇಡಿಯಂಗಳಲ್ಲಿ ಟೂರ್ನಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಬ್ಲೋಮ್‌ಫಾಂಟೈನ್‌ನ ಮಂಗಾಂಗ್ ಓವಲ್ ಮೈದಾನ, ಪೂರ್ವ ಲಂಡನ್‌ನ ಬಫಲೋ ಪಾರ್ಕ್ ಸ್ಟೇಡಿಯಂ, ಕಿಂಬರ್ಲಿಯಲ್ಲಿ ಕಿಂಬರ್ಲಿ ಓವಲ್ ಮೈದಾನ, ಪಾಚೆಫ್‌ಸ್ಟ್ರೂಮ್‌ನ ಜೆಬಿ ಮಾರ್ಕ್ಸ್ ಓವಲ್ ಮತ್ತು ಬೆನೋನಿಯ ವಿಲೋಮೂರ್ ಪಾರ್ಕ್ ಸ್ಟೇಡಿಯಂಗಳಲ್ಲಿ ಒಟ್ಟು 41 ಪಂದ್ಯಗಳು ನಡೆಯಲಿದೆ.

ಇನ್ನು ಆತಿಥೇಯ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಟೂರ್ನಿಯ ಮೊದಲ ಪಂದ್ಯವನ್ನು ಆಡಲಿದೆ. ಆದರೆ ಹಾಲಿ ಚಾಂಪಿಯನ್ ಭಾರತ ತಂಡವು ಜನವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.

16 ತಂಡಗಳು 4 ಗ್ರೂಪ್:

ಅಂಡರ್​-19 ವಿಶ್ವಕಪ್​ನಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಇಲ್ಲಿ ಪ್ರತಿ ಗ್ರೂಪ್​ಗಳಲ್ಲಿ ಮೊದಲೆರಡು ಅಗ್ರಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೇರಲಿದೆ.

ಕಿರಿಯರ ವಿಶ್ವಕಪ್ ವೇಳಾಪಟ್ಟಿ:

ಅಂಡರ್-19 ವಿಶ್ವಕಪ್​ ಗ್ರೂಪ್​ಗಳು:

ಗ್ರೂಪ್​-A

  • ಭಾರತ
  • ಬಾಂಗ್ಲಾದೇಶ್
  • ಯುಎಸ್​ಎ
  • ಐರ್ಲೆಂಡ್

ಗ್ರೂಪ್​-B

  • ಇಂಗ್ಲೆಂಡ್
  • ಸೌತ್ ಆಫ್ರಿಕಾ
  • ವೆಸ್ಟ್ ಇಂಡೀಸ್
  • ಸ್ಕಾಟ್ಲೆಂಡ್

ಗ್ರೂಪ್​-C

  • ಆಸ್ಟ್ರೇಲಿಯಾ
  • ಶ್ರೀಲಂಕಾ
  • ಝಿಂಬಾಬ್ವೆ
  • ನಮೀಬಿಯಾ

ಗ್ರೂಪ್​-D

  • ಅಫ್ಘಾನಿಸ್ತಾನ್
  • ಪಾಕಿಸ್ತಾನ್
  • ನ್ಯೂಝಿಲೆಂಡ್
  • ನೇಪಾಳ

ಇದನ್ನೂ ಓದಿ: RCB ತಂಡದ ಅತ್ಯಂತ ಕೆಟ್ಟ ಆಯ್ಕೆಗಳಾವುವು ಗೊತ್ತಾ?

ಭಾರತ ತಂಡದ ಲೀಗ್​ ಹಂತದ ವೇಳಾಪಟ್ಟಿ:

  1. ಜನವರಿ 20- ಭಾರತ vs ಬಾಂಗ್ಲಾದೇಶ್.
  2. ಜನವರಿ 22- ಭಾರತ vs ಐರ್ಲೆಂಡ್.
  3. ಜನವರಿ 28- ಭಾರತ vs ಯುಎಸ್​ಎ
Follow Us
TV9 Web
TV9 Web

TV9 Kannada

Read More
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
ಚಿಕ್ಕಬಳ್ಳಾಪುರದಲ್ಲಿ ದಿಢೀರ್ ಭಾರಿ ಮಳೆ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ
‘ಅಸಹ್ಯವಾಗಿ ಮಾತಾಡ್ತಾರೆ’: ಬಿಗ್ ಬಾಸ್ ಸ್ಪರ್ಧಿಗಳ ಮೇಲೆ ಅವಿನಾಶ್ ಗರಂ