AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಒಂದು ಪಂದ್ಯ ಗೆಲ್ಲದೆ ಸೂಪರ್​ ಸಿಕ್ಸ್​ಗೇರಿದ ನ್ಯೂಝಿಲೆಂಡ್

U19 World Cup 2026: ಅಂಡರ್-19 ಏಕದಿನ ವಿಶ್ವಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 12 ತಂಡಗಳು ಸೂಪರ್-6 ಹಂತಕ್ಕೇರಿದೆ. ಅದರಂತೆ ಸೂಪರ್-6 ಸುತ್ತಿನಲ್ಲಿ 12 ತಂಡಗಳು 2 ಗುಂಪುಗಳಾಗಿ ಕಣಕ್ಕಿಳಿಯಲಿವೆ. ಇಲ್ಲಿ ಗ್ರೂಪ್-2 ನಲ್ಲಿ ನ್ಯೂಝಿಲೆಂಡ್ ತಂಡ ಕಾಣಿಸಿಕೊಂಡಿರುವುದು ವಿಶೇಷ.

ಒಂದೇ ಒಂದು ಪಂದ್ಯ ಗೆಲ್ಲದೆ ಸೂಪರ್​ ಸಿಕ್ಸ್​ಗೇರಿದ ನ್ಯೂಝಿಲೆಂಡ್
New Zealand
ಝಾಹಿರ್ ಯೂಸುಫ್
|

Updated on: Jan 25, 2026 | 2:10 PM

Share

ಅಂಡರ್-19 ವಿಶ್ವಕಪ್​ನ ಮೊದಲ ಸುತ್ತಿನಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೇ ನ್ಯೂಝಿಲೆಂಡ್ ತಂಡವು ದ್ವಿತೀಯ ಸುತ್ತಿಗೆ ಪ್ರವೇಶಿಸಿದೆ. ಕೇಳಲು ಅಚ್ಚರಿ ಎನಿಸಿದರೂ ಇಂತಹದೊಂದು ಫಲಿತಾಂಶಕ್ಕೆ ಕಿರಿಯರ ವಿಶ್ವಕಪ್ ಪಾಯಿಂಟ್ಸ್ ಟೇಬಲ್​ ಸಾಕ್ಷಿಯಾಗಿದೆ.

ಈ ಟೂರ್ನಿಯಲ್ಲಿ ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿದ್ದ ನ್ಯೂಝಿಲೆಂಡ್ ತಂಡದ ಮೊದಲೆರಡು ಪಂದ್ಯಗಳು ಮಳೆಯ ಕಾರಣ ರದ್ದಾಗಿದ್ದವು. ಇನ್ನು ಮೂರನೇ ಪಂದ್ಯದಲ್ಲಿ ಭಾರತದ ವಿರುದ್ಧ 7 ವಿಕೆಟ್​ಗಳಿಂದ ಸೋಲನುಭವಿಸಿದ್ದರು.

ಅಂದರೆ ಮೂರು ಪಂದ್ಯಗಳಿಂದ ನ್ಯೂಝಿಲೆಂಡ್​ಗೆ ಸಿಕ್ಕಿರುವುದು ಕೇವಲ 2 ಅಂಕಗಳು ಮಾತ್ರ. ಅದು ಕೂಡ ರದ್ದಾದ ಪಂದ್ಯಗಳಿಂದ. ಆದರೆ ಇತ್ತ ಯುಎಸ್​ಎ ತಂಡವು ಆಡಿದ ಮೂರು ಪಂದ್ಯಗಳಿಂದ ಕೇವಲ 1 ಅಂಕ ಪಡೆಯಲಷ್ಟೇ ಶಕ್ತರಾಗಿದ್ದಾರೆ.

ಪರಿಣಾಮ ನ್ಯೂಝಿಲೆಂಡ್ ತಂಡವು ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸಿದೆ. ಈ ಮೂರನೇ ಸ್ಥಾನದೊಂದಿಗೆ ಕಿವೀಸ್ ಪಡೆ ಸೂಪರ್-6 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ.

ಸೂಪರ್ ಸಿಕ್ಸ್ ಹಂತದಲ್ಲಿ ನ್ಯೂಝಿಲೆಂಡ್ ತಂಡವು ಗ್ರೂಪ್-2 ನಲ್ಲಿ ಸ್ಥಾನ ಪಡೆದುಕೊಂಡಿದೆ. ಅದರಂತೆ ದ್ವಿತೀಯ ಸುತ್ತಿನಲ್ಲಿ ಪಾಕಿಸ್ತಾನ್ ಮತ್ತು ಇಂಗ್ಲೆಂಡ್ ತಂಡಗಳನ್ನು ಎದುರಿಸಲಿದೆ.

