AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 World Cup: ಸತತ 5ನೇ ಗೆಲುವು ದಾಖಲಿಸಿ ಸೆಮಿಫೈನಲ್​ಗೆ ಲಗ್ಗೆ ಇಟ್ಟ ಭಾರತ; ಮುಂದಿನ ಎದುರಾಳಿ ಯಾರು ಗೊತ್ತಾ?

U19 World Cup 2024: ಸೂಪರ್ ಸಿಕ್ಸ್ ಹಂತದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದವನ್ನು 200 ಕ್ಕೂ ಅಧಿಕ ರನ್​ಗಳಿಂದ ಮಣಿಸಿದ್ದ ಭಾರತ, ಎರಡನೇ ಸೂಪರ್ ಸಿಕ್ಸ್ ಪಂದ್ಯದಲ್ಲಿ ನೇಪಾಳ ತಂಡವನ್ನು 100ಕ್ಕೂ ಹೆಚ್ಚು ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಭಾರತ ಗುಂಪು 1ರಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇದೀಗ ಸೆಮಿಫೈನಲ್‌ನಲ್ಲಿ ಗ್ರೂಪ್ 2ರಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ.

U19 World Cup: ಸತತ 5ನೇ ಗೆಲುವು ದಾಖಲಿಸಿ ಸೆಮಿಫೈನಲ್​ಗೆ ಲಗ್ಗೆ ಇಟ್ಟ ಭಾರತ; ಮುಂದಿನ ಎದುರಾಳಿ ಯಾರು ಗೊತ್ತಾ?
ಭಾರತ ಯುವಪಡೆ
ಪೃಥ್ವಿಶಂಕರ
|

Updated on:Feb 02, 2024 | 10:06 PM

Share

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ (U19 World Cup 2024) ಗೆಲುವಿನ ಓಟ ಮುಂದುವರಿದಿದೆ. ಲೀಗ್ ಹಂತದಿಂದ ಸೂಪರ್ ಸಿಕ್ಸ್ ಹಂತದವರೆಗೆ ಒಟ್ಟು ಐದು ಪಂದ್ಯಗಳನ್ನು ಆಡಿರುವ ಭಾರತ, ಐದು ತಂಡಗಳನ್ನು ಒಂದರ ಹಿಂದೆ ಒಂದರಂತೆ ಸೋಲಿಸಿ ಇದೀಗ ಸೆಮಿಫೈನಲ್​ಗೆ ಎಂಟ್ರಿಕೊಟ್ಟಿದೆ. ಸೂಪರ್ ಸಿಕ್ಸ್ ಹಂತದ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದವನ್ನು 200 ಕ್ಕೂ ಅಧಿಕ ರನ್​ಗಳಿಂದ ಮಣಿಸಿದ್ದ ಭಾರತ, ಎರಡನೇ ಸೂಪರ್ ಸಿಕ್ಸ್ ಪಂದ್ಯದಲ್ಲಿ ನೇಪಾಳ ತಂಡವನ್ನು (India U-19 vs Nepal U-19) 100ಕ್ಕೂ ಹೆಚ್ಚು ರನ್‌ಗಳಿಂದ ಸೋಲಿಸಿತು. ಈ ಗೆಲುವಿನೊಂದಿಗೆ ಭಾರತ ಗುಂಪು 1ರಲ್ಲಿ ಅಗ್ರಸ್ಥಾನ ಕಾಯ್ದುಕೊಂಡಿದೆ. ಇದೀಗ ಸೆಮಿಫೈನಲ್‌ನಲ್ಲಿ ಗ್ರೂಪ್ 2ರಲ್ಲಿ ಎರಡನೇ ಸ್ಥಾನದಲ್ಲಿರುವ ದಕ್ಷಿಣ ಆಫ್ರಿಕಾ ತಂಡವನ್ನು (India U-19 vs South Africa U-19) ಎದುರಿಸಲಿದೆ.

