U19 World Cup 2024: ಆಸ್ಟ್ರೇಲಿಯಾ ಗೆಲುವಿಗೆ ಸಾಧಾರಣ ಟಾರ್ಗೆಟ್ ನೀಡಿದ ಪಾಕಿಸ್ತಾನ

U19 World Cup 2024: ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ವಿಶ್ವಕಪ್‌ನ ಎರಡನೇ ಸೆಮಿಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ 178ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಆಸ್ಟ್ರೇಲಿಯಾಕ್ಕೆ 179 ರನ್​ಗಳ ಟಾರ್ಗೆಟ್ ನೀಡಿದೆ.

U19 World Cup 2024: ಆಸ್ಟ್ರೇಲಿಯಾ ಗೆಲುವಿಗೆ ಸಾಧಾರಣ ಟಾರ್ಗೆಟ್ ನೀಡಿದ ಪಾಕಿಸ್ತಾನ
ಆಸ್ಟ್ರೇಲಿಯಾ- ಪಾಕಿಸ್ತಾನ
Follow us
ಪೃಥ್ವಿಶಂಕರ
|

Updated on:Feb 08, 2024 | 5:30 PM

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್-19 ವಿಶ್ವಕಪ್‌ನ (Under-19 World Cup 2024) ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ಮತ್ತು ಆಸ್ಟ್ರೇಲಿಯಾ (Australia vs Pakistan) ತಂಡಗಳು ಮುಖಾಮುಖಿಯಾಗಿವೆ. ಪಂದ್ಯದ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ಉಸ್ತುವಾರಿ ನಾಯಕ ಹ್ಯೂ ವೆಬ್‌ಗೆನ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಅದರಂತೆ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಪೂರ್ಣ 50 ಓವರ್​ಗಳನ್ನು ಆಡಲು ಸಾಧ್ಯವಾಗದೆ 48.5 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 178 ರನ್ ಕಲೆಹಾಕಿದೆ. ಈ ಮೂಲಕ ಆಸ್ಟ್ರೇಲಿಯಾ ಗೆಲುವಿಗೆ 179 ರನ್​ಗಳ ಸಾಧಾರಣ ಸವಾಲನ್ನು ನೀಡಿದೆ. ತಂಡದ ಪರ ಅಜಾನ್ ಅವೈಸ್ 52 ರನ್ ಹಾಗೂ ಅರಾಫತ್ ಮಿನ್ಹಾಸ್ 52 ರನ್​ಗಳ ಇನ್ನಿಂಗ್ಸ್ ಆಡುವ ಮೂಲಕ ತಂಡವನ್ನು ಸವಾಲಿನ ಮೊತ್ತಕ್ಕೆ ಕೊಂಡೊಯ್ದರು. ಆಸೀಸ್ ಪರ ಬೌಲಿಂಗ್​ನಲ್ಲಿ ಮಿಂಚಿದ ಟಾಮ್ ಸ್ಟ್ರಾಕರ್ (Tom Straker) ಬರೋಬ್ಬರಿ 6 ವಿಕೆಟ್ ಕಬಳಿಸಿ ಮಿಂಚಿದರು.

ಪಾಕ್ ತಂಡಕ್ಕೆ ಕಳಪೆ ಆರಂಭ

ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ 25 ರನ್​ ಇರುವಾಗ ಶಾಮಿಲ್ ಹುಸೇನ್ (17 ರನ್) ರೂಪದಲ್ಲಿ ತಂಡದ ಮೊದಲ ವಿಕೆಟ್ ಪತನವಾಯಿತು. ಕೇವಲ ಎರಡು ರನ್​ಗಳ ಅಂತರದಲ್ಲಿ ಮತ್ತೊಂದು ವಿಕೆಟ್ ಪತನವಾಯಿತು. ಮೂರನೇ ಕ್ರಮಾಂಕದಲ್ಲಿ ಬಂದ ಅಜಾನ್ ಅವೈಸ್ ಹೊತುಪಡಿಸಿ ಉಳಿದ ಆಟಗಾರರೆಲ್ಲ ಒಂದಂಕಿಗೆ ಸುಸ್ತಾದರು. ಆದರೆ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ಅವೈಸ್ 52 ರನ್​ಗಳ ಇನ್ನಿಂಗ್ಸ್ ಆಡಿದರು.

