AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

U19 WC 2024 Final: ಭಾರತ- ಪಾಕ್ ವಿಶ್ವಕಪ್ ಫೈನಲ್​ ಫೈಟ್ ನಾಳೆ ನಿರ್ಧಾರ..!

U19 World Cup 2024: ಅಂಡರ್ 19 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ ತಂಡಗಳು ಇದೇ ಫೆಬ್ರವರಿ 8 ರಂದು ಮುಖಾಮುಖಿಯಾಗುತ್ತಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೆಬ್ರವರಿ 11 ರಂದು ಭಾರತದ ವಿರುದ್ಧ ಫೈನಲ್ ಪಂದ್ಯವನ್ನು ಆಡಲಿದೆ.

U19 WC 2024 Final: ಭಾರತ- ಪಾಕ್ ವಿಶ್ವಕಪ್ ಫೈನಲ್​ ಫೈಟ್ ನಾಳೆ ನಿರ್ಧಾರ..!
ಭಾರತ- ಪಾಕಿಸ್ತಾನ
ಪೃಥ್ವಿಶಂಕರ
|

Updated on:Feb 07, 2024 | 7:24 PM

Share

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ವಿಶ್ವಕಪ್‌ನ (U19 World Cup 2024) ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಫ್ರಿಕಾ ತಂಡವನ್ನು 2 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಭಾರತ ಯುವ ಪಡೆ ಫೈನಲ್‌ಗೆ ತನ್ನ ಟಿಕೆಟ್ ಕಾಯ್ದಿರಿಸಿದೆ. ಈಗ ಟೀಂ ಇಂಡಿಯಾ (Team India) ಫೆಬ್ರವರಿ 11 ರಂದು ಅಂಡರ್ 19 ವಿಶ್ವಕಪ್‌ನ ಫೈನಲ್ ಪಂದ್ಯವನ್ನು ಆಡಬೇಕಾಗಿದ್ದು, ಭಾರತ ಯಾವ ತಂಡವನ್ನು ಎದುರಿಸಿದೆ ಎಂಬುದು ನಾಳೆ ನಿರ್ಧಾರವಾಗಲಿದೆ. ವಾಸ್ತವವಾಗಿ ಅಂಡರ್ 19 ವಿಶ್ವಕಪ್​ನ ಎರಡನೇ ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Pakistan and Australia) ತಂಡಗಳು ಇದೇ ಫೆಬ್ರವರಿ 8 ರಂದು ಮುಖಾಮುಖಿಯಾಗುತ್ತಿವೆ. ಈ ಪಂದ್ಯದಲ್ಲಿ ಗೆಲ್ಲುವ ತಂಡ ಫೆಬ್ರವರಿ 11 ರಂದು ಭಾರತದ ವಿರುದ್ಧ ಫೈನಲ್ ಪಂದ್ಯವನ್ನು ಆಡಲಿದೆ. ಆದರೆ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡವೇ ಭಾರತಕ್ಕೆ ಎದುರಾಳಿಯಾಗಿರಲಿ ಎಂಬುದು ಅಭಿಮಾನಿಗಳ ಆಶಯವಾಗಿದೆ.

ಹೈ ವೋಲ್ಟೇಜ್ ಸ್ಪರ್ಧೆಗೆ ಕಾತುರ

ಕ್ರಿಕೆಟ್ ಲೋಕದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವೆಂದರೆ ಅದು ಯಾವ ಹೈ ವೋಲ್ಟೇಜ್ ಪಂದ್ಯಕ್ಕೂ ಕಡಿಮೆ ಇಲ್ಲ. ಈ ಉಭಯ ತಂಡಗಳ ನಡುವಿನ ಪಂದ್ಯಗಳನ್ನು ಭಾರತ ಮತ್ತು ಪಾಕಿಸ್ತಾನದ ಅಭಿಮಾನಿಗಳು ಮಾತ್ರ ವೀಕ್ಷಿಸುವುದಿಲ್ಲ. ಬದಲಿಗೆ ವಿಶ್ವದಾದ್ಯಂತದ ಅಭಿಮಾನಿಗಳು ಈ ಹೈ ವೋಲ್ಟೇಜ್ ಪಂದ್ಯಕ್ಕಾಗಿ ಕಾಯುತ್ತಿರುತ್ತಾರೆ. ಹೀಗಾಗಿ ಕೋಟ್ಯಂತರ ಅಭಿಮಾನಿಗಳು ಪಾಕಿಸ್ತಾನ ಫೈನಲ್ ತಲುಪಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ. ಒಂದು ವೇಳೆ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮುಖಾಮುಖಿಯಾದರೆ, ಅಭಿಮಾನಿಗಳಿಗೆ ಇದಕ್ಕಿಂತ ದೊಡ್ಡ ಸಿಹಿ ಸುದ್ದಿ ಇನ್ನೊಂದಿಲ್ಲ.

