AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rahmanullah Gurbaz: ಸ್ಪೋಟಕ ಶತಕ ಸಿಡಿಸಿದ ಗುರ್ಬಾಝ್

UAE vs Afghanistan: ಎಡಗೈ ಆರಂಭಿಕ ಆಟಗಾರ ಹಝ್ರತುಲ್ಲಾ ಝಝೈ (13) ವಿಕೆಟ್ ಪಡೆಯುವ ಮೂಲಕ ಯುಎಇ ತಂಡವು ಆರಂಭಿಕ ಯಶಸ್ಸು ಪಡೆಯಿತು. ಆದರೆ 2ನೇ ವಿಕೆಟ್​ಗೆ ಜೊತೆಯಾದ ಗುರ್ಬಾಝ್ ಮತ್ತು ಇಬ್ರಾಹಿಂ ಝದ್ರಾನ್ 137 ರನ್​ಗಳ ಭರ್ಜರಿ ಜೊತೆಯಾಟವಾಡಿದರು.

Rahmanullah Gurbaz: ಸ್ಪೋಟಕ ಶತಕ ಸಿಡಿಸಿದ ಗುರ್ಬಾಝ್
Rahmanullah Gurbaz
TV9 Web
| Updated By: ಝಾಹಿರ್ ಯೂಸುಫ್|

Updated on: Dec 30, 2023 | 7:28 AM

Share

ಶಾರ್ಜಾದಲ್ಲಿ ನಡೆದ ಯುಎಇ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ (Rahmanullah Gurbaz) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಯುಎಇ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ತಂಡಕ್ಕೆ ರಹಮಾನುಲ್ಲಾ ಗುರ್ಬಾಝ್ ಉತ್ತಮ ಆರಂಭ ಒದಗಿಸಿದ್ದರು.

ಆದರೆ ಅತ್ತ ಎಡಗೈ ಆರಂಭಿಕ ಆಟಗಾರ ಹಝ್ರತುಲ್ಲಾ ಝಝೈ (13) ವಿಕೆಟ್ ಪಡೆಯುವ ಮೂಲಕ ಯುಎಇ ತಂಡವು ಆರಂಭಿಕ ಯಶಸ್ಸು ಪಡೆಯಿತು. ಆದರೆ 2ನೇ ವಿಕೆಟ್​ಗೆ ಜೊತೆಯಾದ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ 137 ರನ್​ಗಳ ಭರ್ಜರಿ ಜೊತೆಯಾಟವಾಡಿದರು.

ಅದರಲ್ಲೂ ಬಿರುಸಿನ ಬ್ಯಾಟಿಂಗ್ ಮೂಲಕ ಅಬ್ಬರಿಸಿದ ಗುರ್ಬಾಝ್ ಯುಎಇ ಬೌಲರ್​ಗಳ ಬೆಂಡೆತ್ತಿದರು. ಮೈದಾನದ ಮೂಲೆ ಮೂಲೆಗೆ ಸಿಕ್ಸ್​-ಫೋರ್​ಗಳ ಸುರಿಮಳೆಗೈದ ಅಫ್ಘಾನ್ ತಂಡದ ಯುವ ಬ್ಯಾಟರ್ 49 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಪೂರೈಸಿದರು. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ 50 ಕ್ಕಿಂತ ಕಡಿಮೆ ಎಸೆತಗಳಲ್ಲಿ ಶತಕ ಪೂರೈಸಿದ ಬ್ಯಾಟರ್​ಗಳ ಪಟ್ಟಿಗೆ ಗುರ್ಬಾಝ್ ಹೆಸರು ಸೇರ್ಪಡೆಯಾಯಿತು.

ಇನ್ನು ಶತಕ ಬೆನ್ನಲ್ಲೇ ಬಿರುಸಿನ ಹೊಡೆತಕ್ಕೆ ಮುಂದಾದ ಗುರ್ಬಾಝ್ 52 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 100 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಇಬ್ರಾಹಿಂ ಝದ್ರಾನ್ 59 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಅಫ್ಘಾನಿಸ್ತಾನ್ ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 203 ರನ್​ ಕಲೆಹಾಕಿತು.

204 ರನ್​ಗಳ ಕಠಿಣ ಗುರಿ ಪಡೆದ ಯುಎಇ ಪರ ವೃತ್ಯ ಅರವಿಂದ್ 64 ಎಸೆತಗಳಲ್ಲಿ 70 ರನ್​ ಬಾರಿಸಿದರು. ಆದರೆ ಈ ನಿಧಾನಗತಿಯ ಬ್ಯಾಟಿಂಗ್​ನಿಂದಾಗಿ ಯುಎಇ ತಂಡವು ಕೇವಲ 4 ವಿಕೆಟ್ ಕಳೆದುಕೊಂಡು 131 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಅಫ್ಘಾನಿಸ್ತಾನ್ ತಂಡವು 72 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಯುಎಇ ಪ್ಲೇಯಿಂಗ್ ಇಲೆವೆನ್: ಮುಹಮ್ಮದ್ ವಸೀಮ್ (ನಾಯಕ) , ಖಾಲಿದ್ ಶಾ , ವೃತ್ಯ ಅರವಿಂದ್ , ತನಿಶ್ ಸೂರಿ (ವಿಕೆಟ್ ಕೀಪರ್) , ಬಸಿಲ್ ಹಮೀದ್ , ಸಮಲ್ ಉಡವತ್ಥ , ಅಲಿ ನಾಸೀರ್ , ಅಯಾನ್ ಅಫ್ಜಲ್ ಖಾನ್ , ನಿಲನ್ಶ್ ಕೇಸ್ವಾನಿ , ಮುಹಮ್ಮದ್ ಜವದುಲ್ಲಾ , ಜುನೈದ್ ಸಿದ್ದಿಕ್.

ಇದನ್ನೂ ಓದಿ: IPL 2024: ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸುರೇಶ್ ರೈನಾ..?

ಅಫ್ಘಾನಿಸ್ತಾನ್ ಪ್ಲೇಯಿಂಗ್ ಇಲೆವೆನ್: ರಹಮಾನುಲ್ಲಾ ಗುರ್ಬಾಝ್ (ವಿಕೆಟ್ ಕೀಪರ್) , ಹಝರತುಲ್ಲಾ ಝಝೈ , ಇಬ್ರಾಹಿಂ ಝದ್ರಾನ್ (ನಾಯಕ) , ಅಜ್ಮತುಲ್ಲಾ ಒಮರ್ಜಾಯ್ , ಮೊಹಮ್ಮದ್ ನಬಿ , ನಜಿಬುಲ್ಲಾ ಝದ್ರಾನ್ , ಕರೀಂ ಜನತ್ , ಖೈಸ್ ಅಹ್ಮದ್ , ನೂರ್ ಅಹ್ಮದ್ , ನವೀನ್-ಉಲ್-ಹಕ್ , ಫಝಲ್ಹಕ್​ ಫಾರೂಖಿ.

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