IND vs BAN: ಭಾರತ- ಬಾಂಗ್ಲಾ ನಡುವೆ ಏಷ್ಯಾಕಪ್ ಫೈನಲ್; ಪಂದ್ಯ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ ?

U19 Women's Asia Cup 2024 Final: ಅಂಡರ್-19 ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯ ಡಿಸೆಂಬರ್ 22 ರಂದು ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯಲಿದೆ. ಟೂರ್ನಿಯಲ್ಲಿ ಉಭಯ ತಂಡಗಳಿಂದ ಜಿದ್ದಾಜಿದ್ದಿನ ಪೈಪೋಟಿ ಕಂಡುಬಂದಿದ್ದು, ಹಾಲಿ ಚಾಂಪಿಯನ್‌ ಭಾರತ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್ ಪ್ರವೇಶಿಸಿದರೆ, ಇತ್ತ ಬಾಂಗ್ಲಾದೇಶ ತಂಡ ಒಂದು ಪಂದ್ಯವನ್ನು ಸೋತು, ಉಳಿದ ಪಂದ್ಯಗಳಲ್ಲಿ ಗೆದ್ದು ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ.

IND vs BAN: ಭಾರತ- ಬಾಂಗ್ಲಾ ನಡುವೆ ಏಷ್ಯಾಕಪ್ ಫೈನಲ್; ಪಂದ್ಯ ಎಷ್ಟು ಗಂಟೆಗೆ ಆರಂಭ? ಯಾವ ಚಾನೆಲ್​ನಲ್ಲಿ ನೇರ ಪ್ರಸಾರ ?
ಭಾರತ- ಬಾಂಗ್ಲಾದೇಶ
Follow us
ಪೃಥ್ವಿಶಂಕರ
|

Updated on:Dec 21, 2024 | 9:56 PM

ಅಂಡರ್-19 ಮಹಿಳಾ ಏಷ್ಯಾಕಪ್ ಇದೀಗ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈ ಟೂರ್ನಿಯ ಫೈನಲ್ ಪಂದ್ಯ ಡಿಸೆಂಬರ್ 22 ರಂದು ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯಲಿದೆ. ಟೂರ್ನಿಯಲ್ಲಿ ಉಭಯ ತಂಡಗಳಿಂದ ಜಿದ್ದಾಜಿದ್ದಿನ ಪೈಪೋಟಿ ಕಂಡುಬಂದಿದ್ದು, ಹಾಲಿ ಚಾಂಪಿಯನ್‌ ಭಾರತ ಒಂದೇ ಒಂದು ಪಂದ್ಯವನ್ನು ಸೋಲದೆ ಫೈನಲ್ ಪ್ರವೇಶಿಸಿದರೆ, ಇತ್ತ ಬಾಂಗ್ಲಾದೇಶ ತಂಡ ಒಂದು ಪಂದ್ಯವನ್ನು ಸೋತು, ಉಳಿದ ಪಂದ್ಯಗಳಲ್ಲಿ ಗೆದ್ದು ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಹೀಗಾಗಿ ಫೈನಲ್ ಪಂದ್ಯದಲ್ಲಿ ಎರಡೂ ತಂಡಗಳಿಂದ ಜಿದ್ದಾಜಿದ್ದಿನ ಹೋರಾಟವನ್ನು ನಿರೀಕ್ಷಿಸಲಾಗಿದೆ.

ಉಭಯ ತಂಡಗಳ ಬಲಾಬಲ

ಕಳೆದ ವರ್ಷ 19 ವರ್ಷದೊಳಗಿನವರ ವಿಶ್ವಕಪ್ ವಿಜೇತ ಭಾರತ ತಂಡದ ಭಾಗವಾಗಿದ್ದ ಗೊಂಗಡಿ ತ್ರಿಶಾ ಈ ಬಾರಿಯ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿದ್ದಾರೆ. ತ್ರಿಶಾ ನಾಲ್ಕು ಪಂದ್ಯಗಳಲ್ಲಿ 125.88 ಸ್ಟ್ರೈಕ್ ರೇಟ್‌ನಲ್ಲಿ 107 ರನ್ ಗಳಿಸಿದ್ದಾರೆ. ಇತ್ತ ಬೌಲಿಂಗ್​ನಲ್ಲಿ ಮ್ಯಾಜಿಕ್ ಮಾಡುತ್ತಿರುವ ಎಡಗೈ ಸ್ಪಿನ್ನರ್ ಆಯುಷಿ ಶುಕ್ಲಾ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಅವರು ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ ಏಳು ವಿಕೆಟ್‌ಗಳನ್ನು ಪಡೆದಿದ್ದಾರೆ.