ಸಚಿನ್- ಸಹಾರನ್ ಶತಕ

ನೇಪಾಳ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಅಂಡರ್-19 ತಂಡ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತ್ತು. ಅದರಂತೆ ಬ್ಯಾಟಿಂಗ್​ಗೆ ಇಳಿದ ಭಾರತ ತಂಡ 62 ರನ್ ಗಳಿಸುವಷ್ಟರಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಇಲ್ಲಿಂದ ಸಚಿನ್ ಧಾಸ್ ಮತ್ತು ನಾಯಕ ಸಹರನ್ ಇನಿಂಗ್ಸ್ ಕೈಗೆತ್ತಿಕೊಂಡು ನಾಲ್ಕನೇ ವಿಕೆಟ್‌ಗೆ 200ಕ್ಕೂ ಹೆಚ್ಚು ರನ್‌ಗಳ ಜೊತೆಯಾಟ ನಡೆಸಿ ತಂಡವನ್ನು ಬಲಿಷ್ಠ ಸ್ಥಿತಿಗೆ ತಂದರು. ಸಚಿನ್ 116 ರನ್‌ಗಳ ಇನ್ನಿಂಗ್ಸ್ ಆಡಿದರೆ, ಸಹರಾನ್ ಅವರ ಬ್ಯಾಟಿಂಗ್‌ನಿಂದ 100 ರನ್ ಗಳಿಸಿದರು.

U19 World Cup: ಉದಯ್- ಸಚಿನ್ ಶತಕ; ನೇಪಾಳಕ್ಕೆ ಬೃಹತ್ ಟಾರ್ಗೆಟ್ ನೀಡಿದ ಭಾರತ

165 ರನ್ ಕಲೆಹಾಕಿದ ನೇಪಾಳ

ಇನ್ನು ಭಾರತ ನೀಡಿದ 299 ರನ್‌ಗಳ ಗುರಿ ಬೆನ್ನತ್ತಿದ ನೇಪಾಳ ತಂಡ ನಿಗದಿತ 50 ಓವರ್‌ಗಳಲ್ಲಿ 9 ವಿಕೆಟ್‌ ಕಳೆದುಕೊಂಡು 165 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಪಂದ್ಯದಲ್ಲಿ ಭಾರತದ ಪರ ಸೌಮ್ಯ ಪಾಂಡೆ 10 ಓವರ್‌ಗಳಲ್ಲಿ 29 ರನ್ ನೀಡಿ 4 ವಿಕೆಟ್ ಪಡೆದರು.

ಸೆಮಿಸ್ ಲೆಕ್ಕಾಚಾರ ಇಲ್ಲಿದೆ.

ಭಾರತ ತಂಡವನ್ನು ಹೊರತುಪಡಿಸಿ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ಕೂಡ ಸೆಮಿಫೈನಲ್‌ಗೆ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಂಡಿವೆ. ಹಾಗೆಯೇ ನಾಲ್ಕನೇ ತಂಡವಾಗಿ ಪಾಕಿಸ್ತಾನದ ಸ್ಥಾನವೂ ಬಹುತೇಕ ಖಚಿತವಾಗಿದೆ. ಭಾರತದ ಗುಂಪಿನಲ್ಲಿರುವ ಪಾಕಿಸ್ತಾನವು ಫೆಬ್ರವರಿ 3 ರಂದು ಬಾಂಗ್ಲಾದೇಶ ವಿರುದ್ಧ ಸೂಪರ್ ಸಿಕ್ಸ್‌ನಲ್ಲಿ ತನ್ನ ಕೊನೆಯ ಪಂದ್ಯವನ್ನು ಆಡಬೇಕಿದ್ದು, ಅದನ್ನು ಗೆಲ್ಲುವ ಮೂಲಕ ಸೆಮಿಫೈನಲ್‌ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲಿದೆ. ಅಂಡರ್ 19 ವಿಶ್ವಕಪ್ 2024 ರ ಮೊದಲ ಸೆಮಿಫೈನಲ್ ಫೆಬ್ರವರಿ 6 ರಂದು ನಡೆಯಲಿದ್ದು, ಎರಡನೇ ಸೆಮಿಫೈನಲ್ ಫೆಬ್ರವರಿ 8 ರಂದು ನಡೆಯಲಿದೆ.

Published On - 9:56 pm, Fri, 2 February 24

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು
ಜೈಲಲ್ಲಿ ಖಾಕಿ ಕಾರ್ಯಾಚರಣೆಗೆ ಪತರುಗುಟ್ಟಿದ ಕೈದಿಗಳು