India Squad: ಟೀಮ್ ಇಂಡಿಯಾದಿಂದ ಮೂವರು ಔಟ್: ಮೂವರು ಇನ್..!

India squad for South Africa T20s: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್),

India Squad: ಟೀಮ್ ಇಂಡಿಯಾದಿಂದ ಮೂವರು ಔಟ್: ಮೂವರು ಇನ್..!
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 28, 2022 | 2:00 PM

India squad for South Africa T20: ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಮೂವರು ಆಟಗಾರರು ಹೊರಗುಳಿದಿರುವುದನ್ನು ಬಿಸಿಸಿಐ ಖಚಿತಪಡಿಸಿದೆ. ಅದರಂತೆ ತಂಡದಿಂದ ಹಾರ್ದಿಕ್ ಪಾಂಡ್ಯ (Hardik Pandya), ಮೊಹಮ್ಮದ್ ಶಮಿ (Mohammed Shami) ಹಾಗೂ ದೀಪಕ್ ಹೂಡಾ (Deepak Hooda) ಹೊರಗುಳಿದಿರುವುದಾಗಿ ತಿಳಿಸಿದೆ. ಅಲ್ಲದೆ ಈ ಮೂವರು ಆಟಗಾರರ ಬದಲಿಯಾಗಿ ಶ್ರೇಯಸ್ ಅಯ್ಯರ್ (Shreyas Iyer), ಶಹಬಾಜ್ ಅಹ್ಮದ್ (Shahbaz ahmed) ಹಾಗೂ ಉಮೇಶ್ ಯಾದವ್ (Umesh Yadav) ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿರುವ ಹಾರ್ದಿಕ್ ಪಾಂಡ್ಯ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್​ಗೆ ಅವಕಾಶ ನೀಡಲಾಗಿದೆ. ಹಾಗೆಯೇ ಗಾಯಗೊಂಡಿರುವ ಆಲ್​ರೌಂಡರ್ ದೀಪಕ್ ಹೂಡಾ ಬದಲಿಗೆ ಯುವ ಆಲ್​ರೌಂಡರ್ ಶಹಬಾಜ್ ಅಹ್ಮದ್​ಗೆ ಸ್ಥಾನ ಕಲ್ಪಿಸಲಾಗಿದೆ.

ಇನ್ನು ಕೊರೋನಾ ಸೋಂಕಿಗೆ ಒಳಗಾಗಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿಯ ಬದಲಿಗೆ ಉಮೇಶ್ ಯಾದವ್ ಅವನರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಶಮಿ ಅಲಭ್ಯರಾಗಿದ್ದ ಕಾರಣ ಉಮೇಶ್ ಯಾದವ್​ ಅವರಿಗೆ ಚಾನ್ಸ್ ನೀಡಲಾಗಿತ್ತು. ಇದೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಗೂ ಅವರನ್ನೇ ಮುಂದುವರೆಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

ಇದನ್ನೂ ಓದಿ
Image
2007ರ ಟಿ20 ವಿಶ್ವಕಪ್ ಫೈನಲ್‌ ಪಂದ್ಯದ ಹೀರೋಗಳು ಈಗ ಏನ್ಮಾಡ್ತಿದ್ದಾರೆ ಗೊತ್ತಾ?
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದಲೂ ಕೊರೋನಾ ಕಾರಣದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಟಿ20 ವಿಶ್ವಕಪ್​ ಬಳಗದಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಶಮಿ ಅವರನ್ನು ಈ ಬಾರಿ ಟಿ20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಅಲ್ಲದೆ ಅದಕ್ಕೂ ಮುನ್ನ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅವಕಾಶ ನೀಡಲಾಗಿತ್ತು. ಒಂದು ವೇಳೆ ಶಮಿ ಈ ಎರಡು ಸರಣಿಗಳಲ್ಲಿ ಯಶಸ್ವಿಯಾಗಿದ್ದರೆ ಟಿ20 ವಿಶ್ವಕಪ್ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳುವ ಸೂಚನೆ ನೀಡಿತ್ತು. ಆದರೀಗ ಶಮಿ ಎರಡೂ ಸರಣಿಗಳಿಂದ ಹೊರಗುಳಿದಿರುವ ಕಾರಣ ಅವರು ಟಿ20 ವಿಶ್ವಕಪ್​ ತಂಡಕ್ಕೆ ಆಯ್ಕೆಯಾಗುವುದಿಲ್ಲ ಎಂಬುದು ಖಚಿತವಾಗಿದೆ.

ಮತ್ತೊಂದೆಡೆ ಟಿ20 ವಿಶ್ವಕಪ್​ಗೆ ಸ್ಪೀಡ್ ಮಾಸ್ಟರ್ ಉಮ್ರಾನ್ ಮಲಿಕ್ ಶಮಿಯ ಸ್ಥಾನದಲ್ಲಿ ಮೀಸಲು ಆಟಗಾರನಾಗಿ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಹೀಗಾಗಿ ಕೊರೋನಾ ಸೋಂಕಿಗೆ ಒಳಗಾಗಿರುವ ಶಮಿ ಟಿ20 ವಿಶ್ವಕಪ್​ ಬಳಗದಿಂದ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಶಹಬಾಜ್ ಅಹ್ಮದ್, ಜಸ್​ಪ್ರೀತ್ ಬುಮ್ರಾ, ಉಮೇಶ್ ಯಾದವ್.

ಭಾರತ-ಸೌತ್ ಆಫ್ರಿಕಾ ಟಿ20 ಸರಣಿಯ ವೇಳಾಪಟ್ಟಿ ಹೀಗಿದೆ:

  1. ಸೆಪ್ಟೆಂಬರ್ 28- ಮೊದಲ ಟಿ20 ಪಂದ್ಯ (ತಿರುವನಂತಪುರ)
  2. ಅಕ್ಟೋಬರ್ 2- 2ನೇ ಟಿ20 ಪಂದ್ಯ (ಗೌಹಾಟಿ)
  3. ಅಕ್ಟೋಬರ್ 4- 3ನೇ ಟಿ20 ಪಂದ್ಯ (ಇಂದೋರ್)

Published On - 1:59 pm, Wed, 28 September 22

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