
ಅಂತಾರಾಷ್ಟ್ರೀಯ ಕ್ರಿಕೆಟ್‌ನ ಒತ್ತಡ ಮತ್ತು ಸವಾಲುಗಳನ್ನು ಎದುರಿಸಲು ಅಪಾರ ಅನುಭವ ಬೇಕು. ಆದರೆ, ಕ್ರಿಕೆಟ್ ಇತಿಹಾಸದಲ್ಲಿ ಕೆಲವೇ ಕೆಲವು ಅದ್ಭುತ ಪ್ರತಿಭೆಗಳು ತಮ್ಮ ಬಾಲ್ಯದಲ್ಲೇ ದೇಶವನ್ನು ಪ್ರತಿನಿಧಿಸಿ ಜಗತ್ತನ್ನು ಆಶ್ಚರ್ಯಚಕಿತಗೊಳಿಸಿದ್ದಾರೆ. ಅಂತಹ ಕಿರಿಯ ವಯಸ್ಸಿನ ಸಾಧಕರ ಪಟ್ಟಿಗೆ ವೈಭವ್ ಸೂರ್ಯವಂಶಿ (Vaibhav Sooryavanshi) ಕೂಡ ಸೇರ್ಪಡೆಯಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲೊ ಕಣಕ್ಕಿಳಿಯುವ ಮೂಲಕ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಪಂದ್ಯವಾಡಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ಐತಿಹಾಸಿಕ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.
ವೈಭವ್ ಸೂರ್ಯವಂಶಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದರೂ ವಿಶ್ವ ದಾಖಲೆಯನ್ನು ಮುರಿಯಲು ಸಾಧ್ಯವಾಗಿಲ್ಲ.
ಏಕೆಂದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 14 ವರ್ಷಕ್ಕೆ ಪಂದ್ಯವಾಡಿದ ಆಟಗಾರರಿದ್ದಾರೆ. ಈ ಸಾಧನೆ ಮಾಡಿದ ಮೊದಲ ಆಟಗಾರನ ಹೆಸರು ಹಸನ್ ರಾಝ.
ಪುರುಷರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕಣಕ್ಕಿಳಿದ ಕಿರಿಯ ಆಟಗಾರ ಎಂಬ ರೊಮೇನಿಯಾದ ಮೇರಿಯನ್ ಗೆರಾಸಿಮ್ ಹೆಸರಿನಲ್ಲಿದೆ.
ಅಂದರೆ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಕಣಕ್ಕಿಳಿದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆ ರೊಮೇನಿಯಾದ ಮೇರಿಯನ್ ಗೆರಾಸಿಮ್ ಹೆಸರಿನಲ್ಲಿದೆ. ಈ ದಾಖಲೆಯನ್ನು ಮುರಿಯಲು ಯಾರಿಗೂ ಸಾಧ್ಯವಿಲ್ಲ.
ಇದನ್ನೂ ಓದಿ: ಇದೆಂತಾ ಅನ್ಯಾಯ… ಈ ಮೂವರ ಬದಲಿಗೆ ಆ ಮೂವರಿಗೆ ಸ್ಥಾನ..!
ಏಕೆಂದರೆ ಐಸಿಸಿ (ICC) ಈಗ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಕನಿಷ್ಠ 15 ವರ್ಷ ವಯಸ್ಸಾಗಿರಬೇಕು ಎಂಬ ನಿಯಮವನ್ನು ತಂದಿದೆ. ಹೀಗಾಗಿ, ಮೇರಿಯನ್ ಗೆರಾಸಿಮ್ ಹಾಗೂ ಹಸನ್ ರಾಝ ಹೆಸರಿನಲ್ಲಿರುವ ದಾಖಲೆಗಳು ಕ್ರಿಕೆಟ್ ಇತಿಹಾಸದಲ್ಲಿ ಶಾಶ್ವತವಾಗಿ ಉಳಿಯಲಿದೆ ಎನ್ನಬಹುದು.