AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವ ಕ್ರಿಕೆಟ್​ನಲ್ಲಿ ಈಗ ವೈಭವ್​ದೇ ಮಾತು; ಟೆಸ್ಟ್​ಗೆ ಆಯ್ಕೆ ಮಾಡಿ ಎಂದ ದಿಗ್ಗಜ ಕ್ರಿಕೆಟಿಗರು

Vaibhav Sooryavanshi: ವೈಭವ್ ಸೂರ್ಯವಂಶಿ ಪ್ರತಿಭೆಗೆ ನಾಸರ್ ಹುಸೇನ್, ಸೈಮನ್ ಡೌಲ್ ಸೇರಿದಂತೆ ಹಲವು ಮಾಜಿ ಕ್ರಿಕೆಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಯಾನ್ ವಾರ್ಡ್, ವೈಭವ್‌ಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ನೀಡುವಂತೆ ಆಗ್ರಹಿಸಿದ್ದಾರೆ. ಸೈಮನ್ ಡೌಲ್ ಅವರ ಆಟವನ್ನು ಸಚಿನ್‌ಗೆ ಹೋಲಿಸಿದ್ದಾರೆ. ಈ ಎಲ್ಲ ಬೆಂಬಲದ ನಡುವೆಯೂ, ವೈಭವ್ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಇನ್ನೂ ಕಾಯಬೇಕಾಗಬಹುದು.

ವಿಶ್ವ ಕ್ರಿಕೆಟ್​ನಲ್ಲಿ ಈಗ ವೈಭವ್​ದೇ ಮಾತು; ಟೆಸ್ಟ್​ಗೆ ಆಯ್ಕೆ ಮಾಡಿ ಎಂದ ದಿಗ್ಗಜ ಕ್ರಿಕೆಟಿಗರು
Vaibhav Sooryavanshi
ಪೃಥ್ವಿಶಂಕರ
|

Updated on:Jun 05, 2026 | 6:16 PM

Share

ಕೇವಲ 15ನೇ ವರ್ಷಕ್ಕೆ ತನ್ನ ಆಟದ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ಸದ್ದು ಮಾಡುತ್ತಿರುವ ವೈಭವ್ ಸೂರ್ಯವಂಶಿ (Vaibhav Suryavanshi), 2026 ರ ಐಪಿಎಲ್​ನಲ್ಲಿ (IPL 2026) 750 ಕ್ಕೂ ಹೆಚ್ಚು ರನ್ ಕಲೆಹಾಕಿ ಆರೆಂಜ್ ಕ್ಯಾಪ್ ಗೆದ್ದಿದ್ದಲ್ಲದೆ ಅತಿ ಕಡಿಮೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದರು. ಇದರ ಜೊತೆಗೆ ಈ ಸೀಸನ್​ನಲ್ಲಿ ಅತ್ಯಧಿಕ 5 ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡರು. ವೈಭವ್ ಅವರ ಆಟಕ್ಕೆ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಅಭಿಮಾನಿಗಳ ಬಳಗ ಹುಟ್ಟಿಕೊಂಡಿದೆ. ಮಾಜಿ ಕ್ರಿಕೆಟಿಗರು ಕೂಡ ವೈಭವ್ ಅವರ ಆಟಕ್ಕೆ ಫ್ಯಾನ್ ಆಗಿಬಿಟ್ಟಿದ್ದಾರೆ. ಪ್ರಸ್ತುತ ಭಾರತ ಎ ತಂಡದಲ್ಲಿ ಸ್ಥಾನ ಪಡೆದಿರುವ ವೈಭವ್, ತ್ರಿಕೋನ ಸರಣಿಗಾಗಿ ಶ್ರೀಲಂಕಾಕ್ಕೆ ಹಾರಿದ್ದಾರೆ. ಈ ಸರಣಿಯಲ್ಲಿ ವೈಭವ್ ಅವರ ಪ್ರದರ್ಶನ ಇದೇ ರೀತಿ ಮುಂದುವರೆದರೆ ಅವರಿಗೆ ಭಾರತ ಟಿ20 ತಂಡದಲ್ಲಿ ಖಾಯಂ ಸ್ಥಾನ ಖಚಿತ.

