AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಇಂದು ಭಾರತ- ಪಾಕ್ ಕ್ರಿಕೆಟ್ ಫೈಟ್; ಗೆದ್ದವರಿಗೆ ಸೆಮೀಸ್ ಟಿಕೆಟ್! ಪಂದ್ಯದ ಪೂರ್ಣ ವಿವರ ಇಲ್ಲಿದೆ

IND vs PAK: ಪ್ರಸಕ್ತ ಅಂಡರ್-19 ಏಷ್ಯಾಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನದ ಯುವ ತಂಡಗಳು ಮುಖಾಮುಖಿಯಾಗಲಿವೆ. ಈ ಅಮೋಘ ಪಂದ್ಯದಲ್ಲಿ ಉಭಯ ತಂಡಗಳು ತಮ್ಮ ಮೊದಲ ಪಂದ್ಯವನ್ನು 7 ವಿಕೆಟ್‌ಗಳಿಂದ ಗೆದ್ದು ಈ ಪಂದ್ಯಕ್ಕೆ ಕಾಲಿಡುತ್ತಿವೆ.

IND vs PAK: ಇಂದು ಭಾರತ- ಪಾಕ್ ಕ್ರಿಕೆಟ್ ಫೈಟ್; ಗೆದ್ದವರಿಗೆ ಸೆಮೀಸ್ ಟಿಕೆಟ್! ಪಂದ್ಯದ ಪೂರ್ಣ ವಿವರ ಇಲ್ಲಿದೆ
ಭಾರತ- ಪಾಕಿಸ್ತಾನ
ಪೃಥ್ವಿಶಂಕರ
|

Updated on:Dec 10, 2023 | 7:15 AM

Share

ಕ್ರಿಕೆಟ್ ಜಗತ್ತಿನಲ್ಲಿ ಭಾರತ-ಪಾಕಿಸ್ತಾನ (India vs Pakistan) ನಡುವೆ ಎಲ್ಲೇ ಪಂದ್ಯ ನಡೆದರೂ ಅದರ ರೋಚಕತೆ ಉತ್ತುಂಗದಲ್ಲಿರುತ್ತದೆ. ಇತ್ತೀಚೆಗೆ, ಏಕದಿನ ವಿಶ್ವಕಪ್ 2023ರ (ODI World Cup 2023) ಸಮಯದಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಿದ್ದವು. ಇದೀಗ ಪ್ರಸಕ್ತ ಅಂಡರ್-19 ಏಷ್ಯಾಕಪ್‌ನಲ್ಲಿ (ACC U19 Asia Cup 2023) ಭಾರತ ಮತ್ತು ಪಾಕಿಸ್ತಾನದ ಯುವ ತಂಡಗಳು ಮುಖಾಮುಖಿಯಾಗಲಿವೆ. ಈ ಅಮೋಘ ಪಂದ್ಯದಲ್ಲಿ ಉಭಯ ತಂಡಗಳು ತಮ್ಮ ಮೊದಲ ಪಂದ್ಯವನ್ನು 7 ವಿಕೆಟ್‌ಗಳಿಂದ ಗೆದ್ದು ಈ ಪಂದ್ಯಕ್ಕೆ ಕಾಲಿಡುತ್ತಿವೆ.

ಅಫ್ಘಾನ್ ಮಣಿಸಿದ ಭಾರತ

ಭಾರತ ತಂಡ ಈ ಟೂರ್ನಿಯ ತನ್ನ ಮೊದಲ ಪಂದ್ಯದಲ್ಲಿ ಅಫ್ಘಾನಿಸ್ತಾನವನ್ನು 7 ವಿಕೆಟ್‌ಗಳಿಂದ ಸೋಲಿಸುವ ಮೂಲಕ ಗೆಲುವಿನ ಆರಂಭವನ್ನು ಮಾಡಿದೆ. ಬಾಲ್ ಮತ್ತು ಬ್ಯಾಟ್ ಎರಡರಲ್ಲೂ ಅದ್ಭುತ ಪ್ರದರ್ಶನ ನೀಡಿದ ಅರ್ಶಿನ್ ಕುಲಕರ್ಣಿ ಟೀಂ ಇಂಡಿಯಾದ ಈ ಗೆಲುವಿನ ಹೀರೋ ಎನಿಸಿಕೊಂಡಿದ್ದರು. ಇನ್ನೊಂದೆಡೆ ಪಾಕಿಸ್ತಾನದ ಯುವ ತಂಡ ನೇಪಾಳವನ್ನು 7 ವಿಕೆಟ್‌ಗಳಿಂದ ಸೋಲಿಸಿತು. ಈಗ ಎರಡು ವಿಜೇತ ತಂಡಗಳ ನಡುವಿನ ಈ ಪಂದ್ಯವೂ ಸೆಮಿಫೈನಲ್‌ಗೆ ಟಿಕೆಟ್‌ಗೆ ಮಹತ್ವದ್ದಾಗಿದೆ.

