AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೌರ್ಬಲ್ಯ ಬಹಿರಂಗ? ಮತ್ತೆ ವಿಫಲನಾದ ವೈಭವ್ ಸೂರ್ಯವಂಶಿ..!

Sri Lanka A vs India A: ಭಾರತ ಎ, ಶ್ರೀಲಂಕಾ ಎ ಮತ್ತು ಅಫ್ಘಾನಿಸ್ತಾನ್ ಎ ತಂಡಗಳ ನಡುವಣ ತ್ರಿಕೋನ ಸರಣಿಯ 4ನೇ ಪಂದ್ಯವು ದಂಬುಲ್ಲಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಶ್ರೀಲಂಕಾ ಎ ಹಾಗೂ ಭಾರತ ಎ ತಂಡಗಳು ಮುಖಾಮುಖಿಯಾಗಿದ್ದು, ಟಾಸ್ ಗೆದ್ದಿರುವ ಲಂಕಾ ಪಡೆ ಬೌಲಿಂಗ್ ಆಯ್ದುಕೊಂಡಿದ್ದಾರೆ.

ತಾಂತ್ರಿಕ ದೌರ್ಬಲ್ಯ ಬಹಿರಂಗ? ಮತ್ತೆ ವಿಫಲನಾದ ವೈಭವ್ ಸೂರ್ಯವಂಶಿ..!
Vaibhav Sooryavanshi Image Credit source: News9
ಝಾಹಿರ್ ಯೂಸುಫ್
|

Updated on: Jun 15, 2026 | 11:14 AM

Share

ಶ್ರೀಲಂಕಾದ ದಂಬುಲ್ಲಾದಲ್ಲಿ ನಡೆಯುತ್ತಿರುವ ತ್ರಿಕೋನ ಎ ಸರಣಿಯ 4ನೇ ಪಂದ್ಯದಲ್ಲೂ ಟೀಮ್ ಇಂಡಿಯಾದ ಯುವ ದಾಂಡಿಗ ವೈಭವ್ ಸೂರ್ಯವಂಶಿ (Vaibhav Sooryavanshi) ನಿರಾಶೆ ಮೂಡಿಸಿದ್ದಾರೆ. ಭಾರತ ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ಎ ತಂಡದ ನಾಯಕ ಸಹನ್ ಅರಾಚ್ಚಿ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಆರಂಭಿಕ ಆಘಾತಕ್ಕೆ ಒಳಗಾಗಿದೆ.

ವೈಭವ್ ಸೂರ್ಯವಂಶಿ ಔಟ್!

ಈ ಪಂದ್ಯದಲ್ಲೂ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಸ್ಫೋಟಕ ಇನಿಂಗ್ಸ್ ಆಡಲು ಮುಂದಾಗಿದ್ದರು. ಆದರೆ ಬಿರುಸಿನಾಟ ಕೇವಲ 14 ಎಸೆತಗಳಿಗೆ ಸೀಮಿತವಾಯಿತು. ಮೊದಲ ಓವರ್​ನಲ್ಲಿ ಎಚ್ಚರಿಕೆಯ ಬ್ಯಾಟಿಂಗ್​ಗೆ ಒತ್ತು ನೀಡಿದ ವೈಭವ್ ದ್ವಿತೀಯ ಓವರ್​ನಲ್ಲಿ ಫೋರ್ ಹಾಗೂ ಸಿಕ್ಸ್​ಗಳನ್ನು ಬಾರಿಸಿದರು.

ಅಲ್ಲದೆ ಮೂರನೇ ಹಾಗೂ ನಾಲ್ಕನೇ ಓವರ್​ಗಳಲ್ಲೂ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು. ಆದರೆ ಶ್ರೀಲಂಕಾ ನಾಯಕ ಸಹನ್ ಅರಾಚ್ಚಿ ಎಸೆದ ಎಸೆತವನ್ನು ಸರಿಯಾಗಿ ಗುರುತಿಸುವಲ್ಲಿ ಎಡವಿ ಕ್ಯಾಚ್ ನೀಡಿ ಹೊರ ನಡೆದರು.  ಇದರೊಂದಿಗೆ 14 ಎಸೆತಗಳಲ್ಲಿ 1 ಸಿಕ್ಸ್,​ 3 ಫೋರ್​ನೊಂದಿಗೆ 21 ರನ್​ ಬಾರಿಸಿದ ವೈಭವ್ ಸೂರ್ಯವಂಶಿ ಇನಿಂಗ್ಸ್ ಅಂತ್ಯಗೊಂಡಿತು.

