
WPL 2023: ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ನ ಕೊನೆಯ ಲೀಗ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡ ಭರ್ಜರಿ ಜಯ ಸಾಧಿಸಿದೆ. ಈ ಜಯದೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಡಬ್ಲ್ಯೂಪಿಎಲ್ನ ಫೈನಲ್ಗೆ ಪ್ರವೇಶಿಸಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಯುಪಿ ವಾರಿಯರ್ಸ್ ತಂಡವು 6 ವಿಕೆಟ್ ನಷ್ಟಕ್ಕೆ 138 ರನ್ಗಳಿಸಲಷ್ಟೇ ಶಕ್ತರಾಗಿದ್ದರು. ಇನ್ನು 139 ರನ್ಗಳ ಸುಲಭ ಗುರಿ ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 17.5 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 142 ರನ್ ಬಾರಿಸಿ 5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನಕ್ಕೇರಿದೆ.
ವುಮೆನ್ಸ್ ಪ್ರೀಮಿಯರ್ ಲೀಗ್ನ ಪಾಯಿಂಟ್ ಟೇಬಲ್ನಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್ ಪ್ರವೇಶಿಸುತ್ತದೆ. ಅದರಂತೆ ಇದೀಗ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಫೈನಲ್ಗೆ ಎಂಟ್ರಿ ಕೊಟ್ಟಿದೆ. ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ಎಲಿಮಿನೇಟರ್ ಪಂದ್ಯ ಆಡಲಿದ್ದು, ಈ ಪಂದ್ಯದಲ್ಲಿ ಜಯ ಸಾಧಿಸುವ ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಫೈನಲ್ ಪಂದ್ಯವಾಡಲಿದೆ.
ಎಲಿಮಿನೇಟರ್ ಪಂದ್ಯವು ಮಾರ್ಚ್ 24 ರಂದು ಮುಂಬೈ ಇಂಡಿಯನ್ಸ್ ಹಾಗೂ ಯುಪಿ ವಾರಿಯರ್ಸ್ ನಡುವೆ ನಡೆಯಲಿದೆ. ಇನ್ನು ಫೈನಲ್ ಪಂದ್ಯವು ಮಾರ್ಚ್ 26 ರಂದು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಜರುಗಲಿದೆ.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ಪೂನಂ ಯಾದವ್
ಯುಪಿ ವಾರಿಯರ್ಸ್ (ಪ್ಲೇಯಿಂಗ್ XI): ಶ್ವೇತಾ ಸೆಹ್ರಾವತ್, ಅಲಿಸ್ಸಾ ಹೀಲಿ (ನಾಯಕಿ), ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ಸಿಮ್ರಾನ್ ಶೇಖ್, ಪಾರ್ಶವಿ ಚೋಪ್ರಾ, ಅಂಜಲಿ ಸರ್ವಾಣಿ, ಸೊಪ್ಪದಂಡಿ ಯಶಸ್ರಿ, ಶಬ್ನಿಮ್ ಇಸ್ಮಾಯಿಲ್
ಡೆಲ್ಲಿ ಕ್ಯಾಪಿಟಲ್ಸ್ ತಂಡ: ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರೋಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಅರುಂಧತಿ ರೆಡ್ಡಿ, ರಾಧಾ ಯಾದವ್, ಶಿಖಾ ಪಾಂಡೆ, ಪೂನಂ ಯಾದವ್, ಲಾರಾ ಹ್ಯಾರಿಸ್, ತಾರಾ ನಾರ್ರಿಸ್, ಜಸಿಯಾ ಅಖ್ತರ್, ಮಿನ್ನು ಮಣಿ, ಅಪರ್ಣಾ ಮೊಂಡಲ್, ಟೈಟಾಸ್ ಸಾಧು, ಸ್ನೇಹಾ ದೀಪ್ತಿ
ಯುಪಿ ವಾರಿಯರ್ಸ್ ತಂಡ: ದೇವಿಕಾ ವೈದ್ಯ, ಅಲಿಸ್ಸಾ ಹೀಲಿ(ನಾಯಕಿ), ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ಗ್ರೇಸ್ ಹ್ಯಾರಿಸ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ಸಿಮ್ರಾನ್ ಶೇಖ್, ಅಂಜಲಿ ಸರ್ವಾಣಿ, ಪಾರ್ಶವಿ ಚೋಪ್ರಾ, ರಾಜೇಶ್ವರಿ ಗಾಯಕ್‌ವಾಡ್, ಲೌರೆನಿಮ್ ಇಸ್ಮಾಯಿಲ್, ಶಾಬ್ನಿಮ್ ಇಸ್ಮಾಯಿಲ್ , ಲಕ್ಷ್ಮಿ ಯಾದವ್, ಶ್ವೇತಾ ಸೆಹ್ರಾವತ್, ಸೊಪ್ಪದಂಡಿ ಯಶಸ್ರಿ.
