IND vs NZ: ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಮತ್ತೋರ್ವ ಆಟಗಾರನ ಆಯ್ಕೆ ಸಾಧ್ಯತೆ

India vs New Zealand series: ಭಾರತ ಟೆಸ್ಟ್ ತಂಡ: ಅಜಿಂಕ್ಯ ರಹಾನೆ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಾಹ

IND vs NZ: ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಮತ್ತೋರ್ವ ಆಟಗಾರನ ಆಯ್ಕೆ ಸಾಧ್ಯತೆ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on: Nov 22, 2021 | 8:17 PM

ನ್ಯೂಜಿಲೆಂಡ್ ವಿರುದ್ದ ಟಿ20 ಸರಣಿ ಗೆದ್ದಿರುವ ಟೀಮ್ ಇಂಡಿಯಾ ಇದೀಗ ಟೆಸ್ಟ್​ ಸರಣಿಗಾಗಿ ಸಜ್ಜಾಗುತ್ತಿದೆ. ನವೆಂಬರ್ 25 ರಿಂದ ಶುರುವಾಗಲಿರುವ ಟೆಸ್ಟ್​ ಸರಣಿಗಾಗಿ ಈಗಾಗಲೇ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಗೆ ರೋಹಿತ್ ಶರ್ಮಾ ಅಲಭ್ಯರಾಗಿದ್ದು, ಹಾಗೆಯೇ ಮೊದಲ ಪಂದ್ಯದಿಂದ ವಿರಾಟ್ ಕೊಹ್ಲಿ ಕೂಡ ಹೊರಗುಳಿದಿದ್ದಾರೆ. ಹೀಗಾಗಿ ತಂಡವನ್ನು ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. ಇನ್ನು ತಂಡದ ಉಪನಾಯಕನಾಗಿ ಚೇತೇಶ್ವರ್ ಪೂಜಾರ ಕಾಣಿಸಿಕೊಳ್ಳಲಿದ್ದಾರೆ. ಇದೀಗ 16 ಸದಸ್ಯರ ತಂಡಕ್ಕೆ ಮತ್ತೋರ್ವ ಆಟಗಾರರನ್ನು ಸೇರ್ಪಡೆಗೊಳಿಸಲು ಬಿಸಿಸಿಐ ಆಯ್ಕೆ ಸಮಿತಿ ಮುಂದಾಗಿದೆ. ಅದರಂತೆ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್​ಗೆ ಅವಕಾಶ ಕಲ್ಪಿಸಲಾಗಿದೆ ಎಂದು ವರದಿಯಾಗಿದೆ. ಈ ಹಿಂದೆ ಆಯ್ಕೆ ಮಾಡಲಾದ 16 ಸದಸ್ಯರ ಬಳಗದಲ್ಲಿ ಸೂರ್ಯಕುಮಾರ್ ಯಾದವ್ ಸ್ಥಾನ ಪಡೆದಿರಲಿಲ್ಲ. ಇದೀಗ ದಿಢೀರಣೆ ಸೂರ್ಯಕುಮಾರ್ ಅವರ ಆಯ್ಕೆ ಯಾಕೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈ ಹಿಂದೆ ಸೂರ್ಯಕುಮಾರ್ ಯಾದವ್ ಇಂಗ್ಲೆಂಡ್​ ವಿರುದ್ದದ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದರು. ಇದಾಗ್ಯೂ ಅವರಿಗೆ ಆಡುವ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಇದೀಗ ಮತ್ತೊಮ್ಮೆ ತಂಡಕ್ಕೆ ಸೂರ್ಯಕುಮಾರ್ ಯಾದವ್ ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗಿದೆ. ಆದರೆ 16 ಸದಸ್ಯರ ಆಯ್ಕೆ ಬಳಿಕ ಅವರನ್ನು ಯಾವ ಕಾರಣಕ್ಕಾಗಿ ಆಯ್ಕೆ ಮಾಡಲಾಗುತ್ತಿದೆ ಎಂಬುದರ ಬಗ್ಗೆ ವರದಿಯಲ್ಲಿ ತಿಳಿಸಲಾಗಿಲ್ಲ.

ತಂಡದಲ್ಲಿ ಟಿ20 ವಿಶ್ವಕಪ್ ಆಡಿದ ಕೆಲ ಆಟಗಾರರಿದ್ದು, ಅವರಲ್ಲಿ ಕೆಲ ಆಟಗಾರರು ಹೆಚ್ಚಿನ ವಿಶ್ರಾಂತಿ ಬಯಸಿದ್ದಾರೆ. ಹೀಗಾಗಿ ಸೂರ್ಯಕುಮಾರ್ ಅವರನ್ನು ಹೆಚ್ಚುವರಿ ಆಟಗಾರನಾಗಿ ಆಯ್ಕೆ ಮಾಡಿರುವ ಸಾಧ್ಯತೆಯಿದೆ ಎಂದು ಕೂಡ ಹೇಳಲಾಗಿದೆ. ಇತ್ತ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಲಿರುವ ವಿರಾಟ್ ಕೊಹ್ಲಿ, ಮುಂಬೈನಲ್ಲಿ ನಡೆಯಲಿರುವ 2ನೇ ಪಂದ್ಯದ ವೇಳೆ ತಂಡವನ್ನು ಕೂಡಿಕೊಳ್ಳುವುದಾಗಿ ತಿಳಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ದ ಸರಣಿಯ ಮೊದಲ ಟೆಸ್ಟ್ ಪಂದ್ಯ ನವೆಂಬರ್ 25 ರಿಂದ 29 ರವರೆಗೆ ಕಾನ್ಪುರದಲ್ಲಿ ನಡೆಯಲಿದೆ. ಡಿಸೆಂಬರ್ 3ರಿಂದ ಮುಂಬೈನಲ್ಲಿ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದೆ.

ಭಾರತ ಟೆಸ್ಟ್ ತಂಡ: ಅಜಿಂಕ್ಯ ರಹಾನೆ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ (ಉಪನಾಯಕ), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಾಹ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಶ್ವಿನ್, ಅಕ್ಷರ್ ಪಟೇಲ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

ಇದನ್ನೂ ಓದಿ: Rohit Sharma: ಶಾಹಿದ್ ಅಫ್ರಿದಿ ವಿಶ್ವ ದಾಖಲೆ ಮುರಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ

ಇದನ್ನೂ ಓದಿ: Martin Guptill: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಮಾರ್ಟಿನ್ ಗಪ್ಟಿಲ್

ಇದನ್ನೂ ಓದಿ: Rahul Dravid: ರಾಹುಲ್ ದ್ರಾವಿಡ್ ಹಾಗೂ ರವಿ ಶಾಸ್ತ್ರಿ ನಡುವಣ ವ್ಯತ್ಯಾಸ ತಿಳಿಸಿದ ಗೌತಮ್ ಗಂಭೀರ್

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