AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SRH vs RR: ಸಿಕ್ಸರ್​ಗಳಿಂದಲೇ ಅರ್ಧಶತಕ ಚಚ್ಚಿದ ವೈಭವ್ ಸೂರ್ಯವಂಶಿ

Vaibhav Sooryavanshi's 16-Ball Fifty: ಐಪಿಎಲ್ 2026 ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್‌ಗೆ ವೈಭವ್ ಸೂರ್ಯವಂಶಿ ಭರ್ಜರಿ ಆರಂಭ ನೀಡಿದರು. ಕೇವಲ 16 ಎಸೆತಗಳಲ್ಲಿ 8 ಸಿಕ್ಸರ್, 1 ಬೌಂಡರಿ ಸಹಿತ ಅರ್ಧಶತಕ ಸಿಡಿಸಿದ ಅವರು, ತಂಡವನ್ನು 3.2 ಓವರ್‌ಗಳಲ್ಲಿ 50 ರನ್ ಗಡಿ ದಾಟಿಸಿದರು. ವೈಭವ್ ಅವರ ಸ್ಫೋಟಕ ಬ್ಯಾಟಿಂಗ್ ಕ್ರೀಡಾಭಿಮಾನಿಗಳ ಮನಸೂರೆಗೊಂಡಿತು.

SRH vs RR: ಸಿಕ್ಸರ್​ಗಳಿಂದಲೇ ಅರ್ಧಶತಕ ಚಚ್ಚಿದ ವೈಭವ್ ಸೂರ್ಯವಂಶಿ
Vaibhav Sooryavanshi
ಪೃಥ್ವಿಶಂಕರ
|

Updated on:May 27, 2026 | 8:22 PM

Share

ಐಪಿಎಲ್ 2026 (IPL 2026) ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ (RR vs SRH) ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ ಪರ ಆರಂಭಿಕ ವೈಭವ್ ಸೂರ್ಯವಂಶಿ (Vaibhav Sooryavanshi) ಮತ್ತೊಮ್ಮೆ ತಮ್ಮ ಸಿಡಿಲಬ್ಬರದ ಬ್ಯಾಟಿಂಗ್ ಮೂಲಕ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ವೈಭವ್ ತಮ್ಮ ಅರ್ಧಶತಕದ ಇನ್ನಿಂಗ್ಸ್​ನಲ್ಲಿ 8 ಸಿಕ್ಸರ್​ಗಳು ಹಾಗೂ 1 ಬೌಂಡರಿ ಬಾರಿಸಿದರು. ಅಂದರೆ ವೈಭವ್ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳಿಂದಲೇ ತಮ್ಮ ಅರ್ಧಶತಕ ಪೂರೈಸಿದರು. ವೈಭವ್ ಅವರ ಈ ಆರ್ಭಟದಿಂದಾಗಿ ರಾಜಸ್ಥಾನ್ 3.2 ಓವರ್​ಗಳಲ್ಲಿಯೇ 50 ರನ್​ಗಳ ಗಡಿ ದಾಟಿತು.

ಪ್ಲೇಆಫ್‌ನಲ್ಲಿ ವೇಗದ ಅರ್ಧಶತಕ

ವೈಭವ್ ಸೂರ್ಯವಂಶಿ ಪ್ಲೇಆಫ್‌ನಲ್ಲಿ ಅತ್ಯಂತ ವೇಗದ ಅರ್ಧಶತಕ ಗಳಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಹೈದರಾಬಾದ್ ವಿರುದ್ಧ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ವೈಭವ್, ಈ ಮೂಲಕ 2014 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ವಿರುದ್ಧ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದ ಸುರೇಶ್ ರೈನಾ ಅವರ ದಾಖಲೆ ಮುರಿದರು.

