U19 World Cup 2024: ಭಾರತಕ್ಕೆ ಹ್ಯಾಟ್ರಿಕ್ ಗೆಲುವು; ಅಮೇರಿಕಾ ವಿರುದ್ಧ 201 ರನ್​ಗಳ ಜಯ..!

U19 World Cup 2024: ಅಂಡರ್-19 ವಿಶ್ವಕಪ್​ನಲ್ಲಿ ತನ್ನ ಕೊನೆಯ ಗುಂಪಿನ ಪಂದ್ಯದಲ್ಲಿ ಅಮೆರಿಕವನ್ನು ಎದುರಿಸಿದ್ದ ಭಾರತ ಯುವ ಪಡೆ ಬರೋಬ್ಬರಿ 201 ರನ್​ಗಳ ಬೃಹತ್ ಜಯ ಸಾಧಿಸಿದೆ. ಇದರೊಂದಿಗೆ ಲೀಗ್ ಸುತ್ತಿನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಭಾರತ ತಂಡ ಸೂಪರ್ ಸಿಕ್ಸ್ ಹಂತಕ್ಕೆ ಲಗ್ಗೆ ಇಟ್ಟಿದೆ.

U19 World Cup 2024: ಭಾರತಕ್ಕೆ ಹ್ಯಾಟ್ರಿಕ್ ಗೆಲುವು; ಅಮೇರಿಕಾ ವಿರುದ್ಧ 201 ರನ್​ಗಳ ಜಯ..!
ಭಾರತ- ಅಮೇರಿಕಾ
Follow us
ಪೃಥ್ವಿಶಂಕರ
|

Updated on: Jan 28, 2024 | 10:05 PM

ಅಂಡರ್-19 ವಿಶ್ವಕಪ್​ನಲ್ಲಿ (U19 World Cup 2024) ತನ್ನ ಕೊನೆಯ ಗುಂಪಿನ ಪಂದ್ಯದಲ್ಲಿ ಅಮೆರಿಕವನ್ನು ಎದುರಿಸಿದ್ದ ಭಾರತ ಯುವ ಪಡೆ (India U-19 vs USA U-19)  ಬರೋಬ್ಬರಿ 201 ರನ್​ಗಳ ಬೃಹತ್ ಜಯ ಸಾಧಿಸಿದೆ. ಇದರೊಂದಿಗೆ ಲೀಗ್ ಸುತ್ತಿನಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಭಾರತ ತಂಡ ಸೂಪರ್ ಸಿಕ್ಸ್ ಹಂತಕ್ಕೆ ಲಗ್ಗೆ ಇಟ್ಟಿದೆ. ಲೀಗ್​ನ ಮೊದಲ ಪಂದ್ಯದಲ್ಲಿ ಬಾಂಗ್ಲಾ ಪಡೆಯನ್ನು ಮಣಸಿದ್ದ ಉದಯ್ ಪಡೆ, ಎರಡನೇ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧವೂ ಇದೇ 201 ರನ್​ಗಳಿಂದ ಗೆಲುವು ಸಾಧಿಸಿತ್ತು. ಇದೀಗ ಲೀಗ್​ನ ಕೊನೆಯ ಪಂದ್ಯದಲ್ಲೂ ಯುಎಸ್​ಎ ವಿರುದ್ಧ 201 ರನ್​ಗಳ ಗೆಲುವು ದಾಖಲಿಸಿ, ತನ್ನ ಗುಂಪಿನಿಂದ ಅಗ್ರ ತಂಡವಾಗಿ ಸೂಪರ್ ಸಿಕ್ಸ್ ಹಂತಕ್ಕೆ ಲಗ್ಗೆ ಇಟ್ಟಿದೆ.

