AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈದಾನದಲ್ಲಿ ಕಿರಿಕ್… ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!

Sri Lanka A vs India A: ಶ್ರೀಲಂಕಾ ಎ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 49.2 ಓವರ್​ಗಳಲ್ಲಿ 265 ರನ್​ಗಳಿಸಿ ಆಲೌಟ್ ಆಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡ 265 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಇದರೊಂದಿಗೆ ಪಂದ್ಯವು ಟೈನಲ್ಲಿ ಅಂತ್ಯಗೊಂಡಿತ್ತು.

ಮೈದಾನದಲ್ಲಿ ಕಿರಿಕ್... ಆಟಗಾರನ ಮೇಲೆ ಕೈ ಮಾಡಿದ ವೈಭವ್ ಸೂರ್ಯವಂಶಿ..!
Vaibhav SooryavanshiImage Credit source: Sonyliv.com
ಝಾಹಿರ್ ಯೂಸುಫ್
|

Updated on: Jun 16, 2026 | 7:53 AM

Share

ಶ್ರೀಲಂಕಾದ ದಂಬುಲಾದಲ್ಲಿ ನಡೆದ ಟ್ರೈ-ನೇಷನ್ ‘ಎ’ ಸರಣಿಯ 4ನೇ ಪಂದ್ಯವು ಹೈ-ಡ್ರಾಮಾಗೆ ಸಾಕ್ಷಿಯಾಗಿದೆ. ಭಾರತ ಎ ಮತ್ತು ಶ್ರೀಲಂಕಾ ಎ ನಡುವಣ ಏಕದಿನ ಪಂದವು ಮೊದಲಿಗೆ ಟೈನಲ್ಲಿ ಅಂತ್ಯಗೊಂಡಿತು. ಆ ಬಳಿಕ ನಡೆದ ಸೂಪರ್ ಓವರ್​ನಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವಲ್ಲಿ ಶ್ರೀಲಂಕಾ ಯಶಸ್ವಿಯಾಗಿದೆ. ಈ ಸೋಲಿನ ಬೆನ್ನಲ್ಲೇ ಆಟಗಾರರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ.

ಈ ಮ್ಯಾಚ್​ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ‘ಎ’ ತಂಡ ಸೂರ್ಯಂಶ್ ಶೆಡ್ಗೆ (72) ಅವರ ಅರ್ಧಶತಕದ ನೆರವೇರಿಕೆಯಿಂದ 265 ರನ್ ಗಳಿಸಿತ್ತು. ಶ್ರೀಲಂಕಾ ತಂಡವೂ ಸರಿಯಾಗಿ 265 ರನ್ ಗಳಿಸಿದ್ದರಿಂದ ಪಂದ್ಯ ಟೈ ಆಗಿ, ಸೂಪರ್ ಓವರ್ ಆಡಲಾಯಿತು.

  • ಸೂಪರ್ ಓವರ್‌ನಲ್ಲಿ ಶ್ರೀಲಂಕಾ 16 ರನ್ ಬಾರಿಸಿ ಭಾರತಕ್ಕೆ 17 ರನ್ ಗುರಿ ನೀಡಿತು.
  • 17 ರನ್​ಗಳ ಗುರಿ ಪಡೆದ ಟೀಮ್ ಇಂಡಿಯಾ ಪರ ವೈಭವ್ ಸೂರ್ಯವಂಶಿ ಹಾಗೂ ಸೂರ್ಯಂಶ್ ಶೆಡ್ಗೆ ಕಣಕ್ಕಿಳಿದಿದ್ದರು.

ಸೂಪರ್ ಓವರ್​ನ ಮೊದಲ 4 ಎಸೆತಗಳಲ್ಲಿ ಟೀಮ್ ಇಂಡಿಯಾ ಕಲೆಹಾಕಿದ್ದು 5 ರನ್​ಗಳು ಮಾತ್ರ. ಅದರಂತೆ ಕೊನೆಯ 2 ಎಸೆತಗಳಲ್ಲಿ ಭಾರತ ತಂಡಕ್ಕೆ 12 ರನ್​ಗಳು ಬೇಕಿದ್ದವು. 5ನೇ ಎಸೆತದಲ್ಲಿ ವೈಭವ್ ಸೂರ್ಯವಂಶಿ ಫೋರ್ ಬಾರಿಸಿದರು.