ವೈಭವ್​ಗೆ ಟೆಸ್ಟ್ ತಂಡದಲ್ಲಿ ಸ್ಥಾನ?

ಆದಾಗ್ಯೂ ವೈಭವ್ ಭಾರತ ಏಕದಿನ ಹಾಗೂ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಬೇಕೆಂದರೆ ಇನ್ನು ಕಾಯಬೇಕಾಗುತ್ತದೆ. ಆದಾಗ್ಯೂ ವೈಭವ್ ಅವರ ಆಟವನ್ನು ಮೆಚ್ಚಿರುವ ಮಾಜಿ ಕ್ರಿಕೆಟಿಗರಾದ ನಾಸರ್ ಹುಸೇನ್ ಮತ್ತು ಸೈಮನ್ ಡೌಲ್ ವೈಭವ್ ಸೂರ್ಯವಂಶಿಗೆ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ನೀಡಬೇಕು ಎಂಬ ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಪ್ರಸ್ತುತ ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಇಂಗ್ಲೆಂಡ್‌ ಹಾಗೂ ನ್ಯೂಜಿಲೆಂಡ್ ನಡುವಿನ ಟೆಸ್ಟ್ ಪಂದ್ಯದಲ್ಲಿ ವೀಕ್ಷಕ ವಿವರಣೆ ನೀಡುತ್ತಿದ್ದ ಇಯಾನ್ ವಾರ್ಡ್, ಭಾರತ ಟೆಸ್ಟ್ ತಂಡದಲ್ಲಿ ಸೂರ್ಯವಂಶಿ ಅವರನ್ನು ಆರಂಭಿಕನಾಗಿ ಆಡಿಸಬೇಕು ಎಂದರು.

ಸಚಿನ್ ತೆಂಡೂಲ್ಕರ್​ಗೆ ಹೋಲಿಕೆ

ಇದಕ್ಕೆ ಪ್ರತಿಕ್ರಿಯಿಸಿದ ನಾಸರ್ ಹುಸೇನ್, ಆ ದಿನ ದೂರವಿಲ್ಲ, ನಾನು ಕೂಡ ಅದನ್ನು ಎದುರು ನೋಡುತ್ತಿದ್ದೇನೆ. ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ವೈಭವ್​ಗೆ ಬಿಸಿಸಿಐ, ಭಾರತ ಟೆಸ್ಟ್ ತಂಡದಲ್ಲಿ ಜಾಗ ಮಾಡಿಕೊಡಬೇಕು ಎಂದರು. ಇತ್ತ ಸೈಮನ್ ಡೌಲ್ ಈ ಮಾತನ್ನು ಕೇಳಿ ನಕ್ಕರಾದರೂ, ನಾನು ಕೂಡ ವೈಭವ್ ಅವರ ಆಟಕ್ಕೆ ಅಭಿಮಾನಿಯಾಗಿದ್ದೇನೆ. ಅವರ ಪ್ರಸ್ತುತ ಆಟ ನನಗೆ ಸಚಿನ್ ತೆಂಡೂಲ್ಕರ್ ಅವರ ಆರಂಭಿಕ ದಿನಗಳನ್ನು ನೆನಪಿಸುತ್ತದೆ ಎಂದರು. ಈ ಮೂವರ ಅಭಿಪ್ರಾಯ ಏನೇ ಇದ್ದರೂ ವೈಭವ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಇನ್ನು ಕಾಯಬೇಕಾಗಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:52 pm, Fri, 5 June 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ಮಂಜುಗೆ ಸುತ್ತಿಕೊಂಡು ಬಂದ ಕರ್ಮ; ಚಿತ್ರಹಿಂಸೆ ಅನುಭವಿಸಿದ ಮಾಡರ್ನ್ ಮಹಾಕವಿ
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!
ರಾಜ್ಯದ ವಿವಿಗಳಲ್ಲಿನ ಸಾವಿರಾರು ಪ್ರೊಫೆಸರ್ ಹುದ್ದೆಗಳ ಭರ್ತಿಗೆ ಸಿದ್ಧತೆ!