ICC World Cup 2023: ಭಾರತ- ಇಂಗ್ಲೆಂಡ್ ವಿಶ್ವಕಪ್ ಕದನಕ್ಕೆ ಪ್ರಧಾನಿ ರಿಷಿ ಸುನಕ್ ಉಪಸ್ಥಿತಿ

India vs England, ICC World Cup 2023: ಅಕ್ಟೋಬರ್ 29 ರಂದು ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ವಿಶ್ವಕಪ್ ಪಂದ್ಯವನ್ನು ವೀಕ್ಷಿಸಲು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಮೈದಾನದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ.

ICC World Cup 2023: ಭಾರತ- ಇಂಗ್ಲೆಂಡ್ ವಿಶ್ವಕಪ್ ಕದನಕ್ಕೆ ಪ್ರಧಾನಿ ರಿಷಿ ಸುನಕ್ ಉಪಸ್ಥಿತಿ
ಪ್ರಾತಿನಿಧಿಕ ಚಿತ್ರ
Follow us
ಪೃಥ್ವಿಶಂಕರ
|

Updated on: Oct 12, 2023 | 11:43 AM

ಅಕ್ಟೋಬರ್ 29 ರಂದು ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಏಕದಿನ ವಿಶ್ವಕಪ್ (ICC world cup 2023) ಪಂದ್ಯವನ್ನು ವೀಕ್ಷಿಸಲು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಮೈದಾನದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ವರದಿಯಾಗಿದೆ. ಎರಡು ದೇಶಗಳ ನಡುವೆ ನಡೆಯುತ್ತಿರುವ ವ್ಯಾಪಾರ ಮಾತುಕತೆಗಳಿಗಾಗಿ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ (UK PM Rishi Sunak) ಅಕ್ಟೋಬರ್ ಅಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ. ಇದೆ ವೇಳೆ ಭಾರತ ಹಾಗೂ ಇಂಗ್ಲೆಂಡ್ ನಡುವಿವ ಪಂದ್ಯವನ್ನು ಸುನಕ್ ವೀಕ್ಷಿಸಲಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ. ಆದರೆ ಈ ವಿಚಾರದ ಬಗ್ಗೆ ಎರಡೂ ದೇಶಗಳಿಂದಲೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ದ್ವಿಪಕ್ಷೀಯ ಮಾತುಕತೆ

ಸುನಕ್ ಅವರ ಭೇಟಿಯ ಸಮಯದಲ್ಲಿ ಭಾರತ ಮತ್ತು ಯುಕೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್‌ಟಿಎ) ಸಹಿ ಹಾಕುವ ಸಾಧ್ಯತೆಯಿದೆ. ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸುನಕ್ ಕಳೆದ ತಿಂಗಳು ಭಾರತಕ್ಕೆ ಬಂದಿದ್ದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸುನಕ್ ದ್ವಿಪಕ್ಷೀಯ ಮಾತುಕತೆ ನಡೆಸಿದ್ದರು. ಇದೇ ವೇಳೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆಗಳಿಗಾಗಿ ಭಾರತಕ್ಕೆ ಆಹ್ವಾನ ನೀಡಿದ್ದರು. ಈ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯ ಕೂಡ ಪ್ರಕಟಣೆ ಹೊರಡಿಸಿ ಮುಂದಿನ ದಿನಗಳಲ್ಲಿ ಈ ದ್ವಿಪಕ್ಷೀಯ ಮಾತುಕತೆಗಾಗಿ ದಿನಾಂಕ ನಿಗದಿ ಮಾಡಲಾಗುವುದು ಎಂದು ತಿಳಿಸಿತ್ತು.

ಅಫ್ಘಾನ್ ವಿರುದ್ಧ ಅರ್ಧಶತಕ ಸಿಡಿಸಿ ವಿಶ್ವಕಪ್‌ನಲ್ಲಿ ಸಾರ್ವಕಾಲಿಕ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ..!

ಅಕ್ಟೋಬರ್ 28 ರಂದು ಭಾರತಕ್ಕೆ ಆಗಮನ?

ಎಲ್ಲಾ ಅಂದುಕೊಂಡಂತೆ ನಡೆದರೆ ಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಅಕ್ಟೋಬರ್ 28 ರಂದು ಭಾರತಕ್ಕೆ ಬರಲಿದ್ದು, ಒಂದು ದಿನದ ನಂತರ ಅಂದರೆ ಅಕ್ಟೋಬರ್ 29 ರಂದು ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲ್ಲಿರುವ ಪಂದ್ಯಾವಳಿಯ 29 ನೇ ಪಂದ್ಯವಾದ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಕದನವನ್ನು ಕ್ರೀಡಾಂಗಣದಲ್ಲಿ ವೀಕ್ಷಿಸಲಿದ್ದಾರೆ ಎಂದು ವರದಿಯಾಗಿದೆ.

ಅ.29 ರಂದು ಭಾರತ- ಇಂಗ್ಲೆಂಡ್ ಕದನ

ಇನ್ನು ವಿಶ್ವಕಪ್​ನಲ್ಲಿ ಪ್ರಸ್ತುತ ಎರಡು ಪಂದ್ಯಗಳನ್ನಾಡಿ ಮುಗಿಸಿರುವ ಭಾರತ ಆಡಿರುವ ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದೀಗ ಬದ್ಧವೈರಿ ಪಾಕಿಸ್ತಾನವನ್ನು ಎದುರಿಸಲು ಅಹಮದಾಬಾದ್​ಗೆ ತೆರಳಿದೆ. ಉಭಯ ತಂಡಗಳ ಕಾಳಗದ ಬಳಿಕ ರೋಹಿತ್ ಪಡೆ ತನ್ನ ನಾಲ್ಕನೇ ಪಂದ್ಯವನ್ನು ಅಕ್ಟೋಬರ್ 19 ರಂದು ಬಾಂಗ್ಲಾದೇಶದ ವಿರುದ್ಧ ಆಡಲಿದೆ. ಆ ಬಳಿಕ ಅಕ್ಟೋಬರ್ 22 ರಂದು ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಎದುರಿಸಲ್ಲಿರುವ ಭಾರತ, ತನ್ನ 6ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಇಂಗ್ಲೆಂಡ್ ತಂಡವನ್ನು ಅಕ್ಟೋಬರ್ 29 ರಂದು ಎದುರಿಸಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು
ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು