AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯವಂಶಿ ಟೀಮ್ ಇಂಡಿಯಾ ಡೆಬ್ಯೂ ವಿಳಂಬ? ಎದುರಾಯ್ತು ಅಡಚಣೆ

15ರ ಹರೆಯದ ವೈಭವ್ ಸೂರ್ಯವಂಶಿ ಭಾರತ T20 ತಂಡಕ್ಕೆ ಆಯ್ಕೆಯಾಗಿ, ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಅತಿ ಕಿರಿಯ ಪದಾರ್ಪಣೆ ದಾಖಲೆ ಮುರಿಯುವ ಸನ್ನಾಹದಲ್ಲಿದ್ದರು. ಆದರೆ, ಐರ್ಲೆಂಡ್‌ನಲ್ಲಿನ ಆಂತರಿಕ ಅಶಾಂತಿಯಿಂದಾಗಿ ಪ್ರವಾಸ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಇದು ವೈಭವ್ ಅವರ ಐತಿಹಾಸಿಕ ಪದಾರ್ಪಣೆ ಹಾಗೂ ಶ್ರೇಯಸ್ ಅಯ್ಯರ್ ನಾಯಕತ್ವದ ಪ್ರಾರಂಭಕ್ಕೆ ತಾತ್ಕಾಲಿಕ ಬ್ರೇಕ್ ಹಾಕಬಹುದು.

ಸೂರ್ಯವಂಶಿ ಟೀಮ್ ಇಂಡಿಯಾ ಡೆಬ್ಯೂ ವಿಳಂಬ? ಎದುರಾಯ್ತು ಅಡಚಣೆ
ವೈಭವ್
ರಾಜೇಶ್ ದುಗ್ಗುಮನೆ
|

Updated on: Jun 12, 2026 | 8:34 AM

Share

ಅಂಡರ್-19 ವಿಶ್ವಕಪ್ ಹಾಗೂ ಐಪಿಎಲ್​‌ನಲ್ಲಿ ಅಬ್ಬರಿಸಿದವರು ವೈಭವ್ ಸೂರ್ಯವಂಶಿ (Vaibhav Sooryavamshi). ಕೇವಲ 15ನೇ ವಯಸ್ಸಿಗೆ ಭಾರತ ಟಿ20 ತಂಡಕ್ಕೆ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ, ಈಗ ವೈಭವ್ ಸೂರ್ಯವಂಶಿ ಅವರ ಅಂತಾರಾಷ್ಟ್ರೀಯ ಕ್ರಿಕೆಟ್ ಪದಾರ್ಪಣೆ ಕೊಂಚ ವಿಳಂಬವಾಗುವ ಸಾಧ್ಯತೆ ದಟ್ಟವಾಗಿದೆ. ಭಾರತ ತಂಡ ಜೂನ್ ಕೊನೆಯ ವಾರದಲ್ಲಿ ಐರ್ಲೆಂಡ್ ಪ್ರವಾಸ ಕೈಗೊಳ್ಳಬೇಕಿದೆ. ಆದರೆ, ಸದ್ಯ ಅಲ್ಲಿ ಉಂಟಾಗಿರುವ ಆಂತರಿಕ ಕಲಹದಿಂದ ಈ ಸರಣಿ ಮುಂದಕ್ಕೆ ಹೋಗುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

ಜೂನ್ 26 ಮತ್ತು 28 ರಂದು ಬೆಲ್‌ಫಾಸ್ಟ್‌ನಲ್ಲಿ ಭಾರತ ಮತ್ತು ಐರ್ಲೆಂಡ್ ನಡುವೆ ಎರಡು ಪಂದ್ಯಗಳ ಟಿ20 ಸರಣಿ ನಿಗದಿಯಾಗಿದೆ. ಆದರೆ, ಇತ್ತೀಚೆಗೆ ಅಲ್ಲಿ ನಡೆದ ಹಿಂಸಾತ್ಮಕ ವಲಸೆ ವಿರೋಧಿ ದಂಗೆಗಳಿಂದಾಗಿ ಸಾರ್ವಜನಿಕ ಸುರಕ್ಷತೆಗೆ ಧಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿರುವುದಾಗಿ ತಿಳಿಸಿರುವ ಐರ್ಲೆಂಡ್ ಕ್ರಿಕೆಟ್ ಮಂಡಳಿ, ಆಟಗಾರರು ಮತ್ತು ಪ್ರೇಕ್ಷಕರ ರಕ್ಷಣೆ ನಮಗೆ ಮುಖ್ಯ ಎಂದಿದೆ. ಒಂದು ವೇಳೆ ಬೆಲ್‌ಫಾಸ್ಟ್‌ನಲ್ಲಿ ಪರಿಸ್ಥಿತಿ ಹತೋಟಿಗೆ ಬಾರದಿದ್ದರೆ ಪಂದ್ಯಗಳನ್ನು ಡಬ್ಲಿನ್‌ಗೆ ಸ್ಥಳಾಂತರಿಸುವ ಆಲೋಚನೆಯೂ ಇದೆ. ಹಾಗಾದಲ್ಲಿ ಪಂದ್ಯ ನಿಗದಿತ ಸಮಯಕ್ಕೆ ನಡೆಯದೇ ವಿಳಂಬ ಆಗಬಹುದು.

