U19 World Cup: ಮೊದಲ ಪಂದ್ಯದಲ್ಲಿ ಭಾರತಕ್ಕೆ ಬಾಂಗ್ಲಾ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ? ಇಲ್ಲಿದೆ ಪೂರ್ಣ ವಿವರ
U19 World Cup 2024: ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ ಜನವರಿ 19ರಿಂದ ಟೂರ್ನಿ ಆರಂಭವಾಗಲಿದ್ದು, ಫೈನಲ್ ಪಂದ್ಯ ಫೆಬ್ರವರಿ 11ರಂದು ನಡೆಯಲಿದೆ. ಟೂರ್ನಿಯಲ್ಲಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಬಾಂಗ್ಲಾದೇಶದ ವಿರುದ್ಧ ಆಡಲಿದೆ.
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ (U19 World Cup 2024) ಜನವರಿ 19ರಿಂದ ಟೂರ್ನಿ ಆರಂಭವಾಗಲಿದ್ದು, ಫೈನಲ್ ಪಂದ್ಯ ಫೆಬ್ರವರಿ 11ರಂದು ನಡೆಯಲಿದೆ. ಟೂರ್ನಿಯಲ್ಲಿ ಟೀಂ ಇಂಡಿಯಾ ತನ್ನ ಮೊದಲ ಪಂದ್ಯವನ್ನು ಬಾಂಗ್ಲಾದೇಶದ (India vs Bangladesh) ವಿರುದ್ಧ ಆಡಲಿದೆ. 50 ಓವರ್‌ಗಳ ಈ ಟೂರ್ನಿಯಲ್ಲಿ ಟೀಂ ಇಂಡಿಯಾ ಮೇಲುಗೈ ಸಾಧಿಸಿದ್ದು, ಇಲ್ಲಿಯವರೆಗು ಭಾರತ ತಂಡ 19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ 5 ಬಾರಿ ಚಾಂಪಿಯನ್ ಆಗಿದೆ. ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ಭರ್ಜರಿ ಫಾರ್ಮ್‌ನಲ್ಲಿದ್ದು, ಇತ್ತೀಚೆಗೆ ನಡೆದ 19 ವರ್ಷದೊಳಗಿನವರ ತ್ರಿಕೋನ ಸರಣಿಯನ್ನು ಭಾರತ ಯುವ ಪಡೆ ಗೆದ್ದುಕೊಂಡಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ವಿಶ್ವಕಪ್ ಪಂದ್ಯ ಯಾವಾಗ ನಡೆಯಲಿದೆ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ವಿಶ್ವಕಪ್ ಗುಂಪು ಪಂದ್ಯವು ಜನವರಿ 19 ರಂದು ನಡೆಯಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ವಿಶ್ವಕಪ್ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ವಿಶ್ವಕಪ್ ಪಂದ್ಯ ಭಾರತದ ಕಾಲಮಾನ ಮಧ್ಯಾಹ್ನ 1:30 ರಿಂದ ಆರಂಭವಾಗಲಿದೆ. ಈ ಪಂದ್ಯದ ಟಾಸ್ ಮಧ್ಯಾಹ್ನ 1:00 ಗಂಟೆಗೆ ನಡೆಯಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ವಿಶ್ವಕಪ್ ಪಂದ್ಯವನ್ನು ಎಲ್ಲಿ ಆಡಲಾಗುತ್ತದೆ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ವಿಶ್ವಕಪ್ ಗುಂಪಿನ ಪಂದ್ಯವು ಬ್ಲೋಮ್‌ಫಾಂಟೈನ್‌ನ ಮಂಗಾಂಗ್ ಓವಲ್‌ನಲ್ಲಿ ನಡೆಯಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ವಿಶ್ವಕಪ್ ಪಂದ್ಯವನ್ನು ನೀವು ಎಲ್ಲಿ ವೀಕ್ಷಿಸಬಹುದು?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ವಿಶ್ವಕಪ್ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ವಿಶ್ವಕಪ್ ಪಂದ್ಯದ ಲೈನ್ ಸ್ಟ್ರೀಮಿಂಗ್ ಎಲ್ಲಿ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ವಿಶ್ವಕಪ್ ಪಂದ್ಯದ ಲೈನ್ ಸ್ಟ್ರೀಮಿಂಗ್ ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತವೆ.
ಎರಡೂ ವಿಶ್ವಕಪ್ ತಂಡಗಳು
ಭಾರತ: ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಉದಯ್ ಸಹರನ್ (ನಾಯಕ), ಅರವೆಲ್ಲಿ ಅವ್ನಿಶ್ ರಾವ್ (ವಿಕೆಟ್ ಕೀಪರ್), ಸೌಮ್ಯ ಕುಮಾರ್ ಪಾಂಡೆ (ಉಪನಾಯಕ), ಮುರುಗನ್ ಅಭಿಷೇಕ್, ಇನೇಶ್ ಮಹಾಜನ (ವಿಕೆಟ್ ಕೀಪರ್), ಧನುಷ್ ಗೌಡ, ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.
ಮೀಸಲು ಆಟಗಾರರು: ಪ್ರೇಮ್ ದಿಯೋಕರ್, ಅಂಶ್ ಗೋಸಾಯಿ, ಮೊಹಮ್ಮದ್ ಅಮನ್
ಬಾಂಗ್ಲಾದೇಶ: ಮಹ್ಫುಜುರ್ ರಹಮಾನ್ ರಬ್ಬಿ (ನಾಯಕ), ಆಶಿಕುರ್ ರೆಹಮಾನ್ ಶಿಬ್ಲಿ, ಜಿಶಾನ್ ಆಲಂ, ಚೌಧರಿ ಮೊಹಮ್ಮದ್ ರಿಜ್ವಾನ್, ಆದಿಲ್ ಬಿನ್ ಸಿದ್ದಿಕ್, ಮೊಹಮ್ಮದ್ ಅಶ್ರಫುಜ್ಜಮಾನ್ ಬೊರಾನೊ, ಅರಿಫುಲ್ ಇಸ್ಲಾಂ, ಶಿಹಾಬ್ ಜೇಮ್ಸ್, ಅಹ್ರಾರ್ ಅಮೀನ್ (ಉಪನಾಯಕ), ಶೇಖ್, ಪರ್ವೇಜ್ ಉಜಿ ರೋಹನತ್ ದೌಲಾ.ಬೋರ್ಸನ್, ಇಕ್ಬಾಲ್ ಹಸನ್ ಎಮನ್, ವಾಸಿ ಸಿದ್ದಿಕಿ, ಮರೂಫ್ ಮೃಧಾ.
ಮೀಸಲು ಆಟಗಾರರು: ನಯೀಮ್ ಅಹ್ಮದ್, ರಿಜಾನ್ ಹೊಸನ್, ಅಶ್ರಫುಲ್ ಹಸನ್, ತನ್ವೀರ್ ಅಹ್ಮದ್, ಅಕಾಂತೋ ಶೇಖ್
Published On - 8:01 pm, Thu, 18 January 24