ಹಾಗೆಯೇ ಈ ಅರ್ಧಶತಕದ ಇನ್ನಿಂಗ್ಸ್ ಮೂಲಕ ವೈಭವ್, ಈ ಐಪಿಎಲ್‌ನಲ್ಲಿ 600 ರನ್‌ಗಳ ಗಡಿ ದಾಟಿದರು. ಈ ಮೂಲಕ 200 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ 600 ರನ್ ಗಳಿಸಿದ ಮೊದಲ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದರು. ಇದರ ಜೊತೆಗೆ ಐಪಿಎಲ್ ಸೀಸನ್​ವೊಂದರಲ್ಲಿ 650 ಕ್ಕೂ ಹೆಚ್ಚು ರನ್ ಕಲೆಹಾಕಿದ ಅನ್​ಕ್ಯಾಪ್ಡ್ ಆಟಗಾರ ಎಂಬ ದಾಖಲೆಯೂ ವೈಭವ್ ಪಾಲಾಗಿದೆ.

ಆರೆಂಜ್ ಕ್ಯಾಪ್ ವೈಭವ್ ಪಾಲು

ಆರಂಭದಿಂದಲೂ ಎಂದಿನಂತೆ ಸಿಡಿಲಬ್ಬರದ ಬ್ಯಾಟಿಂಗ್‌ ಪ್ರದರ್ಶಿಸಿದ ವೈಭವ್, ಸನ್‌ರೈಸರ್ಸ್ ತಂಡದ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲ್ ಮಾಡಿದ ಮೂರನೇ ಓವರ್‌ನಲ್ಲಿ ಮೂರು ಸಿಕ್ಸರ್ ಮತ್ತು ಒಂದು ಬೌಂಡರಿ ಬಾರಿಸಿದರು. ಈ ಮೂಲಕ ಈ ಓವರ್‌ನಲ್ಲಿ 25 ರನ್ ಕಲೆಹಾಕಿದರು. ಪ್ರಸ್ತುತ ಇನ್ನಿಂಗ್ಸ್​ನಲ್ಲಿ 80 ರನ್​ಗಳ ಗಡಿ ದಾಟಿರುವ ವೈಭವ್, ಈ ಸೀಸನ್​ನಲ್ಲಿ 660 ರನ್​ಗಳ ಗಡಿ ದಾಟುವ ಮೂಲಕ ಆರೆಂಜ್ ಕ್ಯಾಪ್ ಅನ್ನು ತಮ್ಮದಾಗಿಸಿಕೊಂಡಿದ್ದಾರೆ.

IPL 2026 Eliminator SRH vs RR Live: ಶತಕ ವಂಚಿತ ವೈಭವ್

ಪವರ್​ಪ್ಲೇನಲ್ಲೇ 5 ಅರ್ಧಶತಕ

ವೈಭವ್ ಸೂರ್ಯವಂಶಿ ಐಪಿಎಲ್‌ನಲ್ಲಿ ಐದನೇ ಬಾರಿಗೆ 20 ಕ್ಕಿಂತ ಕಡಿಮೆ ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದಾರೆ. ಈ ಮೂಲಕ ನಿಕೋಲಸ್ ಪೂರನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಭಿಷೇಕ್ ಶರ್ಮಾ ಈ ಸಾಧನೆಯನ್ನು ಅತಿ ಹೆಚ್ಚು ಬಾರಿ ಅಂದರೆ 6 ಬಾರಿ ಮಾಡಿದ್ದಾರೆ. ಹಾಗೆಯೇ ವೈಭವ್ ಸೂರ್ಯವಂಶಿ ಪವರ್‌ಪ್ಲೇನಲ್ಲಿಯೇ ಐದನೇ ಬಾರಿಗೆ ತಮ್ಮ ಅರ್ಧಶತಕದ ಗಡಿ ದಾಟಿರುವುದು ಮತ್ತೊಂದು ದಾಖಲೆಯಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:02 pm, Wed, 27 May 26

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ನಡುವೆ ಆಪ್ತರ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿದ್ದರಾಮಯ್ಯ ನಿವಾಸಕ್ಕೆ ಬಂದ ಫ್ಯಾನ್ಸ್
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ
ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಸಿಡಿದೆದ್ದ ಅಹಿಂದ