ಒಂದಂಕಿಗೆ ಸುಸ್ತಾದ 7 ಬ್ಯಾಟರ್ಸ್​

ಹಾಗೆಯೇ 7ನೇ ಕ್ರಮಾಂಕದಲ್ಲಿ ಬಂದ ಅರಾಫತ್ ಮಿನ್ಹಾಸ್ ಕೂಡ ಅವೈಸ್​ಗೆ ಸಾಥ್ ನೀಡಿ ತಂಡವನ್ನು 100ರ ಗಡಿ ದಾಟಿಸಿದರು. ಈ ವೇಳೆ ಮಿನ್ಹಾಸ್ ಕೂಡ 52 ರನ್​ಗಳ ಕೊಡುಗೆ ನೀಡಿದರು. ಈ ಇಬ್ಬರನ್ನು ಹೊರತುಪಡಿಸಿ ತಂಡದ ಉಳಿದ ಯಾರಿಂದಲೂ ಅಂತಹ ಪ್ರದರ್ಶನ ಹೊರಬರಲಿಲ್ಲ. ತಂಡದ ಪರ ಕೇವಲ ಮೂವರು ಆಟಗಾರರು ಎರಡಂಕಿ ಮೊತ್ತವನ್ನು ದಾಟಿದನ್ನು ಬಿಟ್ಟರೆ ಉಳಿದವರೆಲ್ಲರೂ ಒಂದಂಕಿಗೆ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ತಂಡ ಅಲ್ಪ ರನ್​ಗಳಿಗೆ ಆಲೌಟ್ ಆಗಬೇಕಾಯಿತು.

ಉಭಯ ತಂಡಗಳು

ಆಸ್ಟ್ರೇಲಿಯಾ ತಂಡ: ಹ್ಯಾರಿ ಡಿಕ್ಸನ್, ಸ್ಯಾಮ್ ಕಾನ್ಸ್ಟಾಸ್, ಹಗ್ ವೈಬ್ಜೆನ್ (ನಾಯಕ), ಹರ್ಜಸ್ ಸಿಂಗ್, ರಿಯಾನ್ ಹಿಕ್ಸ್ (ವಿಕೆಟ್ ಕೀಪರ್), ಟಾಮ್ ಕ್ಯಾಂಪ್‌ಬೆಲ್, ಆಲಿವರ್ ಪೀಕ್, ರಾಫ್ ಮ್ಯಾಕ್‌ಮಿಲನ್, ಟಾಮ್ ಸ್ಟ್ರಾಕರ್, ಮಾಹ್ಲಿ ಬಿಯರ್ಡ್‌ಮ್ಯಾನ್, ಕ್ಯಾಲಮ್ ವಿಡ್ಲರ್

ಪಾಕಿಸ್ತಾನ ತಂಡ: ಶಾಮಿಲ್ ಹುಸೇನ್, ಶಹಜೈಬ್ ಖಾನ್, ಅಜಾನ್ ಅವೈಸ್, ಸಾದ್ ಬೇಗ್ (ನಾಯಕ & ವಿಕೆಟ್ ಕೀಪರ್), ಅಹ್ಮದ್ ಹಸನ್, ಹರೂನ್ ಅರ್ಷದ್, ಅರಾಫತ್ ಮಿನ್ಹಾಸ್, ನವೀದ್ ಅಹ್ಮದ್ ಖಾನ್, ಉಬೈದ್ ಶಾ, ಮೊಹಮ್ಮದ್ ಜೀಶನ್, ಅಲಿ ರಜಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Thu, 8 February 24

ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
ಬಸ್‌ ಪ್ರಯಾಣ ದರ ಹೆಚ್ಚಿಸಿದ್ದಕ್ಕೆ ಸಂಸದ ಯದುವೀರ್ ಗರಂ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
‘ಪಿನಾಕ’ ಸಿನಿಮಾಗೆ ಪವರ್​ಫುಲ್ ಡೈಲಾಗ್ ಬರೆದ ರಘುಗೆ ಗಣೇಶ್​ ಮೆಚ್ಚುಗೆ
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