ಒಂದೇ ಓವರ್​ನಲ್ಲಿ 5 ಸಿಕ್ಸ್; 13 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಅಫ್ರಿಕಾ ಬ್ಯಾಟರ್..! ವಿಡಿಯೋ ನೋಡಿ

U19 World Cup 2024: ದಕ್ಷಿಣ ಆಫ್ರಿಕಾದ ಸೆನ್ವೆಸ್ ಪಾರ್ಕ್​ನಲ್ಲಿ ನಡೆದ ಆತಿಥೇಯ ದಕ್ಷಿಣ ಆಫ್ರಿಕಾ ಸ್ಕಾಟ್ಲೆಂಡ್ ನಡುವಿನ ಅಂಡರ್-19 ವಿಶ್ವಕಪ್‌ ಪಂದ್ಯದಲ್ಲಿ ಆಫ್ರಿಕಾದ ಆರಂಭಿಕ ಬ್ಯಾಟ್ಸ್‌ಮನ್ ಸ್ಟೀವ್ ಸ್ಟೋಕ್, ಕೇವಲ 13 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದಾರೆ.

ಒಂದೇ ಓವರ್​ನಲ್ಲಿ 5 ಸಿಕ್ಸ್; 13 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಅಫ್ರಿಕಾ ಬ್ಯಾಟರ್..! ವಿಡಿಯೋ ನೋಡಿ
ಸ್ಟೀವ್ ಸ್ಟೋಕ್
Follow us
|

Updated on: Jan 27, 2024 | 8:44 PM

ದಕ್ಷಿಣ ಆಫ್ರಿಕಾದ ಸೆನ್ವೆಸ್ ಪಾರ್ಕ್​ನಲ್ಲಿ ನಡೆದ ಆತಿಥೇಯ ದಕ್ಷಿಣ ಆಫ್ರಿಕಾ ಹಾಗೂ ಸ್ಕಾಟ್ಲೆಂಡ್ (Scotland U-19 vs South Africa U-19) ನಡುವಿನ ಅಂಡರ್-19 ವಿಶ್ವಕಪ್‌ (U19 World Cup 2024) ಪಂದ್ಯದಲ್ಲಿ ಆಫ್ರಿಕಾದ ಆರಂಭಿಕ ಬ್ಯಾಟ್ಸ್‌ಮನ್ ಸ್ಟೀವ್ ಸ್ಟೋಕ್ (Steve Stolk), ಕೇವಲ 13 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಸಂಚಲನ ಮೂಡಿಸಿದ್ದಾರೆ. 17 ವರ್ಷದ ಸ್ಟೀವ್ ಇನ್ನಿಂಗ್ಸ್‌ನ ಮೊದಲ ಮೂರು ಓವರ್‌ಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದ್ದು ಅವರ ಸಿಡಿಲಬ್ಬರದ ಬ್ಯಾಟಿಂಗ್​ಗೆ ಸಾಕ್ಷಿಯಾಗಿತ್ತು. ಅಷ್ಟೇ ಅಲ್ಲದೆ ಒಂದೇ ಓವರ್​ನಲ್ಲಿ ಸತತ ಐದು ಸಿಕ್ಸರ್ ಬಾರಿಸುವ ಮೂಲಕ ಸ್ಟೀವ್ ಸ್ಟೋಕ್, ಸ್ಕಾಟ್ಲೆಂಡ್ ಬೌಲರ್​ಗಳ ಬೆವರಿಳಿಸಿದರು.

