Umran Malik: ಭಾರತದ ಪರ ಆಡಿದ ಜಮ್ಮು-ಕಾಶ್ಮೀರದ 2ನೇ ಆಟಗಾರ ಉಮ್ರಾನ್ ಮಲಿಕ್: ಹಾಗಿದ್ರೆ ಮೊದಲಿಗ ಯಾರು?

Umran Malik: ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಪರ ಕಣಕ್ಕಿಳಿದಿದ್ದ ಮಲಿಕ್ ತಮ್ಮ ಮಾರಕ ವೇಗದ ಮೂಲಕ ಸ್ಟಾರ್ ಆಟಗಾರರನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದರು. ಅಷ್ಟೇ ಅಲ್ಲದೆ 14 ಪಂದ್ಯಗಳಿಂದ 22 ವಿಕೆಟ್ ಪಡೆಯುವ ಮೂಲಕ ಮಿಂಚಿದ್ದರು.

Umran Malik: ಭಾರತದ ಪರ ಆಡಿದ ಜಮ್ಮು-ಕಾಶ್ಮೀರದ 2ನೇ ಆಟಗಾರ ಉಮ್ರಾನ್ ಮಲಿಕ್: ಹಾಗಿದ್ರೆ ಮೊದಲಿಗ ಯಾರು?
Parvez Rasool-Umran malik
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jun 26, 2022 | 10:23 PM

ಐರ್ಲೆಂಡ್ ವಿರುದ್ದ ಟಿ20 ಸರಣಿಯ (India vs Ireland T20) ಮೊದಲ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಜಮ್ಮು ಕಾಶ್ಮೀರದ ಯುವ ವೇಗಿ ಉಮ್ರಾನ್ ಮಲಿಕ್ (Umran Malik) ಟೀಮ್ ಇಂಡಿಯಾ (Team india) ಪರ ಪದಾರ್ಪಣೆ ಮಾಡಿದ್ದಾರೆ. ಈ ಹಿಂದೆ ಸೌತ್ ಆಫ್ರಿಕಾ ವಿರುದ್ದದ ಸರಣಿಗೆ ಆಯ್ಕೆಯಾಗಿದ್ದರೂ ಮಲಿಕ್​ಗೆ ಆಡುವ ಬಳಗದಲ್ಲಿ ಅವಕಾಶ ದೊರೆತಿರಲಿಲ್ಲ. ಇದೀಗ ಐರ್ಲೆಂಡ್ ವಿರುದ್ದ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಪಡೆಯುವ ಮೂಲಕ ಮಲಿಕ್ ಚೊಚ್ಚಲ ಬಾರಿ ಬ್ಲೂ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಉಮ್ರಾನ್ ಮಲಿಕ್ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ 98ನೇ ಭಾರತೀಯ ಆಟಗಾರ. ಆದರೆ ಜಮ್ಮು ಕಾಶ್ಮೀರದ 2ನೇ ಆಟಗಾರ. ಅಂದರೆ ಜಮ್ಮು- ಕಾಶ್ಮೀರದ ಕೇವಲ ಇಬ್ಬರು ಆಟಗಾರರು ಮಾತ್ರ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ. ಅವರಲ್ಲಿ ಉಮ್ರಾನ್ ಮಲಿಕ್ ಎರಡನೇಯವರು ಎಂಬುದು ವಿಶೇಷ.

ಇದಕ್ಕೂ ಮುನ್ನ ಜಮ್ಮು-ಕಾಶ್ಮೀರದ ಆಲ್​ರೌಂಡರ್​ ಪರ್ವೇಜ್ ರಸೂಲ್ ಟೀಮ್ ಇಂಡಿಯಾ ಪರ ಆಡಿದ್ದರು. ಅಲ್ಲದೆ ಜಮ್ಮು-ಕಾಶ್ಮೀರದಿಂದ ಟೀಮ್ ಇಂಡಿಯಾಗೆ ಆಯ್ಕೆಯಾದ ಮೊದಲ ಕ್ರಿಕೆಟಿಗ ಎಂಬ ದಾಖಲೆ ಕೂಡ ರಸೂಲ್ ಹೆಸರಿನಲ್ಲಿದೆ. 2014 ರಲ್ಲಿ ಪರ್ವೇಜ್ ರಸೂಲ್ ಟೀಮ್ ಇಂಡಿಯಾ ಪರ ಪದಾರ್ಪಣೆ ಮಾಡಿದ್ದರು. ಬಾಂಗ್ಲಾದೇಶದ ವಿರುದ್ದದ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ರಸೂಲ್, ಅಂದು 10 ಓವರ್​ಗಳಲ್ಲಿ 60 ರನ್ ನೀಡಿ 2 ವಿಕೆಟ್ ಪಡೆದಿದ್ದರು. ಇದಾಗ್ಯೂ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್ ಮಾಡುವ ಅವಕಾಶ ದೊರೆತಿರಲಿಲ್ಲ.

