U19 World Cup: ಮತ್ತೊಂದು ಸಿಡಿಲಬ್ಬರದ ಶತಕ ಸಿಡಿಸಿದ ಮುಶೀರ್ ಖಾನ್; ಕಿವೀಸ್​ಗೆ 296 ರನ್ ಟಾರ್ಗೆಟ್

U19 World Cup 2024: ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್‌ನ ಸೂಪರ್ ಸಿಕ್ಸ್ ಹಂತದ ಮೊದಲ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್​ಗಳನ್ನು ಕಳೆದುಕೊಂಡು 295 ರನ್ ಕಲೆಹಾಕಿದೆ.

U19 World Cup: ಮತ್ತೊಂದು ಸಿಡಿಲಬ್ಬರದ ಶತಕ ಸಿಡಿಸಿದ ಮುಶೀರ್ ಖಾನ್; ಕಿವೀಸ್​ಗೆ 296 ರನ್ ಟಾರ್ಗೆಟ್
ಮುಶೀರ್ ಖಾನ್
Follow us
ಪೃಥ್ವಿಶಂಕರ
|

Updated on:Jan 30, 2024 | 6:19 PM

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್‌ನ (U19 World Cup 2024) ಸೂಪರ್ ಸಿಕ್ಸ್ ಹಂತದ ಮೊದಲ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ (India U-19 vs New Zealand U-19) ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್​ಗಳನ್ನು ಕಳೆದುಕೊಂಡು 295 ರನ್ ಕಲೆಹಾಕಿದೆ. ತಂಡದ ಪರ ಆರಂಭಿಕ ಆದರ್ಶ್​ ಸಿಂಗ್ (Adarsh Singh) ಅರ್ಧಶತಕ ಸಿಡಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಸ್ಫೋಟಕ ಬ್ಯಾಟರ್ ಮುಶೀರ್ ಖಾನ್ (Musheer Khan) ಲೀಗ್​ನಲ್ಲಿ ಸತತ ಎರಡನೇ ಶತಕ ಸಿಡಿಸಿ ಮಿಂಚಿದರು.

ಆದರ್ಶ್​ ಅರ್ಧಶತಕ

ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಮೊದಲ ವಿಕೆಟ್​ಗೆ 28 ರನ್​ಗಳ ಜೊತೆಯಾಟ ಬಂತು. ಕಳೆದ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ಆರಂಭಿಕ ಅರ್ಶಿನ್ ಕುಲಕರ್ಣಿ ಈ ಪಂದ್ಯದಲ್ಲಿ ಕೇವಲ 8 ರನ್​ಗಳಿಗೆ ಸುಸ್ತಾದರು. ಆದರೆ ಆ ಬಳಿಕ ಜೊತೆಯಾದ ಆದರ್ಶ್​ ಹಾಗೂ ಮುಶೀರ್ ಅರ್ಧಶತಕದ ಜೊತೆಯಾಟ ನಡೆಸಿದರು. ಈ ವೇಳೆ ಅರ್ಧಶತಕ ಸಿಡಿಸಿದ ಆದರ್ಶ್​ 52 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರೆ, ಮುಶೀರ್ ಖಾನ್ ಅರ್ಧಶತಕ ಸಿಡಿಸಿ ಮಿಂಚಿದರು.

U19 World Cup 2024: ಮುಶೀರ್ ಖಾನ್ ಶತಕ; ಭಾರತಕ್ಕೆ 201 ರನ್​ಗಳ ಭರ್ಜರಿ ಜಯ

131 ರನ್ ಸಿಡಿಸಿದ ಮುಶೀರ್

ಆದರ್ಶ್​ ವಿಕೆಟ್ ಪತನದ ಬಳಿಕ ಬಂದ ನಾಯಕ ಉದಯ್, ಮುಶೀರ್​ಗೆ ಉತ್ತಮ ಸಾಥ್ ನೀಡಿದರು. ಈ ಇಬ್ಬರ ನಡುವೆಯೂ ಅರ್ಧಶತಕದ ಜೊತೆಯಾಟ ನಡೆಯಿತು. ಇಬ್ಬರು ಸೇರಿ ತಂಡವನ್ನು ಬಿಗ್ ಸ್ಕೋರ್​ಗೆ ಕೊಂಡೊಯ್ಯುತ್ತಾರೆ ಎಂದುಕೊಳ್ಳುವ ವೇಳೆಗೆ ನಾಯಕ ಉದಯ್ 34 ರನ್​ಗಳಿಗೆ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರು. ಆದರೆ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಮುಶೀರ್, 126 ಎಸೆತಗಳಲ್ಲಿ 13 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 131 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಕಟ್ಟಿದರು. ಇವರ ಈ ಆಟದಿಂದಾಗಿ ತಂಡ ಮುನ್ನೂರು ರನ್​ಗಳ ಸಮೀಪಕ್ಕೆ ಬಂತು.