5 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದ ಡೆಲ್ಲಿ ಕ್ಯಾಪಿಟಲ್ಸ್
ರನೌಟ್ ಆಗಿ ಹೊರನಡೆದ ಜೆಸ್ ಜೊನಾಸನ್ (0)
ಡೆಲ್ಲಿ ಕ್ಯಾಪಿಟಲ್ಸ್ಗೆ ಗೆಲ್ಲಲು 4 ಓವರ್ಗಳಲ್ಲಿ ಕೇವಲ 9 ರನ್ಗಳ ಅವಶ್ಯಕತೆ
ದೀಪ್ತಿ ಶರ್ಮಾ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಡಿಸಿದ ಮರಿಝನ್ನೆ ಕಪ್
ಕ್ರೀಸ್ನಲ್ಲಿ ಅಲೀಸ್ ಕ್ಯಾಪ್ಸಿ – ಮರಿಝನ್ನೆ ಕಪ್ ಬ್ಯಾಟಿಂಗ್
ಕ್ರೀಸ್ನಲ್ಲಿ ಅಲೀಸ್ ಕ್ಯಾಪ್ಸಿ ಹಾಗೂ ಮರಿಝನ್ನೆ ಕಪ್ ಬ್ಯಾಟಿಂಗ್
ಪರ್ಶಾವಿ ಚೋಪ್ರಾ ಎಸೆತದಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಅಲೀಸ್ ಕ್ಯಾಪ್ಸಿ
ಶಬ್ನಿಮ್ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದ ಮೆಗ್ ಲ್ಯಾನಿಂಗ್ (39)
ಕ್ರೀಸ್ನಲ್ಲಿ ಮೆಗ್ ಲ್ಯಾನಿಂಗ್ ಹಾಗೂ ಜೆಮಿಮಾ ರೋಡಿಗ್ರಸ್ ಬ್ಯಾಟಿಂಗ್
ದೀಪ್ತಿ ಶರ್ಮಾ ಎಸೆತದಲ್ಲಿ ಲಾಂಗ್ ಆಫ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಲ್ಯಾನಿಂಗ್
ಯಶಸ್ರಿ ಎಸೆತದಲ್ಲಿ ಕ್ಯಾಚ್ ನೀಡಿ ಹೊರನಡೆದ ಶಫಾಲಿ ವರ್ಮಾ (21)
ಯಶಸ್ರಿ ಎಸೆತದಲ್ಲಿ ಫೈನ್ಲೆಗ್ನತ್ತ ಫೋರ್ ಬಾರಿಸಿದ ಶಫಾಲಿ ವರ್ಮಾ
ಅರ್ಧಶತಕ ಪೂರೈಸಿದ ಡೆಲ್ಲಿ ಕ್ಯಾಪಿಟಲ್ಸ್
ಅಂಜಲಿ ಎಸೆತದಲ್ಲಿ ಆಫ್ಸೈಡ್ನತ್ತ ರಾಕೆಟ್ ಶಾಟ್ ಬಾರಿಸಿದ ಮೆಗ್ ಲ್ಯಾನಿಂಗ್…ಫೋರ್
ಶಬ್ನಿಮ್ ಇಸ್ಮಾಯಿಲ್ ಎಸೆದ ಮೊದಲ ಓವರ್ನಲ್ಲೇ 3 ಫೋರ್ ಹಾಗೂ 1 ಸಿಕ್ಸ್ ಸಿಡಿಸಿದ ಮೆಗ್ ಲ್ಯಾನಿಂಗ್
ಡೆಲ್ಲಿ ಕ್ಯಾಪಿಟಲ್ಸ್ಗೆ 139 ರನ್ಗಳ ಗುರಿ ನೀಡಿದ ಯುಪಿ ವಾರಿಯರ್ಸ್
ರಾಧಾ ಯಾದವ್ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ತಹ್ಲಿಯಾ ಮೆಕ್ಗ್ರಾಥ್
ಕ್ರೀಸ್ನಲ್ಲಿ ತಹ್ಲಿಯಾ ಮೆಕ್ಗ್ರಾಥ್ – ದೀಪ್ತಿ ಶರ್ಮಾ ಬ್ಯಾಟಿಂಗ್
