ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಅಂಡರ್-19 ಪುರುಷರ ಕ್ರಿಕೆಟ್ ವಿಶ್ವಕಪ್ನ (U19 World Cup 2024) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಟೂರ್ನಿಯು ಜನವರಿ 19 ರಿಂದ ಫ್ರೆಬ್ರವರಿ 11 ರವರೆಗೆ ಸೌತ್ ಆಫ್ರಿಕಾದಲ್ಲಿ ನಡೆಯಲಿದೆ. ಈ ಹಿಂದೆ ಶ್ರೀಲಂಕಾ ಅಂಡರ್-19 ವಿಶ್ವಕಪ್ ಆಯೋಜನೆಯ ಹಕ್ಕನ್ನು ಹೊಂದಿತ್ತು. ಆದರೆ ನವೆಂಬರ್ನಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯನ್ನು ಐಸಿಸಿ ಅಮಾನತುಗೊಳಿಸಿದೆ. ಹೀಗಾಗಿ 15ನೇ ಆವೃತ್ತಿಯ ಕಿರಿಯರ ವಿಶ್ವಕಪ್ನ್ನು ಸೌತ್ ಆಫ್ರಿಕಾಗೆ ಸ್ಥಳಾಂತರಿಸಲಾಗಿದೆ.
ಅದರಂತೆ ಇದೀಗ ಸೌತ್ ಆಫ್ರಿಕಾದ ಐದು ಸ್ಟೇಡಿಯಂಗಳಲ್ಲಿ ಟೂರ್ನಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. ಬ್ಲೋಮ್‌ಫಾಂಟೈನ್‌ನ ಮಂಗಾಂಗ್ ಓವಲ್ ಮೈದಾನ, ಪೂರ್ವ ಲಂಡನ್‌ನ ಬಫಲೋ ಪಾರ್ಕ್ ಸ್ಟೇಡಿಯಂ, ಕಿಂಬರ್ಲಿಯಲ್ಲಿ ಕಿಂಬರ್ಲಿ ಓವಲ್ ಮೈದಾನ, ಪಾಚೆಫ್‌ಸ್ಟ್ರೂಮ್‌ನ ಜೆಬಿ ಮಾರ್ಕ್ಸ್ ಓವಲ್ ಮತ್ತು ಬೆನೋನಿಯ ವಿಲೋಮೂರ್ ಪಾರ್ಕ್ ಸ್ಟೇಡಿಯಂಗಳಲ್ಲಿ ಒಟ್ಟು 41 ಪಂದ್ಯಗಳು ನಡೆಯಲಿದೆ.
ಇನ್ನು ಆತಿಥೇಯ ಸೌತ್ ಆಫ್ರಿಕಾ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಟೂರ್ನಿಯ ಮೊದಲ ಪಂದ್ಯವನ್ನು ಆಡಲಿದೆ. ಆದರೆ ಹಾಲಿ ಚಾಂಪಿಯನ್ ಭಾರತ ತಂಡವು ಜನವರಿ 20 ರಂದು ಬಾಂಗ್ಲಾದೇಶ್ ವಿರುದ್ಧ ಕಣಕ್ಕಿಳಿಯುವ ಮೂಲಕ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ.
ಅಂಡರ್-19 ವಿಶ್ವಕಪ್ನಲ್ಲಿ ಒಟ್ಟು 16 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಇಲ್ಲಿ ಪ್ರತಿ ಗ್ರೂಪ್ಗಳಲ್ಲಿ ಮೊದಲೆರಡು ಅಗ್ರಸ್ಥಾನಗಳನ್ನು ಅಲಂಕರಿಸುವ ತಂಡಗಳು ಮುಂದಿನ ಹಂತಕ್ಕೇರಲಿದೆ.
The wait is over 🤩
Fixtures for the 2024 ICC U19 Men’s Cricket World Cup in South Africa are OUT! 🗓️#U19WorldCup | More ➡️ https://t.co/IX3eV3Z5fY pic.twitter.com/glWKCQF7xJ
— ICC (@ICC) December 11, 2023
ಗ್ರೂಪ್-A
ಗ್ರೂಪ್-B
ಗ್ರೂಪ್-C
ಗ್ರೂಪ್-D
ಇದನ್ನೂ ಓದಿ: RCB ತಂಡದ ಅತ್ಯಂತ ಕೆಟ್ಟ ಆಯ್ಕೆಗಳಾವುವು ಗೊತ್ತಾ?