
2025 ರ ಐಪಿಎಲ್ನ (IPL 2025) ಅರ್ಧದಷ್ಟು ಪ್ರಯಾಣ ಮುಗಿದಿದೆ. ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಈ ಸೀಸನ್ ಅಂದುಕೊಂಡಂತೆ ನಡೆದಿಲ್ಲ. ಆಡಿರುವ 8 ಪಂದ್ಯಗಳಲ್ಲಿ ಕೇವಲ 3 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಈಗ ಪ್ಲೇಆಫ್ನಿಂದ ಹೊರಬೀಳುವ ಆತಂಕದಲಿದೆ. ಏತನ್ಮಧ್ಯೆ, ಕೆಕೆಆರ್ ತಂಡಕ್ಕೆ ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ನ ಆಗಮನವಾಗುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಹೌದು ಜಮ್ಮು ಮತ್ತು ಕಾಶ್ಮೀರದ ವೇಗದ ಬೌಲರ್ ಉಮ್ರಾನ್ ಮಲಿಕ್ (Umran Malik) ಕೋಲ್ಕತ್ತಾ ತಂಡವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ. ಮೆಗಾ ಹರಾಜಿನಲ್ಲಿ ಕೆಕೆಆರ್ ಅವರನ್ನು 75 ಲಕ್ಷ ರೂ.ಗೆ ಖರೀದಿಸಿತ್ತು. ಆದರೆ ಗಾಯದ ಕಾರಣ, ಮಾರ್ಚ್ ಆರಂಭದಲ್ಲಿ ಅವರು ಪಂದ್ಯಾವಳಿಯಿಂದ ಹೊರಗುಳಿದಿದ್ದರು. ಆದರೀಗ ಚೇತರಿಸಿಕೊಂಡಿರುವ ಉಮ್ರಾನ್ ಇಷ್ಟರಲ್ಲೇ ತಂಡ ಸೇರಿಕೊಳ್ಳುವ ಸಾಧ್ಯತೆಗಳಿವೆ.
ಗಾಯದಿಂದ ಬಳಲುತ್ತಿದ್ದ ಉಮ್ರಾನ್ ಮಲಿಕ್ಗೆ ಐಪಿಎಲ್ 2025 ರ ಮೊದಲಾರ್ಧದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಉಮ್ರಾನ್ ಬದಲಿಗೆ ಮತ್ತೊಬ್ಬ ಯುವ ವೇಗಿ ಚೇತನ್ ಸಕರಿಯಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಆದರೆ ಇದೀಗ ಉಮ್ರಾನ್ ಮಲಿಕ್ ಚೇತರಿಸಿಕೊಂಡಿದ್ದು, ಐಪಿಎಲ್ ದ್ವಿತೀಯಾರ್ಧಕ್ಕೆ ಮತ್ತೆ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಆದರೆ ಈಗ ಕೆಕೆಆರ್ ಉಮ್ರಾನ್‌ಗೆ ತಮ್ಮ ತಂಡದಲ್ಲಿ ಹೇಗೆ ಸ್ಥಾನ ನೀಡುತ್ತದೆ ಎಂಬುದನ್ನು ನೋಡಬೇಕಾಗಿದೆ, ಏಕೆಂದರೆ ಚೇತನ್ ಸಕರಿಯಾ ಈಗಾಗಲೇ ಅವರ ಬದಲಿಯಾಗಿ ಇದ್ದಾರೆ.
ಉಮ್ರಾನ್ ಮಲಿಕ್ 2021 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದರು. ತಮ್ಮ ಮೊದಲ ಪಂದ್ಯದಲ್ಲೇ 150 ರನ್ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಸುದ್ದಿ ಮಾಡಿದ್ದ ಉಮ್ರಾನ್ ಆ ಸೀಸನ್ನಲ್ಲಿ ಕೇವಲ 3 ಪಂದ್ಯಗಳನ್ನು ಆಡುವ ಅವಕಾಶ ಪಡೆದಿದ್ದರು. ಆದಾಗ್ಯೂ ತನ್ನ ವೇಗದ ಮೂಲಕ ಉಮ್ರಾನ್ ಎಲ್ಲರ ಗಮನ ಸೆಳೆದಿದ್ದರು. ಇದಾದ ನಂತರ 2022 ರ ಐಪಿಎಲ್‌ನಲ್ಲಿ ಆಡುವ ಅವಕಾಶ ಪಡೆದಿದ್ದ ಉಮ್ರಾನ್ 157 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಸಂಚಲನ ಸೃಷ್ಟಿಸಿದ್ದರು. ಈ ಮೂಲಕ ಉಮ್ರಾನ್ ಮಲಿಕ್ ಐಪಿಎಲ್‌ನಲ್ಲಿ ಅತ್ಯಂತ ವೇಗದ ಭಾರತೀಯ ಬೌಲರ್ ಎಂಬ ದಾಖಲೆಯನ್ನು ಸೃಷ್ಟಿಸಿದ್ದರು.
IPL 2025: ಗೆಲುವು ಖಚಿತವಾಗುತ್ತಿದ್ದಂತೆ ಕಿಂಗ್ ಕೊಹ್ಲಿಯ ಸಂಭ್ರಮ ಹೇಗಿತ್ತು ನೋಡಿ
ಆದಾಗ್ಯೂ, ಸತತ ಗಾಯಗಳಿಗೆ ತುತ್ತಾದ ಉಮ್ರಾನ್‌ಗೆ ಇದರಿಂದಾಗಿ ಹೆಚ್ಚಿನ ಪಂದ್ಯಗಳನ್ನು ಆಡಲು ಸಾಧ್ಯವಾಗಲಿಲ್ಲ. 2021 ರಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿದ್ದ ಉಮ್ರಾನ್ ಈ ಪಂದ್ಯಾವಳಿಯಲ್ಲಿ ಇಲ್ಲಿಯವರೆಗೆ ಕೇವಲ 26 ಪಂದ್ಯಗಳನ್ನು ಆಡಲು ಸಾಧ್ಯವಾಗಿದೆ. ಇಷ್ಟೇ ಅಲ್ಲ 2023 ರಲ್ಲಿ ಟೀಂ ಇಂಡಿಯಾ ಪರ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದ ಉಮ್ರಾನ್ ಅಂದಿನಿಂದ ತಂಡದಿಂದ ಹೊರಗಿದ್ದಾರೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:31 pm, Fri, 25 April 25