Umran Malik: ಧೋನಿಗೆ 154 ಕಿ.ಮೀ. ವೇಗದ ಯಾರ್ಕರ್: ಐಪಿಎಲ್ 2022 ರಲ್ಲಿ ನೂತನ ದಾಖಲೆ ಬರೆದ ಉಮ್ರಾನ್ ಮಲಿಕ್

SRH vs CSK: ಉಮ್ರಾನ್‌ ಮಲಿಕ್ (Umran Malik) ಅತ್ಯಂತ ವೇಗದಲ್ಲಿ ಬೌಲ್‌ ಮಾಡುವ ಮೂಲಕ ಪ್ರಸಕ್ತ ಆವೃತ್ತಿಯಲ್ಲಿ ವಿಶೇಷ ದಾಖಲೆಯನ್ನು ಮಾಡಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್​ಕೆ ಬ್ಯಾಟಿಂಗ್ ಇನಿಂಗ್ಸ್‌ನಲ್ಲಿ ಎರಡು ಬಾರಿ 154 ಕಿ. ಮೀ ವೇಗದಲ್ಲಿ ಬೌಲಿಂಗ್ ಮಾಡಿದ ಸಾಧನೆ ಮಾಡಿದ್ದಾರೆ.

Umran Malik: ಧೋನಿಗೆ 154 ಕಿ.ಮೀ. ವೇಗದ ಯಾರ್ಕರ್: ಐಪಿಎಲ್ 2022 ರಲ್ಲಿ ನೂತನ ದಾಖಲೆ ಬರೆದ ಉಮ್ರಾನ್ ಮಲಿಕ್
ಉಮ್ರಾನ್ ಮಲಿಕ್‌
Follow us
TV9 Web
| Updated By: Vinay Bhat

Updated on: May 02, 2022 | 2:14 PM

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಹದಿನೈದನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ (SRH vs CSK) ತಂಡದ ಯುವ ವೇಗಿ ಉಮ್ರಾನ್‌ ಮಲಿಕ್ (Umran Malik) ಅತ್ಯಂತ ವೇಗದಲ್ಲಿ ಬೌಲ್‌ ಮಾಡುವ ಮೂಲಕ ಪ್ರಸಕ್ತ ಆವೃತ್ತಿಯಲ್ಲಿ ವಿಶೇಷ ದಾಖಲೆಯನ್ನು ಮಾಡಿದ್ದಾರೆ. ಭಾನುವಾರ ನಡೆದ ಪಂದ್ಯದಲ್ಲಿ ಸಿಎಸ್​ಕೆ ಬ್ಯಾಟಿಂಗ್ ಇನಿಂಗ್ಸ್‌ನಲ್ಲಿ ಎರಡು ಬಾರಿ 154 ಕಿ. ಮೀ ವೇಗದಲ್ಲಿ ಬೌಲಿಂಗ್ ಮಾಡಿದ ಸಾಧನೆ ಮಾಡಿದ್ದಾರೆ. ಮೊದಲ ಇನಿಂಗ್ಸ್‌ನ 10ನೇ ಓವರ್‌ನಲ್ಲಿ  ಉಮ್ರಾನ್ ಗಂಟೆಗೆ 154 ಕಿ.ಮೀ. ವೇಗದಲ್ಲಿ  ಬೌಲಿಂಗ್ ಮಾಡಿದರು. ಅವರು ಸ್ಟಂಪ್‌ ಗುರಿ ಇರಿಸಿ ಎಸೆದ ಚೆಂಡನ್ನು ರುತುರಾಜ್ ಗಾಯಕ್ವಾಡ್ (Ruturaj Gaikwad) ಬೌಂಡರಿ ಸಿಡಿಸಿದರು. ನಂತರ 19ನೇ ಓವರ್‌ನಲ್ಲಿ ಗಂಟೆಗೆ 154 ಕಿ.ಮೀ. ವೇಗದಲ್ಲಿ ಎಂಎಸ್ ಧೋನಿಗೆ ಯಾರ್ಕರ್ ಅನ್ನು ಎಸೆದರು. ಈ ಎಸೆತದಲ್ಲಿ ಧೋನಿ ಒಂದು ರನ್ ಗಳಿಸಿದರು.

ಈ ಬಾರಿಯ ಐಪಿಎಲ್​ನಲ್ಲಿ ತನ್ನ ವೇಗದ ಬೌಲಿಂಗ್ ಮೂಲಕವೇ ಗಮನ ಸೆಳೆದಿರುವ ಈ ಜಮ್ಮು-ಕಾಶ್ಮೀರ ವೇಗಿ ತನ್ನ ಮೊದಲ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧವೂ 150ರ ವೇಗದಲ್ಲಿ ಚೆಂಡೆಸೆದು ಸುದ್ದಿಯಾಗಿದ್ದರು. ಅಲ್ಲದೆ ಇತ್ತೀಚಿಗೆ ಮೊದಲ ಬಾರಿ ಐದು ವಿಕೆಟ್ ಗೊಂಚಲು ಗಳಿಸಿ  ಸಾಕಷ್ಟು ಪ್ರಶಂಸೆಗಳನ್ನು ಪಡೆದಿದ್ದರು. ಸಿಎಸ್​ಕೆ ವಿರುದ್ಧದ ಪಂದ್ಯದಲ್ಲಿ ಉಮ್ರಾನ್ ಈ ಸಾಧನೆ ಮಾಡಿದರೂ ಸಾಕಷ್ಟು ದುಬಾರಿಯಾದರು. 4 ಓವರ್ ಬೌಲಿಂಗ್ ಮಾಡಿ 48 ರನ್ ನೀಡಿ ಯಾವುದೇ ವಿಕೆಟ್ ಪಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಈ ಬಾರಿ ಮೆಗಾ ಹರಾಜಿಗೂ ಮುನ್ನ ಉಮ್ರಾನ್ ಅವರನ್ನು ಸನ್​ರೈಸರ್ಸ್​ ಹೈದರಾಬಾದ್ ತಂಡವು 4 ಕೋಟಿ ನೀಡಿ ರಿಟೈನ್ ಮಾಡಿಕೊಂಡಿತ್ತು.

