AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈಭವ್ ಸೂರ್ಯವಂಶಿ ಕೈ ಸೇರಿದ ಟೀಮ್ ಇಂಡಿಯಾ ಜೆರ್ಸಿ!

Vaibhav Sooryavanshi: ಕ್ರಿಕೆಟ್ ಲೋಕದಲ್ಲಿ ಸಾಧನೆ ಮಾಡುವುದು ಸುಲಭದ ಮಾತಲ್ಲ. ಆದರೆ ಸಣ್ಣ ವಯಸ್ಸಿನಲ್ಲೇ ಮಾಡುವುದು ಅತೀ ದೊಡ್ಡ ಸಾಧನೆ. ಇದೀಗ 15 ವರ್ಷದ ಬ್ಯಾಟಿಂಗ್ ವಿಸ್ಮಯ ವೈಭವ್ ಸೂರ್ಯವಂಶಿ ಭಾರತ ತಂಡಕ್ಕೆ ಆಯ್ಕೆಯಾಗಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ. ಅದು ಸಹ ಅತ್ಯಂತ ಕಿರಿಯ ವಯಸ್ಸಿನಲ್ಲಿ ಎಂಬುದು ವಿಶೇಷ.

ವೈಭವ್ ಸೂರ್ಯವಂಶಿ ಕೈ ಸೇರಿದ ಟೀಮ್ ಇಂಡಿಯಾ ಜೆರ್ಸಿ!
Vaibhav Sooryavanshi Image Credit source: BCCI
ಝಾಹಿರ್ ಯೂಸುಫ್
|

Updated on:Jun 23, 2026 | 10:11 AM

Share

ಐರ್ಲೆಂಡ್ ಮತ್ತು ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿರುವ ವೈಭವ್ ಸೂರ್ಯವಂಶಿ ಇದೀಗ ಭಾರತ ಹಿರಿಯರ ತಂಡದ ಜೆರ್ಸಿಯನ್ನು ಪಡೆದುಕೊಂಡಿದ್ದಾರೆ. ತಮ್ಮ ಹೆಸರಿರುವ ಐಕಾನಿಕ್ ನೀಲಿ ಜೆರ್ಸಿಯನ್ನು ಪಡೆದ ವೈಭವ್, “ಇದು ನನ್ನ ಜೀವಮಾನದ ಕನಸು” ಎಂದಿದ್ದಾರೆ.

ವೈಭವ್ ಸೂರ್ಯವಂಶಿಯ ಈ ವಿಶೇಷ ಕ್ಷಣಗಳ ವಿಡಿಯೋವನ್ನು ಬಿಸಿಸಿಐ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ “ಇದು ನನ್ನ ಜೀವಮಾನದ ಕನಸು, ನನಗೆ ನಂಬಲು ಸಾಧ್ಯವಾಗುತ್ತಿಲ್ಲ” ಎಂದು ಭಾವುಕರಾಗಿ ನುಡಿದಿದ್ದಾರೆ.

ಅಲ್ಲದೆ ಈ ಜೆರ್ಸಿಯೊಂದಿಗೆ ವೈಭವ್ ಸೂರ್ಯವಂಶಿ ಟೀಮ್ ಇಂಡಿಯಾ ಪರ ಕಣಕ್ಕಿಳಿದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಏಕೆಂದರೆ ಭಾರತದ ಪರ ಯಾವುದೇ ಆಟಗಾರ 15ನೇ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಪಂದ್ಯವಾಡಿಲ್ಲ.

