AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪರ ಮೊದಲ ಪಂದ್ಯದಲ್ಲೇ ನಿರಾಸೆ ಮೂಡಿಸಿದ ವೈಭವ್!

Vaibhav Sooryavanshi: ವೈಭವ್ ಸೂರ್ಯವಂಶಿ ಭಾರತ ಎ ಪರ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಇಷ್ಟು ದಿನ ಅಂಡರ್-19 ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಳ್ಳುತ್ತಿದ್ದ ಯುವ ದಾಂಡಿಗ ಇದೀಗ ಭಾರತ ಎ ಪರ ಚೊಚ್ಚಲ ಪಂದ್ಯವಾಡಿದ್ದಾರೆ. ಆದರೆ ತನ್ನ ಮೊದಲ ಏಕದಿನ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ.

ಟೀಮ್ ಇಂಡಿಯಾ ಪರ ಮೊದಲ ಪಂದ್ಯದಲ್ಲೇ ನಿರಾಸೆ ಮೂಡಿಸಿದ ವೈಭವ್!
Vaibhav Sooryavanshi Image Credit source: ICC
ಝಾಹಿರ್ ಯೂಸುಫ್
|

Updated on: Jun 09, 2026 | 12:35 PM

Share

ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ, 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಭಾರತ ಎ ತಂಡದ ಪಾದಾರ್ಪಣೆ ಮಾಡಿದ್ದಾರೆ. ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಶ್ರೀಲಂಕಾ ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ತಿಲಕ್ ವರ್ಮಾ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಕೇವಲ 12 ಎಸೆತಗಳಲ್ಲಿ ಇನಿಂಗ್ಸ್ ಅಂತ್ಯಗೊಳಿಸಿದರು. ಆರಂಭದಲ್ಲೇ ಬಿರುಸಿನ ಆಟಕ್ಕೆ ಮುಂದಾದ ವೈಭವ್ 3 ಫೋರ್​ಗಳನ್ನು ಬಾರಿಸಿದ್ದರು.

ಆದರೆ, ಲಂಕಾ ವೇಗಿ ಮೊಹಮ್ಮದ್ ಶಿರಾಜ್ ಎಸೆದ ನಾಲ್ಕನೇ ಓವರ್‌ನ ಫುಲ್-ಲೆಂತ್ ಎಸೆತವನ್ನು ಲಾಂಗ್-ಆಫ್‌ ಬೌಂಡರಿ ದಾಟಿಸಲು ಯತ್ನಿಸಿದರು. ದುರದೃಷ್ಟವಶಾತ್, ಚೆಂಡು ಸರಿಯಾಗಿ ಕನೆಕ್ಟ್ ಆಗದೆ ಮಿಡ್-ಆಫ್‌ನಲ್ಲಿದ್ದ ಶ್ರೀಲಂಕಾ ನಾಯಕ ಸಹನ್ ಅರಾಚಿಂಗೆ ಹಿಡಿದ ಅದ್ಭುತ ಡೈವಿಂಗ್ ಕ್ಯಾಚ್‌ಗೆ ಬಲಿಯಾದರು. ಇದರೊಂದಿಗೆ ವೈಭವ್ ಸೂರ್ಯವಂಶಿಯ ಮೊದಲ ಇನಿಂಗ್ಸ್ 14 ರನ್​ಗಳೊಂದಿಗೆ ಕೊನೆಗೊಂಡಿತು.

ಐಪಿಎಲ್​​ನಲ್ಲಿ ಸಿಡಿಲಬ್ಬರ:

ವೈಭವ್ ಸೂರ್ಯವಂಶಿ ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅಬ್ಬರಿಸಿದ್ದರು. 16 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಯುವ ದಾಂಡಿಗ  776 ರನ್ ಗಳಿಸಿ ಆರೆಂಜ್ ಕ್ಯಾಪ್ ಗೆದ್ದಿದ್ದರು.