ಈ ಎರಡು ಪಂದ್ಯಗಳಲ್ಲಿ ನ್ಯೂಝಿಲೆಂಡ್ ತಂಡ ಜಯ ಸಾಧಿಸಿ ಗ್ರೂಪ್-2 ಅಂಕ ಪಟ್ಟಿಯಲ್ಲಿ ಟಾಪ್-2 ನಲ್ಲಿ ಸ್ಥಾನ ಪಡೆದರೆ ಸೆಮಿಫೈನಲ್​ಗೇರಬಹುದು.

ಹೀಗಾಗಿ ಸೂಪರ್-6 ಸುತ್ತಿನ ಎರಡೂ ಪಂದ್ಯಗಳು ನ್ಯೂಝಿಲೆಂಡ್ ತಂಡದ ಪಾಲಿಗೆ ನಿರ್ಣಾಯಕ. ಒಂದು ವೇಳೆ ಕಿವೀಸ್ ಪಡೆ ಸೂಪರ್-6 ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಸೆಮಿಫೈನಲ್​ಗೇರಿದರೆ, ಮೊದಲ ಸುತ್ತಿನಲ್ಲಿ ಒಂದೇ ಒಂದು ಪಂದ್ಯ ಗೆಲ್ಲದೆ ನಾಕೌಟ್ ಹಂತಕ್ಕೇರಿದ ತಂಡ ಎನಿಸಿಕೊಳ್ಳಲಿದೆ.

ಅಷ್ಟೇ ಅಲ್ಲದೆ ಫೈನಲ್​ಗೇರಿದೆ ಮೊದಲ ಮೂರು ಪಂದ್ಯಗಳಲ್ಲಿ ಜಯದ ಖಾತೆ ತೆರೆಯದೇ ಅಂತಿಮ ಹಂತಕ್ಕೇರಿದ ತಂಡವೆಂಬ ಹೆಗ್ಗಳಿಕೆಗೂ ಪಾತ್ರವಾಗಲಿದೆ. ಹೀಗಾಗಿ ಇದೀಗ ನ್ಯೂಝಿಲೆಂಡ್ ತಂಡದ ಮುಂದಿನ ಪಂದ್ಯಗಳು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ತ್ರಿ ಸೆಂಚುರಿ… ಸರ್ಫರಾಝ್ ಖಾನ್ ವಿಶ್ವ ದಾಖಲೆ

ಅದರಂತೆ ಪಾಕಿಸ್ತಾನ್ ಹಾಗೂ ಇಂಗ್ಲೆಂಡ್ ತಂಡಗಳಿಗೆ ಸೋಲುಣಿಸಿ ನ್ಯೂಝಿಲೆಂಡ್ ತಂಡವು ಈ ಬಾರಿಯ ಅಂಡರ್-19 ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಪೊಲೀಸರಿಗೆ ನೀಡಿದ್ದ ವಿಡಿಯೋ ಸೀಕ್ರೆಟ್ ಬಿಚ್ಚಿಟ್ಟ ಜನಾರ್ದನರೆಡ್ಡಿ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ
ಹೌಸ್​ಫುಲ್ ಪ್ರದರ್ಶನ ಕಂಡ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾ
ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು?
ಬೆಳಗಾವಿ ಗಡಿಯಲ್ಲಿ 400 ಕೋಟಿ ರೂ. ದರೋಡೆ; ಪರಮೇಶ್ವರ್ ಹೇಳಿದ್ದೇನು?
ಇಂದೇ ರಥಸಪ್ತಮಿ ಆಚರಣೆಯ ವಿಧಾನ ಹಾಗೂ ಮಹತ್ವ ಗೊತ್ತಾ?
ಇಂದೇ ರಥಸಪ್ತಮಿ ಆಚರಣೆಯ ವಿಧಾನ ಹಾಗೂ ಮಹತ್ವ ಗೊತ್ತಾ?
ಇಂದು ಈ ರಾಶಿಯವರ ಪ್ರೇಮಿಯಿಂದ ಮನ್ನಣೆ!
ಇಂದು ಈ ರಾಶಿಯವರ ಪ್ರೇಮಿಯಿಂದ ಮನ್ನಣೆ!
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?