T20 World Cup 2026: ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ನೇರ ಅರ್ಹತೆ ಪಡೆದ ಅಮೆರಿಕ..!

T20 World Cup 2024: ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದೆ. ಇಲ್ಲಿ ಆತಿಥೇಯ ರಾಷ್ಟ್ರಗಳಾದ ಭಾರತ ಮತ್ತು ಶ್ರೀಲಂಕಾ ತಂಡಗಳಿಗೆ ನೇರ ಅರ್ಹತೆ ಇರಲಿದೆ. ಹಾಗೆಯೇ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ದ್ವಿತೀಯ ಸುತ್ತಿಗೆ ಪ್ರವೇಶಿಸಿದ ತಂಡಗಳು ಸಹ 2026ರ ವಿಶ್ವಕಪ್​ಗೆ ಅರ್ಹತೆ ಗಿಟ್ಟಿಸಿಕೊಳ್ಳಲಿದೆ.

T20 World Cup 2026: ಭಾರತದಲ್ಲಿ ನಡೆಯಲಿರುವ ವಿಶ್ವಕಪ್​ಗೆ ನೇರ ಅರ್ಹತೆ ಪಡೆದ ಅಮೆರಿಕ..!
USA
Follow us
ಝಾಹಿರ್ ಯೂಸುಫ್
|

Updated on: Jun 15, 2024 | 8:32 AM

ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ 2026ರ (T20 World Cup 2026) ಟೂರ್ನಿಗೆ ಯುಎಸ್​ಎ (ಅಮೆರಿಕ) ತಂಡ ನೇರ ಅರ್ಹತೆ ಪಡೆದುಕೊಂಡಿದೆ. ಟಿ20 ವಿಶ್ವಕಪ್ 2024 ರಲ್ಲಿ ಸೂಪರ್-8 ಹಂತಕ್ಕೇರುವ ಮೂಲಕ ಯುಎಸ್​ಎ ತಂಡ ಈ ಅರ್ಹತೆ ಗಿಟ್ಟಿಸಿಕೊಂಡಿದೆ. ವಿಶೇಷ ಎಂದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಯುಎಸ್​ಎ ತಂಡವು ಆತಿಥೇಯ ರಾಷ್ಟ್ರವಾಗಿ ಕಣಕ್ಕಿಳಿದಿತ್ತು. ಇದೀಗ ಚೊಚ್ಚಲ ಟೂರ್ನಿಯಲ್ಲೇ ಭರ್ಜರಿ ಪ್ರದರ್ಶನ ನೀಡುವ ಮೂಲಕ ಟಿ20 ವಿಶ್ವಕಪ್ 2026 ರಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ.

20 ತಂಡಗಳು:

ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿದೆ. ಇಲ್ಲಿ ಆತಿಥೇಯ ರಾಷ್ಟ್ರಗಳಾದ ಭಾರತ ಮತ್ತು ಶ್ರೀಲಂಕಾ ತಂಡಗಳಿಗೆ ನೇರ ಅರ್ಹತೆ ಇರಲಿದೆ.

ಹಾಗೆಯೇ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೂಪರ್-8 ಹಂತಕ್ಕೇರುವ 8 ತಂಡಗಳೂ ಕೂಡ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ. ಅದರಂತೆ ಇದೀಗ ದ್ವಿತೀಯ ಸುತ್ತಿಗೆ ಪ್ರವೇಶಿಸಿರುವ ಯುಎಸ್​ಎ ತಂಡವು ಮುಂದಿನ ಟಿ20 ವಿಶ್ವಕಪ್​ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

12 ತಂಡಗಳು ಡೈರೆಕ್ಟ್ ಎಂಟ್ರಿ:

20 ತಂಡಗಳಲ್ಲಿ 12 ತಂಡಗಳು ಡೈರೆಕ್ಟ್ ಎಂಟ್ರಿ ಪಡೆಯಲಿದೆ. ಅದರಂತೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಸೂಪರ್-8 ಹಂತಕ್ಕೇರಿದ 8 ತಂಡಗಳು ನೇರ ಅರ್ಹತೆ ಪಡೆಯಲಿದೆ. ಹಾಗೆಯೇ ಇನ್ನುಳಿದ ನಾಲ್ಕು ತಂಡಗಳನ್ನು ಟಿ20 ತಂಡಗಳ ಶ್ರೇಯಾಂಕವನ್ನು ಆಧರಿಸಿ ಆಯ್ಕೆ ಮಾಡಲಾಗುತ್ತದೆ.