ಆ ಬಳಿಕ ಟೀಮ್ ಇಂಡಿಯಾದಿಂದ ಹೊರಬಿದ್ದ ಪರ್ವೇಜ್ ರಸೂಲ್ ಮತ್ತೆ ಕಾಣಿಸಿಕೊಂಡಿದ್ದು 2017 ರಲ್ಲಿ. ಇಂಗ್ಲೆಂಡ್ ವಿರುದ್ದದ ಟಿ20 ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದ ರಸೂಲ್ ಕೇವಲ 5 ರನ್​ಗಳಿಸಿ ಔಟಾಗಿದ್ದರು. ಇನ್ನು ಬೌಲಿಂಗ್​ನಲ್ಲಿ 4 ಓವರ್​ಗಳಲ್ಲಿ 32 ರನ್​ ನೀಡಿ ಕೇವಲ 1 ವಿಕೆಟ್ ಕಬಳಿಸಿದ್ದರು. ಈ ಪಂದ್ಯದ ನಂತರ ರಸೂಲ್​ಗೆ ಟೀಮ್ ಇಂಡಿಯಾದಲ್ಲಿ ಚಾನ್ಸ್ ಸಿಕ್ಕಿರಲಿಲ್ಲ.

ಇದನ್ನೂ ಓದಿ
Image
Irfan Pathan: ಟಿ20 ವಿಶ್ವಕಪ್​ಗೆ ಇರ್ಫಾನ್ ಪಠಾಣ್​ರ ಟೀಮ್ ಇಂಡಿಯಾ ಪ್ಲೇಯಿಂಗ್ 11
Image
Team India: 8 ತಿಂಗಳಲ್ಲಿ 6 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ
Image
ಪೆಟ್ರೋಲ್ ಪಂಪ್​ನಲ್ಲಿ ಚಹಾ ನೀಡುತ್ತಿರುವ ಶ್ರೀಲಂಕಾ ಕ್ರಿಕೆಟಿಗ
Image
Rishabh Pant: ನಾಯಕನಾಗಿ ಅತ್ಯಂತ ಕೆಟ್ಟ ದಾಖಲೆ ಬರೆದ ರಿಷಭ್ ಪಂತ್

ಅಂದರೆ ಏಕದಿನ ಹಾಗೂ ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ ಜಮ್ಮು-ಕಾಶ್ಮೀರದ ಮೊದಲ ಆಟಗಾರ ಎಂಬ ಹೆಗ್ಗಳಿಕೆ ಪರ್ವೇಶ್ ರಸೂಲ್ ಅವರಿಗೆ ಸಲ್ಲುತ್ತದೆ. ಇದೀಗ 2ನೇ ಆಟಗಾರನಾಗಿ ಉಮ್ರಾನ್ ಮಲಿಕ್ ಸ್ಥಾನ ಪಡೆದಿದ್ದಾರೆ. ಐರ್ಲೆಂಡ್ ವಿರುದ್ದದ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ವೇಗಿ ಭುವನೇಶ್ವರ್ ಕುಮಾರ್ ಅವರಿಂದ ಟೀಮ್ ಇಂಡಿಯಾ ಕ್ಯಾಪ್ ಪಡೆಯುವ ಮೂಲಕ ಮಲಿಕ್ ಭಾರತ ತಂಡವನ್ನು ಪ್ರತಿನಿಧಿಸಿದ ಜಮ್ಮು-ಕಾಶ್ಮೀರದ 2ನೇ ಆಟಗಾರನಾಗಿ ಗುರುತಿಸಿಕೊಂಡರು.

ಇದಕ್ಕೂ ಮುನ್ನ ಐಪಿಎಲ್​ನಲ್ಲಿ ಸನ್​ರೈಸರ್ಸ್​ ಹೈದರಾಬಾದ್ ಪರ ಕಣಕ್ಕಿಳಿದಿದ್ದ ಮಲಿಕ್ ತಮ್ಮ ಮಾರಕ ವೇಗದ ಮೂಲಕ ಸ್ಟಾರ್ ಆಟಗಾರರನ್ನೇ ಇಕ್ಕಟ್ಟಿಗೆ ಸಿಲುಕಿಸಿದ್ದರು. ಅಷ್ಟೇ ಅಲ್ಲದೆ 14 ಪಂದ್ಯಗಳಿಂದ 22 ವಿಕೆಟ್ ಪಡೆಯುವ ಮೂಲಕ ಮಿಂಚಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಉಮ್ರಾನ್ ಮಲಿಕ್​ಗೆ ಟೀಮ್ ಇಂಡಿಯಾದಲ್ಲಿ ಸ್ಥಾನ ಲಭಿಸಿತ್ತು. ಇದೀಗ ಐರ್ಲೆಂಡ್ ವಿರುದ್ದ ಚೊಚ್ಚಲ ಪಂದ್ಯವಾಡುವ ಅವಕಾಶ ಸಿಕ್ಕಿದೆ.

Published On - 9:22 pm, Sun, 26 June 22

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