India squad for South Africa T20: ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಮೂವರು ಆಟಗಾರರು ಹೊರಗುಳಿದಿರುವುದನ್ನು ಬಿಸಿಸಿಐ ಖಚಿತಪಡಿಸಿದೆ. ಅದರಂತೆ ತಂಡದಿಂದ ಹಾರ್ದಿಕ್ ಪಾಂಡ್ಯ (Hardik Pandya), ಮೊಹಮ್ಮದ್ ಶಮಿ (Mohammed Shami) ಹಾಗೂ ದೀಪಕ್ ಹೂಡಾ (Deepak Hooda) ಹೊರಗುಳಿದಿರುವುದಾಗಿ ತಿಳಿಸಿದೆ. ಅಲ್ಲದೆ ಈ ಮೂವರು ಆಟಗಾರರ ಬದಲಿಯಾಗಿ ಶ್ರೇಯಸ್ ಅಯ್ಯರ್ (Shreyas Iyer), ಶಹಬಾಜ್ ಅಹ್ಮದ್ (Shahbaz ahmed) ಹಾಗೂ ಉಮೇಶ್ ಯಾದವ್ (Umesh Yadav) ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಇಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ಪಡೆದಿರುವ ಹಾರ್ದಿಕ್ ಪಾಂಡ್ಯ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ಗೆ ಅವಕಾಶ ನೀಡಲಾಗಿದೆ. ಹಾಗೆಯೇ ಗಾಯಗೊಂಡಿರುವ ಆಲ್ರೌಂಡರ್ ದೀಪಕ್ ಹೂಡಾ ಬದಲಿಗೆ ಯುವ ಆಲ್ರೌಂಡರ್ ಶಹಬಾಜ್ ಅಹ್ಮದ್ಗೆ ಸ್ಥಾನ ಕಲ್ಪಿಸಲಾಗಿದೆ.
ಇನ್ನು ಕೊರೋನಾ ಸೋಂಕಿಗೆ ಒಳಗಾಗಿರುವ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿಯ ಬದಲಿಗೆ ಉಮೇಶ್ ಯಾದವ್ ಅವನರನ್ನು ಆಯ್ಕೆ ಮಾಡಲಾಗಿದೆ. ಈ ಹಿಂದೆ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಶಮಿ ಅಲಭ್ಯರಾಗಿದ್ದ ಕಾರಣ ಉಮೇಶ್ ಯಾದವ್ ಅವರಿಗೆ ಚಾನ್ಸ್ ನೀಡಲಾಗಿತ್ತು. ಇದೀಗ ಸೌತ್ ಆಫ್ರಿಕಾ ವಿರುದ್ಧದ ಸರಣಿಗೂ ಅವರನ್ನೇ ಮುಂದುವರೆಸಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.
GAME DAY ????
All set for the first T20I in Thiruvananthapuram#TeamIndia | #INDvSA pic.twitter.com/DAb2lks2Ry
— BCCI (@BCCI) September 28, 2022
ಸೌತ್ ಆಫ್ರಿಕಾ ವಿರುದ್ಧದ ಸರಣಿಯಿಂದಲೂ ಕೊರೋನಾ ಕಾರಣದಿಂದ ಹೊರಗುಳಿದಿರುವ ಮೊಹಮ್ಮದ್ ಶಮಿ ಟಿ20 ವಿಶ್ವಕಪ್ ಬಳಗದಲ್ಲಿ ಕಾಣಿಸಿಕೊಳ್ಳುವುದು ಅನುಮಾನ. ಏಕೆಂದರೆ ಶಮಿ ಅವರನ್ನು ಈ ಬಾರಿ ಟಿ20 ವಿಶ್ವಕಪ್ ತಂಡದಲ್ಲಿ ಮೀಸಲು ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಅಲ್ಲದೆ ಅದಕ್ಕೂ ಮುನ್ನ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅವಕಾಶ ನೀಡಲಾಗಿತ್ತು. ಒಂದು ವೇಳೆ ಶಮಿ ಈ ಎರಡು ಸರಣಿಗಳಲ್ಲಿ ಯಶಸ್ವಿಯಾಗಿದ್ದರೆ ಟಿ20 ವಿಶ್ವಕಪ್ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳುವ ಸೂಚನೆ ನೀಡಿತ್ತು. ಆದರೀಗ ಶಮಿ ಎರಡೂ ಸರಣಿಗಳಿಂದ ಹೊರಗುಳಿದಿರುವ ಕಾರಣ ಅವರು ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗುವುದಿಲ್ಲ ಎಂಬುದು ಖಚಿತವಾಗಿದೆ.
ಮತ್ತೊಂದೆಡೆ ಟಿ20 ವಿಶ್ವಕಪ್ಗೆ ಸ್ಪೀಡ್ ಮಾಸ್ಟರ್ ಉಮ್ರಾನ್ ಮಲಿಕ್ ಶಮಿಯ ಸ್ಥಾನದಲ್ಲಿ ಮೀಸಲು ಆಟಗಾರನಾಗಿ ಆಯ್ಕೆಯಾಗಲಿದ್ದಾರೆ ಎಂಬ ಸುದ್ದಿಗಳು ಕೂಡ ಹರಿದಾಡುತ್ತಿದೆ. ಹೀಗಾಗಿ ಕೊರೋನಾ ಸೋಂಕಿಗೆ ಒಳಗಾಗಿರುವ ಶಮಿ ಟಿ20 ವಿಶ್ವಕಪ್ ಬಳಗದಿಂದ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.
ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಹೀಗಿದೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಶಹಬಾಜ್ ಅಹ್ಮದ್, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್.
ಭಾರತ-ಸೌತ್ ಆಫ್ರಿಕಾ ಟಿ20 ಸರಣಿಯ ವೇಳಾಪಟ್ಟಿ ಹೀಗಿದೆ:
Published On - 1:59 pm, Wed, 28 September 22