ಅದರಂತೆ ಈ ಬಾರಿ ಟಿ20 ವಿಶ್ವಕಪ್​ನ ಮೊದಲ ಸುತ್ತಿನಿಂದಲೇ ಹೊರಬಿದ್ದಿರುವ ನ್ಯೂಝಿಲೆಂಡ್, ಪಾಕಿಸ್ತಾನ್ ತಂಡಗಳು  ಟಿ20 ತಂಡಗಳ ಶ್ರೇಯಾಂಕದ ಆಧಾರದ ಮೇಲೆ  ನೇರ ಅರ್ಹತೆ ಪಡೆಯಲಿದೆ. ಇನ್ನುಳಿದ 8 ಸ್ಥಾನಗಳಿಗಾಗಿ ಅರ್ಹತಾ ಸುತ್ತಿನ ಪಂದ್ಯಗಳು ನಡೆಯಲಿದೆ. ಈ ಮೂಲಕ ಟಿ20 ವಿಶ್ವಕಪ್​ 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ.

ಇದನ್ನೂ ಓದಿ: IND vs CAN: ಭಾರತ vs ಕೆನಡಾ ಪಂದ್ಯ ನಡೆಯುವುದು ಡೌಟ್

ಟಿ20 ವಿಶ್ವಕಪ್ 2026 ಕ್ಕೆ ಅರ್ಹತೆ ಪಡೆದ ತಂಡಗಳು:

  • ಭಾರತ
  • ಶ್ರೀಲಂಕಾ
  • ಸೌತ್ ಆಫ್ರಿಕಾ
  • ನ್ಯೂಝಿಲೆಂಡ್
  • ಪಾಕಿಸ್ತಾನ್
  • ಇಂಗ್ಲೆಂಡ್
  • ಅಫ್ಘಾನಿಸ್ತಾನ್
  • ವೆಸ್ಟ್ ಇಂಡೀಸ್
  • ಯುಎಸ್​ಎ
  • ಬಾಂಗ್ಲಾದೇಶ್
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ವೆಂಕಟೇಶ್ವರ ಸ್ವಾಮಿಗೆ 150 ಕೆಜಿ ಪುಳಿಯೋಗರೆಯಿಂದ ಅಲಂಕಾರ
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಬಿಗ್ ಬಾಸ್​ಗೆ ಬಂದಿದ್ದಕ್ಕೆ ಸಾರ್ಥಕ ಆಯ್ತು: ಸುದೀಪ್ ನೀಡಿದ ಸರ್ಪ್ರೈಸ್​
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಅಶೋಕ ಸಾರಿಗೆ ಸಚಿವರಾಗಿದ್ದಾಗ ಬಸ್ ಟಿಕೆಟ್ ದರ ಹೆಚ್ಚಿಸಿರಲಿಲ್ಲವೇ? ಸಿಎಂ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಸಿಖ್ಖರ ಮೆರವಣಿಗೆ ವೇಳೆ ಕಾರಿನಲ್ಲಿ ಡಿಕ್ಕಿ;ಜನರಿಂದ ಪೊಲೀಸ್ ಮಗನ ವಾಹನ ಪುಡಿ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಬಿಜೆಪಿ ನಾಯಕರೊಂದಿಗೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ನಡ್ಡಾ ಚರ್ಚೆ
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸೊಸೆ ಇದೇ ರೀತಿ ಬಟ್ಟೆ ಹಾಕಬೇಕು: ಹನುಮಂತನ ತಾಯಿ ಹಾಕಿದ ಷರತ್ತು ಇದು
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಸಚಿನ್ ಸಾವಿನ ಪ್ರಕರಣದಲ್ಲಿ ಖರ್ಗೆ ಪಾತ್ರವಿಲ್ಲ, ರಾಜೀನಾಮೆ ಯಾಕೆ? ಸುರೇಶ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಚಪ್ಪಾಳೆ ಮತ್ತು ಶಿಳ್ಳೆ ಗಿಟ್ಟಿಸಲು ಸೂರಜ್ ರೇವಣ್ಣ ಮಾತಾಡಿದ್ದಾರೆ: ಶ್ರೇಯಸ್
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಕೇಂದ್ರ ಸರ್ಕಾರ ನಮಗೆ ಎಲೆಕ್ಟ್ರಿಕ್ ಬಸ್​​ಗಳನ್ನು ನೀಡುತ್ತಿಲ್ಲ: ಸಚಿವ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ
ಉದಯಪುರ ಘೋಷಣೆ ಕೆಲ ರಾಜ್ಯಗಳಲ್ಲಿ ಜಾರಿಯಾಗಿಲ್ಲ: ಸತೀಶ್ ಜಾರಕಿಹೊಳಿ