ಭಾರತ- ಪಾಕ್ ಒಂದು ಪಂದ್ಯವನ್ನೂ ಸೋತಿಲ್ಲ

ಈ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಇದುವರೆಗೆ ಒಟ್ಟು 6 ಪಂದ್ಯಗಳನ್ನು ಆಡಿದೆ. ಆಡಿದ ಎಲ್ಲಾ 6 ಪಂದ್ಯಗಳನ್ನು ಭಾರತ ಗೆದ್ದಿದೆ. ವಿಶೇಷವೆಂದರೆ ಟೀಂ ಇಂಡಿಯಾ 3 ಲೀಗ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಭಾರಿ ಅಂತರದ ಗೆಲುವು ಸಾಧಿಸಿತ್ತು. ಆ ಬಳಿಕ ನಡೆದ ಸೂಪರ್ ಸಿಕ್ಸ್ ಸುತ್ತಿನಲ್ಲೂ ಭಾರತಕ್ಕೆ ಭರ್ಜರಿ ಜಯ ದೊರಕಿತ್ತು. ಇದಾದ ಬಳಿಕ ನಡೆದ ಸೆಮಿಫೈನಲ್ ಪಂದ್ಯವನ್ನೂ ಭಾರತ ಗೆದ್ದುಕೊಂಡಿದೆ. ಮತ್ತೊಂದೆಡೆ, ಈ ವಿಶ್ವಕಪ್‌ನಲ್ಲಿ ಪಾಕಿಸ್ತಾನದ ದಾಖಲೆಯೂ ಉತ್ತಮವಾಗಿದೆ. ಪಾಕಿಸ್ತಾನ ಕೂಡ ಈ ವಿಶ್ವಕಪ್‌ನಲ್ಲಿ ಆಡಿದ ಎಲ್ಲಾ ಲೀಗ್ ಪಂದ್ಯಗಳನ್ನು ಗೆದ್ದು ನೇರವಾಗಿ ಸೆಮಿಫೈನಲ್ ತಲುಪಿದೆ. ಇಂತಹ ಪರಿಸ್ಥಿತಿಯಲ್ಲಿ ಪಾಕಿಸ್ತಾನವನ್ನು ಸೋಲಿಸುವುದು ಆಸ್ಟ್ರೇಲಿಯಾಕ್ಕೆ ಅಷ್ಟು ಸುಲಭವಲ್ಲ.

ಕಾಂಗರೂ ತಂಡದ ಪ್ರದರ್ಶನ ಹೀಗಿದೆ

ಈ ಬಾರಿಯ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ಒಟ್ಟು 4 ಪಂದ್ಯಗಳನ್ನು ಆಡಿದ್ದು, ಈ ಪೈಕಿ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದ್ದರೆ, ಉಳಿದ 3 ಪಂದ್ಯಗಳನ್ನು ಕಾಂಗರೂ ತಂಡ ಗೆದ್ದಿದೆ. ಈ ದೃಷ್ಟಿಕೋನದಿಂದ ನೋಡಿದರೆ, ಉಭಯ ತಂಡಗಳ ಬಲಿಷ್ಠವಾಗಿ ಕಾಣುತ್ತಿವೆ. ಪಾಕ್ ತಂಡದ ಆಟಗಾರರು ಅತ್ಯುತ್ತಮ ಫಾರ್ಮ್‌ನಲ್ಲಿರುವುದರಿಂದ ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾವನ್ನು, ಪಾಕಿಸ್ತಾನ ತಂಡ ಸೋಲಿಸಲಿದೆ ಎಂಬುದು ಪರಿಣಿತರ ಅಭಿಪ್ರಾಯವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:23 pm, Wed, 7 February 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