AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Urvashi Rautela: ಪಾಕಿಸ್ತಾನ ಕ್ರಿಕೆಟಿಗನ ಜೊತೆ ರೊಮ್ಯಾಂಟಿಕ್ ವಿಡಿಯೋ ಹಂಚಿಕೊಂಡ ಊರ್ವಶಿ ರೌಟೇಲ

Asia Cup 2022: ಪಾಕಿಸ್ತಾನದ ಕ್ರಿಕೆಟಿಗ ನಸೀಮ್ ಶಾ ಜೊತೆಗಿನ ವಿಡಿಯೋ ಮೂಲಕ ರೌಟೇಲ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಸ್ವತಃ ಊರ್ವಶಿ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ವಿಡಿಯೋ ಸ್ಟೇಟಸ್.

Urvashi Rautela: ಪಾಕಿಸ್ತಾನ ಕ್ರಿಕೆಟಿಗನ ಜೊತೆ ರೊಮ್ಯಾಂಟಿಕ್ ವಿಡಿಯೋ ಹಂಚಿಕೊಂಡ ಊರ್ವಶಿ ರೌಟೇಲ
Urvashi Rautela and Naseem Shah
TV9 Web
| Edited By: |

Updated on:Sep 09, 2022 | 12:39 PM

Share

ಹದಿನೈದನೇ ಆವೃತ್ತಿಯ ಏಷ್ಯಾಕಪ್​ನ (Asia Cup 2022) ಸೂಪರ್ 4 ಹಂತದಲ್ಲಿ ಆಡಿದ ಮೊದಲೆರಡು ಪಂದ್ಯದಲ್ಲಿ ಸೋತ ಪರಿಣಾಮ ಭಾರತ ಟೂರ್ನಿಯಿಂದ ಹೊರಬಿದ್ದಿದೆ. ಆದರೆ, ಭಾರತದ ಪ್ರತಿ ಪಂದ್ಯಕ್ಕೆ ಬಾಲಿವುಡ್ ನಟಿ ಊರ್ವಶಿ ರೌಟೇಲ (Urvashi Rautela) ಹಾಜರಿರುತ್ತಿದ್ದರು. ಕಳೆದ ಕೆಲವು ದಿನಗಳಿಂದ ರಿಷಭ್ ಪಂತ್ ಹೆಸರಿನೊಂದಿಗೆ ಬಾರೀ ಚರ್ಚೆಯಲ್ಲಿದ್ದ ನಟಿ ಇದೀಗ ಪಾಕಿಸ್ತಾನ ಆಟಗಾರನ ಜೊತೆ ಸುದ್ದಿಯಲ್ಲಿದ್ದಾರೆ. ಪಾಕಿಸ್ತಾನದ ಕ್ರಿಕೆಟಿಗ ನಸೀಮ್ ಶಾ (Naseem Shah) ಜೊತೆಗಿನ ವಿಡಿಯೋ ಮೂಲಕ ರೌಟೇಲ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೋಲ್ ಆಗುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಸ್ವತಃ ಊರ್ವಶಿ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡ ವಿಡಿಯೋ ಸ್ಟೇಟಸ್.

ಊರ್ವಶಿ ಹಂಚಿಕೊಂಡಿರುವ ವಿಡಿಯೋದಲ್ಲಿ ಪಾಕಿಸ್ತಾನದ ವೇಗದ ಬೌಲರ್ ನಸೀಮ್ ಶಾ ಹಾಗೂ ಊರ್ವಶಿ ನಗುತ್ತಿರುವುದನ್ನು ಕಾಣಬಹುದು. ಈ ವಿಡಿಯೋದ ಹಿನ್ನೆಲೆಯಲ್ಲಿ ಅತೀಫ್ ಅಸ್ಲಾಂ ಅವರ ರೊಮ್ಯಾಂಟಿಕ್ ಹಾಡು ಪ್ಲೇ ಆಗುತ್ತಿದೆ. ಅದರ ನಂತರ ಊರ್ವಶಿ ಮತ್ತು ನಸೀಮ್ ನಡುವೆ ಏನೋ ನಡೆಯುತ್ತಿದೆ ಎಂದು ಊಹಿಸಲಾಗಿದೆ. ಇಬ್ಬರು ಕಣ್ಣಲ್ಲೇ ಮಾತನಾಡಿದ್ದಾರೆ.