ಸಿಎಸ್​ಕೆ ಹಾಗೂ ಎಸ್​ಆರ್​ಹೆಚ್ ನಡುವಣ ಪಂದ್ಯದಲ್ಲಿ ಧೋನಿ ತಂಡ 13 ರನ್​ಗಳ ಜಯ ತನ್ನದಾಗಿಸಿತು. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಚೆನ್ನೈ ಐಪಿಎಲ್ ಇತಿಹಾಸದಲ್ಲಿ ಹಿಂದೆದೂ ಕಾಣದ ಆರಂಭಿಕ ಜೊತೆಯಾಟವನ್ನ ಕಂಡಿತು. ರುತುರಾಜ್ ಗಾಯಕ್ವಾಡ್ ಮತ್ತು ಡೆವೊನ್ ಕಾನ್ವೆ 182ರನ್‌ಗಳ ಅಮೋಘ ಜೊತೆಯಾಟವಾಡಿದರು. ಗಾಯಕ್ವಾಡ್ 57 ಎಸೆತಗಳಲ್ಲಿ 99 ರನ್ ಸಿಡಿಸುವ ಮೂಲಕ ಕೇವಲ ಒಂದು ರನ್‌ಗಳಲ್ಲಿ ಶತಕವಂಚಿತರಾದರು. ಡಿವೊನ್ ಕಾನ್ವೆ 55 ಎಸೆತಗಳಲ್ಲಿ ಅಜೇಯ 85 ರನ್ ಕಲೆಹಾಕಿದರು. ಚೆನ್ನೈ 20 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 202 ರನ್ ಬಾರಿಸಿತು.

MS Dhoni: ಕ್ಯಾಪ್ಟನ್ ಧೋನಿ ಅಡಿಯಲ್ಲಿ ಚೆನ್ನೈಗೆ ಸೂಪರ್ ಗೆಲುವು: ಟ್ವಿಟರ್​ನಲ್ಲಿ ಸಂಭ್ರಮವೋ ಸಂಭ್ರಮ

ಕಠಿಣ ಟಾರ್ಗೆಟ್ ಬೆನ್ನಟ್ಟಿದ ಸನ್‌ರೈಸರ್ಸ್ ತಂಡಕ್ಕೆ ನಾಯಕ ಕೇನ್ ವಿಲಿಯಮ್ಸನ್ ಹಾಗೂ ಅಭಿಷೇಕ್ ಶರ್ಮಾ ಬಿರುಸಿನ ಆರಂಭವೊದಗಿಸಿದರು. ಇವರಿಬ್ಬರು ಮೊದಲ ವಿಕೆಟ್‌ಗೆ 35 ಎಸೆತಗಳಲ್ಲಿ 58 ರನ್ ಪೇರಿಸಿದರು. ಆದರೆ, ಅಭಿಷೇಕ್ (39 ರನ್, 24 ಎಸೆತ) ಜೊತೆಗೆ ರಾಹುಲ್ ತ್ರಿಪಾಠಿ ಅವರನ್ನು ಶೂನ್ಯಕ್ಕೆ ಔಟ್ ಆಗಿದ್ದು ಹೊಡೆತ ಬಿದ್ದಿತು. ಏಡನ್ ಮಾರ್ಕರಮ್ (17) ಎರಡು ಸಿಕ್ಸರ್ ಸಿಡಿಸಿದರೂ ಹೆಚ್ಚು ಹೊತ್ತು ನಿಲ್ಲಲಾಗಲಿಲ್ಲ. ಇನ್ನೊಂದೆಡೆ ನಾಯಕನ ಆಟವಾಡಿದ ವಿಲಿಯಮ್ಸನ್ ತಂಡವನ್ನು ಮುನ್ನಡೆಸಿದರು. ಅವರಿಗೆ ನಿಕೋಲಸ್ ಪೂರನ್ ಅವರಿಂದ ಉತ್ತಮ ಬೆಂಬಲ ದೊರಕಿತು. ಆದರೆ ಅರ್ಧಶತಕದ ಅಂಚಿನಲ್ಲಿ ವಿಲಿಯಮ್ಸನ್ ಎಡವಿದರು. 29 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಪೂರನ್ ದಿಟ್ಟ ಹೋರಾಟ ನೀಡಿದರೂ ಗೆಲುವು ದಾಖಲಿಸಲು ಸಾಧ್ಯವಾಗಲಿಲ್ಲ. ಎಸ್​ಆರ್​ಹೆಚ್ 20 ಓವರ್​ನಲ್ಲಿ 6 ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತಷ್ಟೆ.

ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್