AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 515 ರನ್: ಏಕದಿನ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ

ODI World Record: ಏಕದಿನ ಕ್ರಿಕೆಟ್​ನಲ್ಲಿ ಮೂಡಿಬಂದ ಗರಿಷ್ಠ ಸ್ಕೋರ್ 498 ರನ್​ಗಳು. 2022 ರಲ್ಲಿ ನೆದರ್​ಲೆಂಡ್ಸ್​ ವಿರುದ್ಧ ಇಂಗ್ಲೆಂಡ್ ಈ ವಿಶ್ವ ದಾಖಲೆ ಬರೆದಿದ್ದರು. ಇದೀಗ ಅಮೆರಿಕದ ಕಿರಿಯರ ತಂಡ 515 ರನ್ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದೆ.

ಬರೋಬ್ಬರಿ 515 ರನ್: ಏಕದಿನ ಕ್ರಿಕೆಟ್​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣ
USA U19 Team
TV9 Web
| Updated By: ಝಾಹಿರ್ ಯೂಸುಫ್|

Updated on: Aug 15, 2023 | 9:23 PM

Share

ಏಕದಿನ ಕ್ರಿಕೆಟ್​ನಲ್ಲಿ ಬರೋಬ್ಬರಿ 515 ರನ್​ ಬಾರಿಸಿ ಯುಎಸ್​ಎ ಅಂಡರ್ 19 ತಂಡ ಹೊಸ ಇತಿಹಾಸ ನಿರ್ಮಿಸಿದೆ. ಟೊರೊಂಟೊ ಕ್ರಿಕೆಟ್ ಕ್ಲಬ್‌ನಲ್ಲಿ ನಡೆದ ಐಸಿಸಿ ಅಂಡರ್-19 ಪುರುಷರ ಕ್ರಿಕೆಟ್ ವಿಶ್ವಕಪ್ ಅಮೆರಿಕಾಸ್ ಕ್ವಾಲಿಫೈಯರ್‌ ಪಂದ್ಯದಲ್ಲಿ ಈ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ಪಂದ್ಯದಲ್ಲಿ ಯುಎಸ್​ಎ U-19 ಹಾಗೂ ಅರ್ಜೆಂಟೀನಾ U-19 ತಂಡಗಳು ಮುಖಾಮುಖಿಯಾಗಿತ್ತು. ಟಾಸ್ ಗೆದ್ದ ಅರ್ಜೆಂಟೀನಾ ತಂಡದ ನಾಯಕ ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಇತ್ತ ಇನಿಂಗ್ಸ್ ಆರಂಭಿಸಿದ ಪ್ರಣವ್ ಚೆಟ್ಟಿಪಾಳ್ಯಂ ಹಾಗೂ ಭವ್ಯ ಮೆಹ್ತಾ ಯುಎಸ್​ಎ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರು. 43 ಎಸೆತಗಳನ್ನು ಎದುರಿಸಿದ ಪ್ರಣವ್ 10 ಫೋರ್​ಗಳೊಂದಿಗೆ 61 ರನ್​ಗಳಿಸಿ ಔಟಾದರು. ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ್ದ ಭವ್ಯ ಮೆಹ್ತಾ 91 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 136 ರನ್​ ಬಾರಿಸಿ ರನೌಟ್ ಆದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಿ ರಮೇಶ್ ಕೇವಲ 59 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ ಸ್ಪೋಟಕ ಶತಕ ಸಿಡಿಸಿದರು. ಹಾಗೆಯೇ ಅರ್ಜುನ್ ಮಹೇಶ್ 67 ರನ್​ಗಳ ಕೊಡುಗೆ ನೀಡಿದರೆ, ಅಮೋಘ್ ಅರೆಪಲ್ಲಿ 48 ರನ್​ ಬಾರಿಸಿದರು. ಕೆಳ ಕ್ರಮಾಂಕದಲ್ಲಿ ಉತ್ಕರ್ಷ್ ಶ್ರೀವಾಸ್ತವ 22 ಎಸೆತಗಳಲ್ಲಿ 40 ರನ್​ ಚಚ್ಚಿದರು. ಈ ಮೂಲಕ ಯುಎಸ್​ಎ ಅಂಡರ್-19 ತಂಡ ನಿಗದಿತ 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಬರೋಬ್ಬರಿ 515 ರನ್​ ಕಲೆಹಾಕಿತು.

516 ರನ್​ಗಳ ಕಠಿಣ ಗುರಿ ಪಡೆದ ಅರ್ಜೆಂಟೀನಾ ಪರ ಥಿಯೋ ವ್ರೂಗ್ಡೆನ್ಹಿಲ್ 18 ರನ್​ ಬಾರಿಸಿದರೆ, ಫೆಲಿಪೆ ನೆವೆಸ್ 15 ರನ್​ ಕಲೆಹಾಕಿದರು. ಇತ್ತ ಯುಎಸ್​ಎ ಪರ ಕರಾರುವಾಕ್ ದಾಳಿ ಸಂಘಟಿಸಿದ ಆರಿನ್ ನಾಡಕರ್ಣಿ 6 ಓವರ್​ಗಳಲ್ಲಿ ಕೇವಲ 21 ರನ್ ನೀಡಿ 6 ವಿಕೆಟ್ ಉರುಳಿಸಿದರು.

ಪರಿಣಾಮ ಅರ್ಜೆಂಟೀನಾ ಅಂಡರ್​-19 ತಂಡ 19.5 ಓವರ್​ಗಳಲ್ಲಿ ಕೇವಲ 65 ರನ್​ಗಳಿಗೆ ಆಲೌಟ್ ಆಯಿತು. ಈ ಮೂಲಕ ಯುಎಸ್​ಎ ಅಂಡರ್-19 ತಂಡ 450 ರನ್​ಗಳ ಅಮೋಘ ಗೆಲುವು ದಾಖಲಿಸಿದೆ.

ವಿಶ್ವ ದಾಖಲೆ ಬರೆದ ಅಮೆರಿಕದ ಯುವ ಕ್ರಿಕೆಟಿಗರು:

ಈ ಪಂದ್ಯದಲ್ಲಿ 515 ರನ್​ ಬಾರಿಸುವ ಮೂಲಕ ಯುಎಸ್​ಎ ಅಂಡರ್-19 ತಂಡ ಐಸಿಸಿ ಟೂರ್ನಿಯಲ್ಲಿ ಅತ್ಯಧಿಕ ರನ್ ಬಾರಿಸಿದ ವಿಶ್ವ ದಾಖಲೆಯನ್ನು ನಿರ್ಮಿಸಿರುವುದು ವಿಶೇಷ.

ಇದನ್ನೂ ಓದಿ: ಭಾರತ ವಿಶ್ವಕಪ್ ತಂಡದಿಂದ 7 ಆಟಗಾರರು ಔಟ್..!

ಇದಕ್ಕೂ ಮುನ್ನ ಏಕದಿನ ಕ್ರಿಕೆಟ್​ನಲ್ಲಿ ಮೂಡಿಬಂದ ಗರಿಷ್ಠ ಸ್ಕೋರ್ 498 ರನ್​ಗಳು. 2022 ರಲ್ಲಿ ನೆದರ್​ಲೆಂಡ್ಸ್​ ವಿರುದ್ಧ ಇಂಗ್ಲೆಂಡ್ ತಂಡ ಈ ವಿಶ್ವ ದಾಖಲೆ ಬರೆದಿದ್ದರು. ಇದೀಗ ಯುಎಸ್​ಎ ಕಿರಿಯರ ತಂಡ 515 ರನ್ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದೆ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