ಆದರೆ  ಶ್ರೀಲಂಕಾದ 19 ವರ್ಷದ ಮಿಸ್ಟರಿ ಸ್ಲಿಂಗರ್  ಕುಗಥಾಸ್ ಮಥುಲನ್ ಎಸೆದ ಕೊನೆಯ ಎಸೆತವನ್ನು ಕನೆಕ್ಟ್ ಮಾಡಲು ವೈಭವ್ ವಿಫಲರಾದರು. ಈ ಮೂಲಕ ಟೀಮ್ ಇಂಡಿಯಾ  7 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಕೆರಳಿದ ವೈಭವ್ ಸೂರ್ಯವಂಶಿ!

ಸೂಪರ್ ಓವರ್​ನಲ್ಲಿ 7 ರನ್​ಗಳಿಂದ ಗೆಲ್ಲುತ್ತಿದ್ದಂತೆ​ ಶ್ರೀಲಂಕಾ ಆಟಗಾರರು ಅತಿಯಾದ ಸಂಭ್ರಮಾಚರಣೆಯಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ಶ್ರೀಲಂಕಾದ ಆಟಗಾರ ವಿಶೇನ್ ಹಾಲಂಬಾಗೆ, ನಿರಾಸೆಯಿಂದ ಪೆವಿಲಿಯನ್‌ಗೆ ಮರಳುತ್ತಿದ್ದ ವೈಭವ್ ಸೂರ್ಯವಂಶಿಯವರನ್ನು ನೋಡಿ ಅದೇನೋ ಹೇಳಿದ್ದಾರೆ.

ಈ ಮಾತಿನಿಂದ ಕೆರಳಿದ 15 ವರ್ಷದ ವೈಭವ್ ಸೂರ್ಯವಂಶಿ, ನೇರವಾಗಿ ಹಾಲಂಬಾಗೆ ಅವರತ್ತ ಧಾವಿಸಿ ಮಾತಿನ ಚಕಮಕಿ ನಡೆಸಿದರು. ಈ ವಾಗ್ವಾದದ ನಡುವೆ ವೈಭವ್, ಲಂಕಾ ಆಟಗಾರನ ಎದೆಗೆ ಜೋರಾಗಿ ಕೈಯಿಂದ ತಳ್ಳಿದ್ದಾರೆ.

ಆಟಗಾರರ ನಡುವಣ ಈ ಜಗಳದಿಂದಾಗಿ ಮೈದಾನದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ತಕ್ಷಣವೇ ಶ್ರೀಲಂಕಾದ ಹಿರಿಯ ವಿಕೆಟ್‌ಕೀಪರ್ ನಿರೋಷನ್ ಡಿಕ್ವೆಲ್ಲಾ ಮತ್ತು ಕೆಲ ಆಟಗಾರರು ಮಧ್ಯಪ್ರವೇಶಿಸಿ ಜಗಳವನ್ನು ತಡೆದರು. ಇದೀಗ ಈ ವಿಡಿಯೋ ವೈರಲ್ ಆಗಿದ್ದು, ವೈಭವ್ ಸೂರ್ಯವಂಶಿ ನಡೆಗೆ ಪರ-ವಿರೋಧ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದೆ.

ಸದ್ಯ ಶ್ರೀಲಂಕಾ ಎ ವಿರುದ್ಧ ಸೋತಿರುವ ಭಾರ ಎ ತಂಡವು ತನ್ನ ಮುಂದಿನ ಪಂದ್ಯವನ್ನು ಅಫ್ಘಾನಿಸ್ತಾನ್ ಎ ವಿರುದ್ಧ ಆಡಲಿದೆ. ಈ ಮ್ಯಾಚ್​ನಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ತ್ರಿಕೋನ ಸರಣಿಯಲ್ಲಿ ಫೈನಲ್​ ಆಡಬಹುದು.

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