ಇದನ್ನೂ ಓದಿ
Image
Dinesh Karthik: 18 ವರ್ಷಗಳ ಕ್ರಿಕೆಟ್ ಜೀವನದಲ್ಲಿ ಮೊದಲ ಬಾರಿ ಬೌಲಿಂಗ್ ಮಾಡಿದ ದಿನೇಶ್ ಕಾರ್ತಿಕ್: ವಿಡಿಯೋ
Image
Suryakumar Yadav: ಸೂರ್ಯಕುಮಾರ್ ಸಿಡಿಸಿದ ಸ್ಫೋಟಕ ಸಿಕ್ಸ್​ಗೆ ಅಫ್ಘಾನ್ ಡಗೌಟ್​ನಲ್ಲಿದ್ದ ಫ್ರಿಡ್ಜ್ ಪುಡಿಪುಡಿ: ವಿಡಿಯೋ
Image
Virat Kohli: ಕೊಹ್ಲಿಯ ಶತಕದ ವೈಭವ: ವಿರಾಟ ಪ್ರದರ್ಶನದ ರೋಚಕ ಫೋಟೋಗಳು ಇಲ್ಲಿದೆ ನೋಡಿ
Image
Virat Kohli: ವಿರಾಟ್ ಕೊಹ್ಲಿ ಶತಕ ಸಿಡಿಸಿ ಪೆವಿಲಿಯನ್​ಗೆ ಬಂದಾಗ ರೋಹಿತ್ ಶರ್ಮಾ ಏನು ಮಾಡಿದ್ರು ನೋಡಿ

ಈ ವಿಡಿಯೋ ವೈರಲ್ ಆಗುತ್ತಿದ್ದು ಊರ್ವಶಿ ಹಾಗೂ ನಸೀಮ್ ಶಾ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಮಿಮ್ಸ್ ಸುರಿಮಳೆಯಾಗುತ್ತಿದೆ. ಇಬ್ಬರ ಫೋಟೋಗಳು ಮತ್ತು ವಿಡಿಯೋಗಳನ್ನು ಎಡಿಟ್ ಮಾಡಿ ಹಲವು ಫನ್ನಿ ಮೀಮ್‌ಗಳನ್ನು ಮಾಡಲಾಗಿದೆ.

ಈ ಹಿಂದೆ ರಿಷಭ್ ಪಂತ್ ಹಾಗೂ ಊರ್ವಶಿ ರೌಟೇಲ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಈ ಸುದ್ದಿಗಳು ಮುನ್ನಲೆಗೆ ಬರುತ್ತಿದ್ದಂತೆ ಪಂತ್ ಬ್ರೇಕಪ್ ಮಾಡಿಕೊಂಡಿದ್ದರು. ಈ ವಿಷಯವನ್ನು ಇತ್ತೀಚೆಗೆ ಊರ್ವಶಿ ಕೂಡ ಸಂದರ್ಶನವೊಂದರಲ್ಲಿ ಪ್ರಸ್ತಾಪಿಸಿದ್ದರು. ಇದು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಬಳಿಕ ದಿಢೀರ್ ಆಗಿ ಭಾರತಪಾಕ್ ನಡುವಣ ಕದನದ ವೇಳೆ ಊರ್ವಶಿ ರೌಟೇಲ ಕಾಣಿಸಿಕೊಂಡಿದ್ದಾರೆ.

ಅಲ್ಲದೆ ಅಭಿಮಾನಿಗಳಿಗೆ ಪೋಸ್ಟ್ ನೀಡುತ್ತಾ ಸ್ಟೇಡಿಯಂನಲ್ಲಿ ಮಿಂಚಿದ್ದರು. ಆದರೆ, ಪಂತ್ ಕಳಪೆ ಫಾರ್ಮ್​ನಿಂದ ಬೇಗನೆ ಔಟಾಗಿದ್ದರು. ಇದರ ನಡುವೆ ಊರ್ವಶಿ ರೌಟೇಲ ಅವರ ಖುಷಿ ಖುಷಿಯಾಗಿರುವ ವಿಡಿಯೋ ವೈರಲ್ ಆಗಿತ್ತು. ಈ ಖುಷಿಗೆ ಪಂತ್ ಬೇಗನೆ ಔಟಾಗಿದ್ದು ಕಾರಣನಾ ಎಂದು ಕೂಡ ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಆಗಿದ್ದರು.

Published On - 12:39 pm, Fri, 9 September 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