ಸತತ ಎರಡನೇ ಶತಕ

ಅಂಡರ್-19 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಪರ ಉತ್ತಮ ಪ್ರದರ್ಶನ ನೀಡುತ್ತಿರುವ ಯುವ ಬ್ಯಾಟ್ಸ್‌ಮನ್ ಮುಶೀರ್ ಖಾನ್​ಗೆ ಟೂರ್ನಿಯಲ್ಲಿ ಇದು ಸತತ ಎರಡನೇ ಶತಕವಾಗಿದೆ. ನ್ಯೂಜಿಲೆಂಡ್ ವಿರುದ್ಧ ಶತಕ ಸಿಡಿಸುವುದುಕ್ಕು ಮುನ್ನ ಮುಶೀರ್, ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಶತಕದ ಇನ್ನಿಂಗ್ಸ್ ಆಡಿದ್ದರು. ಆ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಮುಶೀರ್ ಖಾನ್ 106 ಎಸೆತಗಳನ್ನು ಎದುರಿಸಿ 4 ಸಿಕ್ಸರ್ ಮತ್ತು 9 ಬೌಂಡರಿಗಳ ನೆರವಿನಿಂದ 118 ರನ್ ಗಳಿಸಿದರು. ಅಲ್ಲದೆ ನಾಯಕ ಉದಯ್ ಅವರೊಂದಿಗೆ ಮೂರನೇ ವಿಕೆಟ್‌ಗೆ ಮುಶೀರ್ 156 ರನ್‌ಗಳ ಪ್ರಮುಖ ಜೊತೆಯಾಟವನ್ನು ಹಂಚಿಕೊಂಡಿದ್ದರು. ಈ ಕಾರಣದಿಂದಾಗಿ ಭಾರತ ತಂಡ 301 ರನ್‌ ಕಲೆ ಹಾಕಿ 201 ರನ್​ಗಳಿಂದ ಗೆಲುವು ಸಾಧಿಸಲು ಸಾಧ್ಯವಾಯಿತು.

ಈ ವಿಶ್ವಕಪ್​ನಲ್ಲಿ 300 ಕ್ಕೂ ಹೆಚ್ಚು ರನ್

2024ರ ಅಂಡರ್ 19 ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಮುಶೀರ್ ಖಾನ್ ಅಗ್ರಸ್ಥಾನದಲ್ಲಿದ್ದಾರೆ. ಈ ಟೂರ್ನಿಯಲ್ಲಿ ಅವರು 300 ರನ್‌ಗಳ ಗಡಿ ದಾಟಿದ್ದಾರೆ. ಮುಶೀರ್ ಖಾನ್ ಬಿಟ್ಟರೆ ಈ ಬಾರಿ ಯಾವುದೇ ಆಟಗಾರ 300 ರನ್ ಗಡಿ ಮುಟ್ಟಿಲ್ಲ. ಈ ಅವಧಿಯಲ್ಲಿ ಮುಶೀರ್ ಖಾನ್ 2 ಶತಕ ಹಾಗೂ 1 ಅರ್ಧ ಶತಕ ಬಾರಿಸಿದ್ದಾರೆ.

Published On - 5:27 pm, Tue, 30 January 24

ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ವಿಜಯೇಂದ್ರ ಸಭೆ ನಡೆಸಿದರೆ ನನಗ್ಯಾಕೆ ಹಿನ್ನಡೆಯಾದೀತು: ಬಸನಗೌಡ ಯತ್ನಾಳ್
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ತ್ಯಾಗದ ಪ್ರತಿಫಲ;ರಾಮಮಂದಿರ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಕುರಿತು ಮೋದಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ನಿಖಿಲ್ ರಾಜ್ಯಾಧ್ಯಕ್ಷನಾಗಲಿ ಅಂತ ನನ್ನ ಮಗ ಹೇಳಿದರೆ ತಪ್ಪೇನು? ಜಿಟಿಡಿ
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಜೆಡಿಎಸ್ ಸಭೆಗೂ ಹೋಗಲ್ಲ, ಸಂಘಟನೆಗೂ ಬರಲ್ಲ: ಜಿಟಿ ದೇವೇಗೌಡ ಖಡಕ್ ಮಾತು
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಸಿದ್ದರಾಮಯ್ಯ, ನಾನು ಪಕ್ಷ ಹೇಳಿದಂತೆ ಸರ್ಕಾರ ನಡೆಸುತ್ತೇವೆ: ಶಿವಕುಮಾರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ಕಾಂಗ್ರೆಸ್ ಮುಖಂಡರಿಗೆ ಹೈಕಮಾಂಡ್ ನೀಡುವ ಆದೇಶವೇ ಅಂತಿಮ: ಪರಮೇಶ್ವರ್
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ನಕ್ಸಲ್ ನಾಯಕ ವಿಕ್ರಂಗೌಡನ ಎನ್ಕೌಂಟರ್ ಸಹ ಸಂಶಯ ಹುಟ್ಟಿಸುತ್ತಿದೆ: ಅಣ್ಣಾಮಲೈ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ಮುಡಾ ಅಧಿಕಾರಿಗಳು ತಾಯಿಯ ಒಡಲನ್ನು ಬಗೆಯುತ್ತಿದ್ದಾರೆ: ಸ್ನೇಹಮಯಿ ಕೃಷ್ಣ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