AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

15 ಸಿಕ್ಸರ್, 28 ಎಸೆತಗಳಲ್ಲೇ ಶತಕ: ವೈಭವ್ ಅಬ್ಬರಕ್ಕೆ ಕ್ರಿಕೆಟ್ ಜಗತ್ತು ಬೆರಗು

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ರಲ್ಲಿ ವೈಭವ್ ಸೂರ್ಯವಂಶಿ 28 ಎಸೆತಗಳಲ್ಲಿ ವೇಗದ ಶತಕ ಸಿಡಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಯುಎಇ ವಿರುದ್ಧದ ಪಂದ್ಯದಲ್ಲಿ 15 ಸಿಕ್ಸರ್‌ಗಳೊಂದಿಗೆ ಅಬ್ಬರಿಸಿದ ಇವರು ಎಬಿ ಡಿವಿಲಿಯರ್ಸ್ ಅವರ ದಾಖಲೆಯನ್ನು ಮುರಿದರು. ಈ ಮೂಲಕ ಭಾರತ ಎ ತಂಡಕ್ಕೆ ವಿಜಯ ತಂದಿತ್ತ ವೈಭವ್, ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.

15 ಸಿಕ್ಸರ್, 28 ಎಸೆತಗಳಲ್ಲೇ ಶತಕ: ವೈಭವ್ ಅಬ್ಬರಕ್ಕೆ ಕ್ರಿಕೆಟ್ ಜಗತ್ತು ಬೆರಗು
Vaibhav Sooryavanshi
ಪೃಥ್ವಿಶಂಕರ
|

Updated on:Nov 24, 2026 | 4:46 PM

Share

ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ 2026 ಟೂರ್ನಿಯಲ್ಲಿ ಇಂದು ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಿದ ಭಾರತ ಎ ತಂಡ, ಯುಎಇ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಯುಎಇ 250 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ಎ ಪರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ ವೈಭವ್ ಸೂರ್ಯವಂಶಿ ಕೇವಲ 16 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಆ ಬಳಿಕವೂ ತಮ್ಮ ಹೊಡಿಬಡಿ ಆಟ ಮುಂದುವರೆಸಿದ ವೈಭವ್ 28 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್​ನಲ್ಲಿ ಅತಿ ವೇಗದ ಶತಕ ಬಾರಿಸಿದ ಆಟಗಾರನೆಂಬ ದಾಖಲೆಯನ್ನೂ ವೈಭವ್ ನಿರ್ಮಿಸಿದರು. ಈ ಮೊದಲು ಈ ದಾಖಲೆ ಎಬಿ ಡಿವಿಲಿಯರ್ಸ್​ ಹೆಸರಿನಲ್ಲಿತ್ತು. ಅವರು ವೆಸ್ಟ್ ಇಂಡೀಸ್ ವಿರುದ್ಧ 31 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ ವೈಭವ್ 15 ಸಿಕ್ಸರ್​ಗಳ ಸಹಿತ ತಮ್ಮ ಚೊಚ್ಚಲ ಏಕದಿನ ಶತಕ ಸಿಡಿಸಿ ಮಿಂಚಿದ್ದಾರೆ.

Published On - 4:45 pm, Tue, 24 November 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಕೆಲಸಕ್ಕೆ ಬಾರದವರೆಂದು ಕುಮಾರಸ್ವಾಮಿಯ ನಾಮಫಲಕ ತೆಗೆಸಿದ ಕಾಂಗ್ರೆಸ್ ಶಾಸಕ
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್‌ನಿಂದಲೇ ಆಶಾ ಕಾರ್ಯಕರ್ತೆಯರಿಗೆ ವಿಡಿಯೋ ಕಾಲ್ ಮಾಡಿದ ಸಿಎಂ!
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಜಪಾನ್ ನಗರ ಸಂಚಾರ ಮಾದರಿಗಳತ್ತ ಕರ್ನಾಟಕದ ಚಿತ್ತ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಅಂಬರೀಷ್ 8ನೇ ವರ್ಷದ ಪುಣ್ಯಸ್ಮರಣೆ; ಅಂಬಿ ಸಮಾಧಿಗೆ ವಿಶೇಷ ಪೂಜೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಬಿಜೆಪಿ ಗೆದ್ದರೆ 5 ಗ್ಯಾರಂಟಿಗಳು ವಾಪಸ್‌: ಸಚಿವ ಶಿವರಾಜ್ ತಂಗಡಗಿ ಎಚ್ಚರಿಕೆ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸತ್ತ ಮರಿಯನ್ನೂ ಬಿಟ್ಟುಕೊಡದ ತಾಯಿ ಕೋತಿ: ಮುಂಡರಗಿಯಲ್ಲಿ ಮನಕಲಕುವ ದೃಶ್ಯ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸಹೋದರನ ಮದುವೆಗೆ ಹಾಜರಾಗಲು ಮಧ್ಯಂತರ ಜಾಮೀನು ಕೋರಿ ಪವಿತ್ರಾ ಗೌಡ ಅರ್ಜಿ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಸರ್ಕಾರಿ ಕಾರು, ಗನ್‌ಮ್ಯಾನ್ ದುರ್ಬಳಕೆ: ಗದಗ ಡಿಸಿ ವಿರುದ್ಧ ಮತ್ತೊಂದು ಆರೋಪ
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಅಭಿವೃದ್ಧಿ ಬಗ್ಗೆ ಯುವಕನ ಪ್ರಶ್ನೆಗೆ ಶಾಸಕ ಚಂದ್ರಪ್ಪ ಗರಂ: ವಿಡಿಯೋ ವೈರಲ್
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ
ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