IND vs PAK: ಡಿ.10 ರಂದು ಭಾರತ- ಪಾಕಿಸ್ತಾನ ನಡುವೆ ಕ್ರಿಕೆಟ್ ಕದನ; ಪಂದ್ಯ ಎಷ್ಟು ಗಂಟೆಗೆ ಆರಂಭ?

ಪಂದ್ಯಾವಳಿಯಲ್ಲಿ ತಲಾ ನಾಲ್ಕು ತಂಡಗಳನ್ನು ಎರಡು ಗುಂಪುಗಳಳಾಗಿ ವಿಂಗಡಿಸಲಾಗಿದೆ. ಗುಂಪು ಹಂತದಲ್ಲಿ ಒಂದು ತಂಡ ಮೂರು ಪಂದ್ಯಗಳನ್ನು ಆಡಲಿದೆ. ಎರಡೂ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸಲಿವೆ. ಅಂದರೆ ಈ ಪಂದ್ಯದ ಗೆಲುವಿನ ನಂತರ ಯಾವುದೇ ಒಂದು ತಂಡ ಸೆಮಿಫೈನಲ್‌ಗೆ ಅರ್ಹತೆ ಪಡೆಯುವುದು ಸಹ ಖಚಿತವಾಗಿದೆ.

ಪಂದ್ಯವನ್ನು ಯಾವಾಗ, ಎಲ್ಲಿ ಮತ್ತು ಹೇಗೆ ವೀಕ್ಷಿಸಬೇಕು?

ಯುಎಇಯಲ್ಲಿ ಅಂಡರ್-19 ಏಷ್ಯಾಕಪ್ ಪಂದ್ಯಗಳು ನಡೆಯುತ್ತಿವೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಐಸಿಸಿ ಅಕಾಡೆಮಿ ಓವಲ್-1 ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಸ್ಥಳೀಯ ಕಾಲಮಾನ ಬೆಳಗ್ಗೆ 9.30ಕ್ಕೆ ನಡೆಯಲಿದೆ. ಆದರೆ ಭಾರತೀಯ ಕಾಲಮಾನದ ಪ್ರಕಾರ ಪಂದ್ಯ ಬೆಳಗ್ಗೆ 11 ಗಂಟೆಗೆ ಆರಂಭವಾಗಲಿದೆ. ಈ ಟೂರ್ನಿಯ ಪಂದ್ಯಗಳು ಯಾವುದೇ ಟಿವಿ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿಲ್ಲ. ಆದರೆ ಈ ಪಂದ್ಯಗಳನ್ನು ಎಸಿಸಿಯ ಯೂಟ್ಯೂಬ್ ಚಾನೆಲ್ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಟಿವಿಯಲ್ಲಿ ಉಚಿತವಾಗಿ ಆನಂದಿಸಬಹುದು.

ಉಭಯ ತಂಡಗಳು

ಭಾರತ: ಉದಯ್ ಸಹರನ್ (ನಾಯಕ), ಸೌಮಿ ಕುಮಾರ್ ಪಾಂಡೆ (ಉಪನಾಯಕ), ಅರ್ಶಿನ್ ಕುಲಕರ್ಣಿ, ಆದರ್ಶ್ ಸಿಂಗ್, ರುದ್ರ ಮಯೂರ್ ಪಟೇಲ್, ಸಚಿನ್ ದಾಸ್, ಪ್ರಿಯಾಂಶು ಮೊಲಿಯಾ, ಮುಶೀರ್ ಖಾನ್, ಅರವೇಲಿ ಅವನೀಶ್ ರಾವ್ (ವಿಕೆಟ್ ಕೀಪರ್), ಇನೇಶ್ ಮಹಾಜನ್, ಮುರುಗನ್ ಅಭಿಷೇಕ್, ಧನುಷ್ ಗೌಡ, ಆರಾಧ್ಯ ಶುಕ್ಲಾ, ರಾಜ್ ಲಿಂಬಾನಿ, ನಮನ್ ತಿವಾರಿ.

ಪಾಕಿಸ್ತಾನ: ಸಾದ್ ಬೇಗ್ (ನಾಯಕ/ವಿಕೆಟ್ ಕೀಪರ್), ಅಹ್ಮದ್ ಹುಸೇನ್, ಅಲಿ ಅಸ್ಫಂಡ್, ಅಮೀರ್ ಹಸನ್, ಅರಾಫತ್ ಮಿನ್ಹಾಸ್ (ಉಪನಾಯಕ), ಅಜಾನ್ ಅವೈಸ್, ಖುಬೈಬ್ ಖಲೀಲ್, ನಜಾಬ್ ಖಾನ್, ನವೀದ್ ಅಹ್ಮದ್ ಖಾನ್, ಮೊಹಮ್ಮದ್ ರಿಯಾಜುಲ್ಲಾ, ಮೊಹಮ್ಮದ್ ತಯ್ಯಬ್ ಆರಿಫ್, ಮೊಹಮ್ಮದ್ ಝಿಶಾನ್ ಶಹಜೈಬ್ ಖಾನ್, ಶಮಿಲ್ ಹುಸೇನ್, ಉಬೈದ್ ಶಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:11 am, Sun, 10 December 23

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್