ಇತ್ತ ಬಾಂಗ್ಲಾದೇಶ ಪರವೂ ಮೊಸಮತ್ ಇವಾ ಈ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿದ್ದು, ಅವರು ಆಡಿರುವ ನಾಲ್ಕು ಪಂದ್ಯಗಳಲ್ಲಿ 69 ರನ್ ಗಳಿಸಿದ್ದಾರೆ. ಬೌಲಿಂಗ್‌ನಲ್ಲಿ ಬಲಗೈ ಸ್ಪಿನ್ನರ್ ನಿಶಿತಾ ಅಖ್ತರ್ ನಿಶಿ ಏಳು ವಿಕೆಟ್​ಗಳೊಂದಿಗೆ ಬಾಂಗ್ಲಾದೇಶದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ಅಂಡರ್-19 ಮಹಿಳಾ ಏಷ್ಯಾಕಪ್ ಫೈನಲ್ ಯಾವ ತಂಡಗಳ ನಡುವೆ ನಡೆಯಲಿದೆ?

ಅಂಡರ್-19 ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯ ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆಯಲಿದೆ.

ಅಂಡರ್-19 ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಅಂಡರ್-19 ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯವು ಭಾರತ ಮತ್ತು ಬಾಂಗ್ಲಾದೇಶ ನಡುವೆ ಭಾನುವಾರ, ಡಿಸೆಂಬರ್ 22 ರಂದು ಕೌಲಾಲಂಪುರದ ಬ್ಯೂಮಾಸ್ ಓವಲ್‌ನಲ್ಲಿ ನಡೆಯಲಿದೆ.

ಅಂಡರ್-19 ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?

ಅಂಡರ್-19 ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 7:00 ಗಂಟೆಗೆ ಪ್ರಾರಂಭವಾಗುತ್ತದೆ.

ಅಂಡರ್-19 ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬೇಕು?

ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಂಡರ್-19 ಮಹಿಳಾ ಏಷ್ಯಾಕಪ್ ಫೈನಲ್‌ನ ಪ್ರಸಾರ ಹಕ್ಕುಗಳನ್ನು ಹೊಂದಿದೆ.

ಅಂಡರ್-19 ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?

ಅಂಡರ್-19 ಮಹಿಳಾ ಏಷ್ಯಾಕಪ್ ಫೈನಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಸೋನಿ ಲಿವ್ ಅಪ್ಲಿಕೇಶನ್‌ನಲ್ಲಿ ಲಭ್ಯವಿರುತ್ತದೆ.

ಉಭಯ ಸಂಭಾವ್ಯ ತಂಡಗಳು

ಭಾರತ ತಂಡ: ಈಶ್ವರಿ ಅವ್ಸರೆ, ಜಿ ಕಮಲಿನಿ, ಸಾನಿಕಾ ಚಲ್ಕೆ, ಗೊಂಗಡಿ ತ್ರಿಶಾ, ನಿಕಿ ಪ್ರಸಾದ್ (ನಾಯಕಿ), ಭಾವಿಕಾ ಅಹಿರೆ (ವಿಕೆಟ್ ಕೀಪರ್), ಮಿಥಿಲಾ ವಿನೋದ್, ಆಯುಷಿ ಶುಕ್ಲಾ, ಪರುಣಿಕಾ ಸಿಸೋಡಿಯಾ, ದೃತಿ ಕೇಸರಿ, ಶಬ್ನಮ್ ಶಕಿಲ್

ಬಾಂಗ್ಲಾದೇಶ: ಫಹೋಮಿದಾ ಚೋಯಾ, ಮೊಸಮ್ಮತ್ ಇವಾ, ಸುಮೈಯಾ ಅಖ್ತರ್, ಸುಮಯ್ಯಾ ಅಖ್ತರ್ (ನಾಯಕಿ), ಹಬೀಬಾ ಇಸ್ಲಾಂ, ಜುರಿಯಾ ಫಿರ್ದೌಸ್ (ವಿಕೆಟ್ ಕೀಪರ್), ಫರ್ಜಾನಾ ಎಸ್ಮಿನ್, ಅನಿಸಾ ಅಖ್ತರ್ ಸೋಬಾ, ಇಶಿತಾ ಅಖ್ತರ್ ನಿಶಿ, ಜನ್ನತುಲ್ ಮೌವಾ, ಸಾದಿಯಾ ಅಖ್ತರ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:55 pm, Sat, 21 December 24