ಜೆಸ್ ಜೊನಾಸನ್ ಎಸೆತದಲ್ಲಿ ಸ್ಟಂಪ್ ಔಟಾಗಿ ಹೊರನಡೆದ ಕಿರಣ್ ನವಗಿರೆ (2)
ಅರುಂಧತಿ ಓವರ್ನಲ್ಲಿ ಮೂರು ಬೌಂಡರಿ ಬಾರಿಸಿದ ತಹ್ಲಿಯಾ ಮೆಕ್ಗ್ರಾಥ್
ಅರುಂಧತಿ ಎಸೆತದಲ್ಲಿ ಆಕರ್ಷಕ ಬೌಂಡರಿ ಬಾರಿಸಿದ ತಹ್ಲಿಯಾ
ಕ್ರೀಸ್ನಲ್ಲಿ ತಹ್ಲಿಯಾ ಮೆಕ್ಗ್ರಾಥ್ ಹಾಗೂ ಕಿರಣ್ ನವಗಿರೆ ಬ್ಯಾಟಿಂಗ್
ರಾಧಾ ಯಾದವ್ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರನಡೆದ ಸಿಮ್ರಾನ್ ಶೇಖ್ (11)
ಯುಪಿ ವಾರಿಯರ್ಸ್ ಆರಂಭಿಕರಾದ ಅಲಿಸ್ಸಾ ಹೀಲಿ ಹಾಗೂ ಶ್ವೇತಾ ಸೆಹ್ರಾವತ್ ಔಟ್
ಕ್ರೀಸ್ನಲ್ಲಿ ತಹ್ಲಿಯಾ – ಸಿಮ್ರಾನ್ ಶೇಖ್ ಬ್ಯಾಟಿಂಗ್
ಕ್ರೀಸ್ನಲ್ಲಿ ಅಲಿಸ್ಸಾ ಹೀಲಿ – ಶ್ವೇತಾ ಸೆಹ್ರಾವತ್ ಬ್ಯಾಟಿಂಗ್
ಶಿಖಾ ಪಾಂಡೆ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಶ್ವೇತಾ ಸೆಹ್ರಾವತ್
ಯುಪಿ ವಾರಿಯರ್ಸ್ (ಪ್ಲೇಯಿಂಗ್ XI): ಶ್ವೇತಾ ಸೆಹ್ರಾವತ್, ಅಲಿಸ್ಸಾ ಹೀಲಿ (ನಾಯಕಿ), ಕಿರಣ್ ನವಗಿರೆ, ತಹ್ಲಿಯಾ ಮೆಕ್‌ಗ್ರಾತ್, ದೀಪ್ತಿ ಶರ್ಮಾ, ಸೋಫಿ ಎಕ್ಲೆಸ್ಟೋನ್, ಸಿಮ್ರಾನ್ ಶೇಖ್, ಪಾರ್ಶವಿ ಚೋಪ್ರಾ, ಅಂಜಲಿ ಸರ್ವಾಣಿ, ಸೊಪ್ಪದಂಡಿ ಯಶಸ್ರಿ, ಶಬ್ನಿಮ್ ಇಸ್ಮಾಯಿಲ್.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಆಲಿಸ್ ಕ್ಯಾಪ್ಸಿ, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಜೆಸ್ ಜೊನಾಸೆನ್, ರಾಧಾ ಯಾದವ್, ಅರುಂಧತಿ ರೆಡ್ಡಿ, ಶಿಖಾ ಪಾಂಡೆ, ಪೂನಂ ಯಾದವ್.
ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡದ ನಾಯಕಿ ಮೆಗ್ ಲ್ಯಾನಿಂಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
Published On - 7:02 pm, Tue, 21 March 23