ಸರಣಿಯಲ್ಲಿ ವೈಫಲ್ಯ:

ಈ ಬಾರಿಯ ಐಪಿಎಲ್​ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿ 776 ರನ್ ಕಲೆಹಾಕಿದ್ದ ವೈಭವ್ ಸೂರ್ಯವಂಶಿ ಅದೇ ಫಾರ್ಮ್​ ಅನ್ನು ಪ್ರಸ್ತುತ ಸರಣಿಯಲ್ಲಿ ಪ್ರದರ್ಶಿಸುವಲ್ಲಿ ವಿಫಲರಾಗಿದ್ದಾರೆ. ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು…

  • ಮೊದಲ ಪಂದ್ಯ (vs ಶ್ರೀಲಂಕಾ ಎ): 12 ಎಸೆತಗಳಲ್ಲಿ 3 ಬೌಂಡರಿ ಒಳಗೊಂಡ 14 ರನ್ ಗಳಿಸಿ ಮೊಹಮ್ಮದ್ ಶಿರಾಜ್ ಬೌಲಿಂಗ್‌ನಲ್ಲಿ ಮಿಡ್-ಆಫ್‌ನಲ್ಲಿ ಕ್ಯಾಚ್ ನೀಡಿ ಔಟಾಗಿದ್ದರು.
  • ಎರಡನೇ ಪಂದ್ಯ (vs ಅಫ್ಘಾನಿಸ್ತಾನ್ ಎ): ಅತ್ಯಂತ ಆಕ್ರಮಣಕಾರಿಯಾಗಿ ಆಡಿ 22 ಎಸೆತಗಳಲ್ಲಿ 9 ಬೌಂಡರಿಗಳೊಂದಿಗೆ 44 ರನ್ ಬಾರಿಸಿದ್ದರು. ಆದರೆ ಹಾಫ್-ಸೆಂಚುರಿ ಸನಿಹದಲ್ಲಿ ಶಾರ್ಟ್ ಬಾಲ್‌ಗೆ ಅಪ್ಪರ್ ಕಟ್ ಮಾಡಲು ಹೋಗಿ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು.
  •  ಮೂರನೇ ಪಂದ್ಯ (vs ಶ್ರೀಲಂಕಾ ಎ): ಇಂದಿನ ಪಂದ್ಯದಲ್ಲಿ 21 ರನ್ ಗಳಿಸಿ ಆಡುತ್ತಿದ್ದಾಗ, ಸ್ಪಿನ್ನರ್ ಎದುರು ಶಾಟ್ ಟೈಮಿಂಗ್ ಮಿಸ್ ಮಾಡಿಕೊಂಡು ಪಾಯಿಂಟ್‌ನಲ್ಲಿ ಕ್ಯಾಚ್ ನೀಡಿದ್ದಾರೆ.

ತಾಂತ್ರಿಕ ದೌರ್ಬಲ್ಯ ಬಹಿರಂಗ?

ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಶೈಲಿ ಅತ್ಯಂತ ಆಕ್ರಮಣಕಾರಿಯಾಗಿದ್ದು, ಪವರ್‌ಪ್ಲೇ ಓವರ್‌ಗಳನ್ನು ಸಮರ್ಥವಾಗಿ ಬಳಸಿಕೊಳ್ಳುತ್ತಾರೆ. ಆದರೆ, ಶಾರ್ಟ್ ಪಿಚ್ ಎಸೆತಗಳು ಮತ್ತು ಆಫ್-ಸ್ಟಂಪ್ ಹೊರಗಿನ ಚೆಂಡುಗಳನ್ನು ಆಡುವಾಗ ಅವರು ಸತತವಾಗಿ ವಿಕೆಟ್ ಕಳೆದುಕೊಳ್ಳುತ್ತಿದ್ದಾರೆ. ಇವರ ಈ ದೌರ್ಬಲ್ಯವನ್ನು ಎದುರಾಳಿ ತಂಡಗಳು ಅರಿತುಕೊಂಡಂತೆ ಕಾಣುತ್ತಿದ್ದು, ಶಾರ್ಟ್ ಬಾಲ್ ತಂತ್ರದ ಮೂಲಕ ಅವರನ್ನು ಕಟ್ಟಿಹಾಕುತ್ತಿದ್ದಾರೆ. ಹೀಗಾಗಿಯೇ ಕಳೆದ ಮೂರು ಪಂದ್ಯಗಳಲ್ಲಿ ವೈಭವ್ ಬೇಗನೆ ಔಟಾಗಿದ್ದಾರೆ ಎಂಬುದು ಕ್ರಿಕೆಟ್ ವಿಶ್ಲೇಷಕರ ಅಭಿಪ್ರಾಯ.