110 ಎಸೆತಗಳಲ್ಲಿ ಶತಕ

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಪರ ಆರಂಭಿಕ ಅರ್ಶಿನ್ ಕುಲಕರ್ಣಿ 110 ಎಸೆತಗಳಲ್ಲಿ ಶತಕ ಪೂರೈಸಿದರು. ಮೊದಲು ನಿಧಾನಗತಿಯ ಬ್ಯಾಟಿಂಗ್‌ ಮಾಡಿದ ಅರ್ಶಿನ್, 70 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಂತಿಮವಾಗಿ ತಮ್ಮ ಇನ್ನಿಂಗ್ಸ್​ನಲ್ಲಿ 118 ಎಸೆತಗಳನ್ನು ಎದುರಿಸಿದ ಅವರು 8 ಬೌಂಡರಿ ಮತ್ತು 3 ಸಿಕ್ಸರ್‌ಗಳ ಸಹಿತ 110 ರನ್ ಕಲೆಹಾಕಿದರು. ಟೂರ್ನಿಯ ಮೊದಲ ಎರಡು ಪಂದ್ಯಗಳಲ್ಲಿ ಕ್ರಮವಾಗಿ 7 ಮತ್ತು 32 ರನ್‌ಗಳ ಇನ್ನಿಂಗ್ಸ್‌ಗಳನ್ನು ಆಡಿದ್ದ ಅರ್ಶಿನ್ ಈ ಪಂದ್ಯದಲ್ಲಿ ಶತಕ ಗಳಿಸುವ ಮೂಲಕ ತಮ್ಮ ಫಾರ್ಮ್ ಅನ್ನು ಮರಳಿ ಪಡೆದಿದ್ದಾರೆ.

U19 World Cup 2024: ಬಾಂಗ್ಲಾ ತಂಡವನ್ನು 84 ರನ್​ಗಳಿಂದ ಮಣಿಸಿ ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದ ಭಾರತ..!

155 ರನ್ ಜೊತೆಯಾಟ

ಶತಕದ ಜೊತೆಗೆ ಅರ್ಶಿನ್ ಕುಲಕರ್ಣಿ ಎರಡನೇ ವಿಕೆಟ್‌ಗೆ ಮುಶೀರ್ ಖಾನ್ ಜೊತೆ 155 ರನ್ ಜೊತೆಯಾಟ ನಡೆಸಿದರು. ಕಳೆದ ಪಂದ್ಯದಲ್ಲಿ ಶತಕ ಸಿಡಿಸಿದ್ದ ಮುಶೀರ್ ಮತ್ತೊಮ್ಮೆ ಅಪ್ರತಿಮ ಇನ್ನಿಂಗ್ಸ್ ಆಡಿ, 76 ಎಸೆತಗಳಲ್ಲಿ 73 ರನ್ ಗಳಿಸಿ ಔಟಾದರು. ನಾಯಕ ಉದಯ್ ಸಾಹರನ್ 35 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರೆ, ಕೆಳ ಕ್ರಮಾಂಕದಲ್ಲಿ ಪ್ರಿಯಾಂಶು ಮೊಲಿಯಾ 19 ಎಸೆತಗಳಲ್ಲಿ 27 ರನ್, ಸಚಿನ್ ದಾಸ್ 20 ರನ್ ಕೊಡುಗೆ ನೀಡಿದರು. ಹೀಗಾಗಿ ತಂಡ 326 ರನ್​​ಗಳ ಬೃಹತ್ ಟಾರ್ಗೆಟ್ ಸೆಟ್ ಮಾಡಿತು. ಅಮೆರಿಕ ಪರ ಅತಿಂದ್ರ ಸುಬ್ರಮಣ್ಯಂ 2 ವಿಕೆಟ್ ಪಡೆದರು.

125 ರನ್ ಕಲೆಹಾಕಿದ ಅಮೇರಿಕಾ

326 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಅಮೇರಿಕಾ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊದಲ ನಾಲ್ವರು ಬ್ಯಾಟರ್​ಗಳು ಕ್ರಮವಾಗಿ 2, 0, 18, 8 ರನ್​ಗಳಿಗೆ ಪೆವಿಲಿಯನ್ ಸೇರಿಕೊಳ್ಳುವ ಮೂಲಕ ಆರಂಭದಲ್ಲೇ ತಂಡವನ್ನು ಸೋಲಿನ ದವಡೆಗೆ ತಳ್ಳಿದರು. ತಂಡದ ಪರ ಮಧ್ಯಮ ಕ್ರಮಾಂಕದ ಬ್ಯಾಟರ್ ಉತ್ಕರ್ಷ್ ಶ್ರೀವಾಸ್ತವ ಅತ್ಯಧಿಕ 40 ರನ್ ಕಲೆಹಾಕಿದರು. ಅಂತಿಮವಾಗಿ ತಂಡ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 125 ರನ್ ಕಲೆಹಾಕಲಷ್ಟೇ ಶಕ್ತವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ಹಿಮದಿಂದ ತುಂಬಿದ ಕಣಿವೆಯಲ್ಲಿ ಚಿರತೆಗಳ ಕುಣಿದಾಟ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