269 ರನ್ ಕಲೆಹಾಕಿದ ಸ್ಕಾಟ್ಲೆಂಡ್

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸ್ಕಾಟ್ಲೆಂಡ್ ತಂಡ 9 ವಿಕೆಟ್ ಕಳೆದುಕೊಂಡು 269 ರನ್ ಕಲೆಹಾಕಿತು. ತಂಡದ ಪರ ಆರಂಭಿಕ ಜೇಮೀ ಡಂಕ್ 90 ರನ್​ ಕಲೆಹಾಕಿದರೆ, 10 ರನ್​ಗಳಿಂದ ಶತಕವಂಚಿತರಾದರು. ಹಾಗೆಯೇ ಮಧ್ಯಮ ಕ್ರಮಾಂಕದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದ ನಾಯಕ ಓವನ್ ಗ್ವಿನ್ ಗೌಲ್ಡ್ ಥಾಮಸ್ 97 ರನ್​ಗಳಿಗೆ ವಿಕೆಟ್ ಒಪ್ಪಿಸುವ ಮೂಲಕ ಕೇವಲ 3 ರನ್​ಗಳಿಂದ ಶತಕ ವಂಚಿತರಾದರು. ಈ ಇಬ್ಬರ ಈ ಆಟದಿಂದಾಗಿ ತಂಡ 269 ರನ್ ಕಲೆಹಾಕಿತು.

3 ವಿಕೆಟ್ ಪಡೆದ ರಿಲೆ ನಾರ್ಟನ್

ದಕ್ಷಿಣ ಆಫ್ರಿಕಾ ಪರ ಬೌಲಿಂಗ್‌ನಲ್ಲಿ ರಿಲೆ ನಾರ್ಟನ್ ಗರಿಷ್ಠ ಮೂರು ವಿಕೆಟ್ ಪಡೆದರು. ತಮ್ಮ ಖೋಟಾದ 9 ಓವರ್ ಬೌಲ್ ಮಾಡಿದ ನಾರ್ಟನ್ 48 ರನ್ ನೀಡಿ 3 ವಿಕೆಟ್ ಪಡೆದರೆ, ಕ್ವೆನಾ ಮಫಕಾ 10 ಓವರ್‌ಗಳಲ್ಲಿ 53 ರನ್‌ ನೀಡಿ 2 ವಿಕೆಟ್‌ ಕಬಳಿಸಿದರು. ಸಿಫೊ ಪೊಟ್ಸೆನ್‌ ಕೂಡ ಒಂದು ವಿಕೆಟ್‌ ಪಡೆಯುವಲ್ಲಿ ಯಶಸ್ವಿಯಾದರು.

37 ಎಸೆತಗಳಲ್ಲಿ 86 ರನ್‌

269 ರನ್​ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ಸ್ಟೀವ್ ಕೇವಲ 37 ಎಸೆತಗಳಲ್ಲಿ 86 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರ ಈ ಸ್ಫೋಟಕ ಇನ್ನಿಂಗ್ಸ್​ನಲ್ಲಿ 7 ಬೌಂಡರಿ ಹಾಗೂ 8 ಸಿಕ್ಸರ್‌ಗಳು ಸೇರಿದ್ದವು. ಲುವಾನ್-ಡ್ರೆ ಪ್ರಿಟೋರಿಯಸ್ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ್ದ ಸ್ಟೀಲ್ ಮೊದಲ ವಿಕೆಟ್‌ಗೆ ಕೇವಲ 54 ಎಸೆತಗಳಲ್ಲಿ 114 ರನ್‌ಗಳ ಶತಕದ ಜೊತೆಯಾಟವನ್ನು ಹಂಚಿಕೊಂಡರು.

View this post on Instagram

A post shared by ICC (@icc)

ಸುಲಭವಾಗಿ ಗೆದ್ದ ಆಫ್ರಿಕಾ

ಸ್ಫೋಟಕ ಆರಂಭದ ಲಾಭ ಪಡೆದ ಆಫ್ರಿಕಾ ತಂಡದ ಉಳಿದ ಬ್ಯಾಟರ್​ಗಳು ತಂಡವನ್ನು ಸುಲಭವಾಗಿ ಗೆಲುವಿನ ದಡ ಮುಟ್ಟಿಸಿದರು. ಆರಂಭಿಕ ಸ್ಟೀವ್​ರನ್ನು ಹೊರತುಪಡಿಸಿ ದಿವಾನ್ ಮರೈಸ್ 50 ಎಸೆತಗಳಲ್ಲಿ 8 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅಜೇಯ 80 ರನ್ ಹಾಗೂ ಡೇವಿಡ್ ಟೀಗರ್ ಅಜೇಯ 43 ರನ್ ಕೆಲಹಾಕುವ ಮೂಲಕ ಕೇವಲ 27 ಓವರ್​ಗಳಲ್ಲೇ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!