ಈ ಸರಣಿ ಭಾರತೀಯ ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿತ್ತು. ವೈಭವ್ ಸೂರ್ಯವಂಶಿ ಈ ಪಂದ್ಯದ ಮೂಲಕ ಭಾರತದ ಕ್ರಿಕೆಟ್ ತಂಡ ಸೇರಿಕೊಳ್ಳಲಿದ್ದಾರೆ. ಭಾರತ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ (16 ವರ್ಷ 205 ದಿನಗಳು) ಅವರ 36 ವರ್ಷಗಳ ಹಳೆಯ ದಾಖಲೆಯನ್ನು ಮುರಿಯಲಿದ್ದಾರೆ.

ಐರ್ಲೆಂಡ್‌ನ ಈಗಿನ ಪರಿಸ್ಥಿತಿ ಈ ಐತಿಹಾಸಿಕ ಕ್ಷಣಕ್ಕೆ ಸದ್ಯಕ್ಕೆ ಬ್ರೇಕ್ ಹಾಕುವಂತೆ ಕಾಣುತ್ತಿದೆ. ಅಲ್ಲದೆ, ಶ್ರೇಯಸ್ ಅಯ್ಯರ್ ಅವರ ಟಿ20 ನಾಯಕತ್ವದ ಹೊಸ ಇನ್ನಿಂಗ್ಸ್ ಕೂಡ ಈ ಸರಣಿಯಿಂದಲೇ ಆರಂಭವಾಗಬೇಕಿದೆ. ಸದ್ಯಕ್ಕೆ ಪ್ರವಾಸ ರದ್ದಾಗಿಲ್ಲವಾದರೂ, ಮುಂಬರುವ ದಿನಗಳಲ್ಲಿ ಕ್ರಿಕೆಟ್ ಐರ್ಲೆಂಡ್ ತೆಗೆದುಕೊಳ್ಳುವ ನಿರ್ಧಾರದ ಮೇಲೆ ವೈಭವ್ ಭಾರತದ ಪ್ರವಾಸದ ಭವಿಷ್ಯ ನಿರ್ಧಾರವಾಗಲಿದೆ.

ಇದನ್ನೂ ಓದಿ: 200ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ!

ಐರ್ಲೆಂಡ್ ಸರಣಿಗೆ ಭಾರತ ಟಿ20 ತಂಡ:

ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಶ್‌ದೀಪ್ ಸಿಂಗ್, ಪ್ರಿನ್ಸ್ ಯಾದವ್, ಪ್ರಸಿದ್ ಕೃಷ್ಣ, ವೈಭವ್ ಸೂರ್ಯವಂಶಿ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
’ನನ್ನ ತಂಗಿ’; ಭಾರತಕ್ಕೆ ಬಂದಿರುವ ಜಪಾನ್ ಪ್ರಧಾನಿ ತಕೈಚಿಗೆ ಮೋದಿ ಮೆಚ್ಚುಗೆ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
ಗ್ಯಾರಂಟಿ ಪರಿಷ್ಕರಣೆ ಹೆಸರಲ್ಲಿ ಚುನಾವಣೆಗೆ ಮಾಹಿತಿ ಸಂಗ್ರಹ: ಕುಮಾರಸ್ವಾಮಿ
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್
28 ಕೋಟಿ ರೂ. ಪರಿಹಾರದ ಕ್ರೆಡಿಟ್ ವಾರ್