ಈ ಭರ್ಜರಿ ಪ್ರದರ್ಶನದ ಫಲವಾಗಿ ವೈಭವ್ ಸೂರ್ಯವಂಶಿಯನ್ನು ಭಾರತ ಟಿ20 ತಂಡ ಹಾಗೂ ಭಾರತ ಎ ಏಕದಿನ ತಂಡಗಳಿಗೆ ಆಯ್ಕೆ ಮಾಡಲಾಗಿತ್ತು. ಅದರಂತೆ ಇದೀಗ ಶ್ರೀಲಂಕಾ ಎ, ಅಫ್ಘಾನಿಸ್ತಾನ್ ಎ ಹಾಗೂ ಭಾರತ ಎ ನಡುವಣ ತ್ರಿಕೋನ ಏಕದಿನ ಸರಣಿಯಲ್ಲಿ ವೈಭವ್ ಸೂರ್ಯವಂಶಿ ಕಣಕ್ಕಿಳಿದಿದ್ದಾರೆ.

ಶ್ರೀಲಂಕಾ ಎ vs ಭಾರತ ಎ:

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡುತ್ತಿರುವ ಭಾರತ ಎ ತಂಡ ನಿರೀಕ್ಷಿತ ಆರಂಭ ಪಡೆದಿಲ್ಲ. ಆರಂಭಿಕ ದಾಂಡಿಗ ವೈಭವ್ ಸೂರ್ಯವಂಶಿ 12 ರನ್​ಗಳಿಸಿ ಔಟಾದರೆ, ಪ್ರಭ್​ಸಿಮ್ರಾನ್ ಸಿಂಗ್ 2 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಪ್ರಿಯಾಂಶ್ ಆರ್ಯಾ 32 ರನ್​ಗಳ ಕೊಡುಗೆ ನೀಡಿದರು. ಆ ಬಳಿಕ ಬಂದ ರುತುರಾಜ್ ಗಾಯಕ್ವಾಡ್ ಆಕರ್ಷಕ ಅರ್ಧಶತಕ ಬಾರಿಸಿದ್ದಾರೆ.

ಮತ್ತೊಂದೆಡೆ ರುತುರಾಜ್ ಜೊತೆ ತಿಲಕ್ ವರ್ಮಾ ಎಚ್ಚರಿಕೆಯ ಬ್ಯಾಟಿಂಗ್​ನೊಂದಿಗೆ ಇನಿಂಗ್ಸ್ ಕಟ್ಟುತ್ತಿದ್ದಾರೆ. ಅದರಂತೆ 34 ಓವರ್​ಗಳ ಮುಕ್ತಾಯದ ವೇಳೆಗೆ ಭಾರತ ಎ ತಂಡ 3 ವಿಕೆಟ್ ಕಳೆದುಕೊಂಡು 160 ರನ್ ಕಲೆಹಾಕಿದೆ.

ಭಾರತ ‘ಎ’ ಪ್ಲೇಯಿಂಗ್ XI: ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಪ್ರಿಯಾಂಶ್ ಆರ್ಯ, ವೈಭವ್ ಸೂರ್ಯವಂಶಿ, ತಿಲಕ್ ವರ್ಮಾ (ನಾಯಕ), ರುತುರಾಜ್ ಗಾಯಕ್ವಾಡ್, ಆಯುಷ್ ಬದೋನಿ, ಅನ್ಕುಲ್ ರಾಯ್, ಸೂರ್ಯಂಶ್ ಶೆಡ್ಗೆ, ಅನ್ಶುಲ್ ಕಂಬೋಜ್, ಅರ್ಷಾದ್ ಖಾನ್, ವಿಪ್ರಾಜ್ ನಿಗಮ್.

ಇದನ್ನೂ ಓದಿ: ಅನ್​ಫಿಟ್​… ವಿರಾಟ್ ಕೊಹ್ಲಿ ಮತ್ತೆ ಕಣಕ್ಕಿಳಿಯುವುದು ಯಾವಾಗ?

ಶ್ರೀಲಂಕಾ ‘ಎ’ ಪ್ಲೇಯಿಂಗ್ XI: ನಿರೋಷನ್ ಡಿಕ್ವೆಲ್ಲಾ (ವಿಕೆಟ್ ಕೀಪರ್), ಅವಿಷ್ಕ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಸದೀರ ಸಮರವಿಕ್ರಮ, ಸಹನ್ ಅರಾಚಿಂಗೆ (ನಾಯಕ), ಚಾಮಿಕ ಕರುಣಾರತ್ನೆ, ರವಿಂದು ಫೆರ್ನಾಂಡೋ, ವನುಜಾ ಸಹನ್, ವಿಜಯಕಾಂತ್ ವಿಯಾಸ್ಕಾಂತ್, ಮೊಹಮ್ಮದ್ ಶಿರಾಜ್, ಗರುಕ ಸಂಕೇತ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More