VIDEO: ಹ್ಯಾಟ್ರಿಕ್ ವಿಕೆಟ್ ಪಡೆದ ಯುವ ವೇಗಿ ಕಾರ್ತಿಕ್ ತ್ಯಾಗಿ

UP T20: ಕಠಿಣ ಗುರಿ ಬೆನ್ನತ್ತಿದ ಲಕ್ನೋ ಫಾಲ್ಕೋನ್ ತಂಡ 87 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಇದಾದ ಬಳಿಕ ವಿಪ್ರಜ್ ನಿಗಮ್ 20 ಎಸೆತಗಳಲ್ಲಿ 45 ರನ್ ಗಳಿಸಿ ಹೋರಾಟ ನಡೆಸಿದರು. ಈ ಹಂತದಲ್ಲಿ ದಾಳಿಗಿಳಿದ ಕಾರ್ತಿಕ್ ತ್ಯಾಗಿ ಸತತ ಮೂರು ವಿಕೆಟ್​ ಕಬಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದರು.

VIDEO: ಹ್ಯಾಟ್ರಿಕ್ ವಿಕೆಟ್ ಪಡೆದ ಯುವ ವೇಗಿ ಕಾರ್ತಿಕ್ ತ್ಯಾಗಿ
Kartik Tyagi
Follow us
TV9 Web
| Updated By: ಝಾಹಿರ್ ಯೂಸುಫ್

Updated on: Sep 07, 2023 | 5:42 PM

ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಯುಪಿ ಟಿ20 ಲೀಗ್​ನಲ್ಲಿ ಯುವ ವೇಗಿ ಕಾರ್ತಿಕ್ ತ್ಯಾಗಿ ಹ್ಯಾಟ್ರಿಕ್ ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ಮೂಲಕ ಉತ್ತರ ಪ್ರದೇಶ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ಮೊದಲ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೀರತ್ ಮೇವರಿಕ್ಸ್ ಪರ ಆರಂಭಿಕ ಬ್ಯಾಟ್ಸ್‌ಮನ್ ಸ್ವಸ್ತಿಕ್ ಮಿಶ್ರಾ 39 ಎಸೆತಗಳಲ್ಲಿ 6 ಫೋರ್ ಹಾಗು 3 ಸಿಕ್ಸ್​ನೊಂದಿಗೆ 56 ರನ್ ಗಳಿಸಿದರು. ಇನ್ನು ರಿಂಕು ಸಿಂಗ್ ಕೇವಲ 12 ರನ್ ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ತಂಡ ಮೀರತ್ ಮೇವರಿಕ್ಸ್ ತಂಡವು 8 ವಿಕೆಟ್‌ಗೆ 191 ರನ್ ಗಳಿಸಿತು.

192 ರನ್​ಗಳ ಗುರಿ ಬೆನ್ನತ್ತಿದ ಲಕ್ನೋ ಫಾಲ್ಕೋನ್ ತಂಡ 87 ರನ್‌ಗಳಿಗೆ 5 ವಿಕೆಟ್ ಕಳೆದುಕೊಂಡಿತ್ತು. ಇದಾದ ಬಳಿಕ ವಿಪ್ರಜ್ ನಿಗಮ್ 20 ಎಸೆತಗಳಲ್ಲಿ 45 ರನ್ ಗಳಿಸಿ ಹೋರಾಟ ನಡೆಸಿದರು. ಈ ಹಂತದಲ್ಲಿ ದಾಳಿಗಿಳಿದ ಕಾರ್ತಿಕ್ ತ್ಯಾಗಿ ಸತತ ಮೂರು ವಿಕೆಟ್​ ಕಬಳಿಸುವ ಮೂಲಕ ಹ್ಯಾಟ್ರಿಕ್ ಸಾಧನೆ ಮಾಡಿದರು.

20ನೇ ಓವರ್‌ನ ಮೂರನೇ ಎಸೆತದಲ್ಲಿ ಯಶ್ ದಯಾಲ್ ಅವರನ್ನು ಬೌಲ್ಡ್ ಮಾಡಿದ ತ್ಯಾಗಿ, ನಾಲ್ಕನೇ ಎಸೆತದಲ್ಲಿ ಕಾರ್ತಿಕೇಯ ಜೈಸ್ವಾಲ್ ಅವರ ಸ್ಟಂಪ್ ಎಗರಿಸಿದರು. ಇನ್ನು ಕಾರ್ತಿಕ್ ವಿಕ್ರಾಂತ್ ಚೌಧರಿ ಅವರನ್ನು ಬೌಲ್ಡ್ ಮಾಡಿ ಹ್ಯಾಟ್ರಿಕ್ ಸಾಧನೆ ಮಾಡಿದರು. ಅಲ್ಲದೆ ಈ ಪಂದ್ಯದಲ್ಲಿ 2.5 ಓವರ್ ಗಳಲ್ಲಿ 26 ರನ್ ನೀಡಿ 4 ವಿಕೆಟ್ ಕಬಳಿಸಿ ಮಿಂಚಿದರು. ಈ ಮೂಲಕ ಲಕ್ನೋ ತಂಡವು 19.5 ಓವರ್‌ಗಳಲ್ಲಿ 157 ರನ್​ಗಳಿಗೆ ಆಲೌಟ್ ಆಗುವಲ್ಲಿ ಪ್ರಮುಖ ಪಾತ್ರವಹಿಸಿದರು.

ಐಪಿಎಲ್​​ನಲ್ಲಿ ತ್ಯಾಗಿ:

ಕಾರ್ತಿಕ್ ತ್ಯಾಗಿ ಐಪಿಎಲ್ 2023 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್‌ನ ಭಾಗವಾಗಿದ್ದರು. ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ್ ರಾಯಲ್ಸ್ ಪರವಾಗಿಯೂ ಪರ ಕೂಡ ಈ ಹಿಂದೆ ಕಣಕ್ಕಿಳಿದಿದ್ದರು. ಈ ವೇಳೆ ಒಟ್ಟು 19 ಪಂದ್ಯಗಳನ್ನಾಡಿರುವ ಯುವ ವೇಗಿ 15 ವಿಕೆಟ್ ಕಬಳಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ICC World Cup 2023: ಏಕದಿನ ವಿಶ್ವಕಪ್​ಗೆ 5 ತಂಡಗಳು ಪ್ರಕಟ

ಇನ್ನು ಒಟ್ಟಾರೆ T20 ವೃತ್ತಿಜೀವನದಲ್ಲಿ ಕಾರ್ತಿಕ್ ತ್ಯಾಗಿ 26 ಪಂದ್ಯಗಳಲ್ಲಿ 21 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಹಾಗೆಯೇ ಲಿಸ್ಟ್-ಎ ಕ್ರಿಕೆಟ್​ನಲ್ಲಿ 12 ಪಂದ್ಯಗಳಲ್ಲಿ 20 ವಿಕೆಟ್ ಪಡೆದಿದ್ದಾರೆ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