ಟೀಮ್ ಇಂಡಿಯಾ ಸ್ಕೋರ್:

ಶ್ರೀಲಂಕಾ ಎ ವಿರುದ್ಧ ಬ್ಯಾಟಿಂಗ್ ಮುಂದುವರೆಸಿರುವ ಟೀಮ್ ಇಂಡಿಯಾ 15 ಓವರ್​ಗಳ ಮುಕ್ತಾಯದ ವೇಳೆಗೆ 85 ರನ್ ಕಲೆಹಾಕಿದೆ. ಈಗಾಗಲೇ ವೈಭವ್ ಸೂರ್ಯವಂಶಿ (21) ಹಾಗೂ ಪ್ರಭ್​ಸಿಮ್ರಾನ್ ಸಿಂಗ್ (11) ಔಟಾಗಿದ್ದು, ರುತುರಾಜ್ ಗಾಯಕ್ವಾಡ್ ಹಾಗೂ ತಿಲಕ್ ವರ್ಮಾ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಶ್ರೀಲಂಕಾ ಎ ಪ್ಲೇಯಿಂಗ್ 11: ನಿರೋಷನ್ ಡಿಕ್ವೆಲ್ಲಾ (ವಿಕೆಟ್ ಕೀಪರ್) , ಅವಿಷ್ಕಾ ಫೆರ್ನಾಂಡೊ , ವಿಷೇನ್ ಹಾಲಂಬಗೆ , ಸದೀರ ಸಮರವಿಕ್ರಮ , ಅಹಾನ್ ವಿಕ್ರಮಸಿಂಘೆ , ಸಹನ್ ಅರಚ್ಚಿಗೆ (ನಾಯಕ) , ವನುಜಾ ಸಹನ್ , ವಿಜಯಕಾಂತ್ ವಿಯಸ್ಕಾಂತ್ , ಕುಗಥಾಸ್ ಮಥುಲನ್ , ಮೊಹಮ್ಮದ್ ಶಿರಾಜ್ , ಚಾಮಿಕಾ ಗುಣಶೇಖರ.

ಇದನ್ನೂ ಓದಿ: ಮೊದಲ ಪಂದ್ಯದಲ್ಲೇ 7 ಗೋಲು ಬಾರಿಸಿ ವಿಶ್ವ ದಾಖಲೆ ಬರೆದ ಜರ್ಮನಿ!

ಭಾರತ ಎ ಪ್ಲೇಯಿಂಗ್ 11: ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್ ), ವೈಭವ್ ಸೂರ್ಯವಂಶಿ , ರುತುರಾಜ್ ಗಾಯಕ್ವಾಡ್ , ತಿಲಕ್ ವರ್ಮಾ (ನಾಯಕ) , ಆಯುಷ್ ಬದೋನಿ , ಸೂರ್ಯಾಂಶ್ ಶೆಡ್ಗೆ , ನಿಶಾಂತ್ ಸಿಂಧು , ಅನುಕೂಲ್ ರಾಯ್ , ಅರ್ಷದ್ ಖಾನ್ , ವಿಪ್ರಾಜ್ ನಿಗಮ್ , ಯಶ್ ಠಾಕೂರ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ರಾತ್ರಿಯಿಡೀ ಮಳೆ ಅಬ್ಬರ: ಮಲ್ಲೇಶ್ವರಂನಲ್ಲಿ ಮರಬಿದ್ದು 2 ಕಾರುಗಳು ಜಖಂ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ಇಂದು ಸಂಕಷ್ಟ ಚತುರ್ಥಿ; ಗಜಗೌರಿ ವ್ರತ ಮಾಡುವವರಿಗೆ ಮಹತ್ವದ ದಿನ
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ವಿದ್ಯಾರ್ಥಿಗಳಿಗೆ ಟಂಟಂಗಳೇ ಆಸರೆ: ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೇ ಕುತ್ತು
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಸ್ಪೀಕರ್​ನಲ್ಲಿ ಭಜನೆ ಹಾಕಿದ್ದಕ್ಕೆ ಪಕ್ಕದ ಮನೆಯವರಿಂದ ಅರ್ಚಕನ ಮೇಲೆ ಹಲ್ಲೆ
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಈ ಬಾರಿ ಮೈಸೂರು ದಸರಾದಲ್ಲಿ ಏರ್ ಶೋ, ಸೇನಾ ಪರೇಡ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ಬಂಗಾಳದ ಪ್ರವಾಸದ ವೇಳೆ ಝಲ್ಮುರಿ ಸವಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ನೇಪಾಳದಲ್ಲಿ ಭಾರೀ ಹಿಮಪಾತ; 4 ಮೃತದೇಹಗಳ ಪತ್ತೆ, 12 ಜನ ನಾಪತ್ತೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ದಸರಾ ರಜೆ: ಕ್ರಿಶ್ಚಿಯನ್ ಶಾಲೆಗಳಿಗೆ ಪ್ರಮೋದ್ ಮುತಾಲಿಕ್ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಕಾಂಗ್ರೆಸ್ ಮುಖಂಡನ ಮನೆ ಮುಂದೆ ವಾಮಾಚಾರ: ಲಗ್ನ ಪತ್ರಿಕೆ, ಮೂಳೆ ಬಳಕೆ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್​​ನಲ್ಲಿ ಗಾಂಜಾ ಘಮಲು!