  • ಸಚಿನ್ ತೆಂಡೂಲ್ಕರ್ (ಟೆಸ್ಟ್ ಕ್ರಿಕೆಟ್): ಟೀಮ್ ಇಂಡಿಯಾ ಪರ ಟೆಸ್ಟ್ ಕ್ರಿಕೆಟ್​ ಆಡಿದ ಅತ್ಯಂತ ಕಿರಿಯ ಆಟಗಾರ ಸಚಿನ್ ತೆಂಡೂಲ್ಕರ್. 1989 ರಲ್ಲಿ ಪಾಕಿಸ್ತಾನ್ ವಿರುದ್ಧ ಚೊಚ್ಚಲ ಟೆಸ್ಟ್ ಪಂದ್ಯವಾಡಿದಾಗ ಸಚಿನ್ ಅವರ ವಯಸ್ಸು 16 ವರ್ಷ, 205 ದಿನಗಳು
  • ಸಚಿನ್ ತೆಂಡೂಲ್ಕರ್ (ಏಕದಿನ ಕ್ರಿಕೆಟ್): ಭಾರತದ ಪರ ಏಕದಿನ ಪಂದ್ಯವಾಡಿದ ಅತ್ಯಂತ ಕಿರಿಯ ಆಟಗಾರ ಕೂಡ ಸಚಿನ್ ತೆಂಡೂಲ್ಕರ್. 1989 ರಲ್ಲಿ ಪಾಕಿಸ್ತಾನ್ ವಿರುದ್ಧ ಚೊಚ್ಚಲ ಒಡಿಐ ಮ್ಯಾಚ್ ಆಡಿದಾಗ ಸಚಿನ್ ತೆಂಡೂಲ್ಕರ್ ಅವರ ವಯಸ್ಸು 16 ವರ್ಷ, 238 ದಿನಗಳು.
  • ವಾಷಿಂಗ್ಟನ್ ಸುಂದರ್ (ಟಿ20 ಕ್ರಿಕೆಟ್): ಟೀಮ್ ಇಂಡಿಯಾ ಪರ ಏಕದಿನ ಕ್ರಿಕೆಟ್​ನಲ್ಲಿ ಪಾದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ವಾಷಿಂಗ್ಟನ್ ಸುಂದರ್. 2017 ರಲ್ಲಿ ಶ್ರೀಲಂಕಾ ವಿರುದ್ಧ ಚೊಚ್ಚಲ ಪಂದ್ಯವಾಡಿದಾಗ ಅವರ ವಯಸ್ಸು 18 ವರ್ಷ, 80 ದಿನಗಳು.

ಒಂದು ವೇಳೆ 15 ವರ್ಷದ ವೈಭವ್ ಸೂರ್ಯವಂಶಿ ಐರ್ಲೆಂಡ್ ವಿರುದ್ಧದ ಸರಣಿಯಲ್ಲಿ ಅಥವಾ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕಣಕ್ಕಿಳಿದರೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಪಂದ್ಯವಾಡಿದ ದಾಖಲೆ ನಿರ್ಮಿಸಲಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರ 37 ವರ್ಷಗಳ ಹಳೆಯ ದಾಖಲೆಯನ್ನು ಮುರಿದು ಹೊಸ ಇತಿಹಾಸ ಬರೆಯಲಿದ್ದಾರೆ.

ಭಾರತ vs ಐರ್ಲೆಂಡ್ ಟಿ20 ಸರಣಿ ವೇಳಾಪಟ್ಟಿ:

ಪಂದ್ಯ ದಿನಾಂಕ (2026) ಕ್ರೀಡಾಂಗಣ / ಸ್ಥಳ ಸಮಯ ( IST)
1ನೇ ಟಿ20 ಪಂದ್ಯ ಜೂನ್ 26, ಶುಕ್ರವಾರ ಸ್ಟೋರ್ಮಾಂಟ್ ಕ್ರಿಕೆಟ್ ಮೈದಾನ, ಬೆಲ್‌ಫಾಸ್ಟ್ ರಾತ್ರಿ 6:00 ಗಂಟೆಗೆ
2ನೇ ಟಿ20 ಪಂದ್ಯ ಜೂನ್ 28, ಭಾನುವಾರ ಸ್ಟೋರ್ಮಾಂಟ್ ಕ್ರಿಕೆಟ್ ಮೈದಾನ, ಬೆಲ್‌ಫಾಸ್ಟ್ ರಾತ್ರಿ 6:00 ಗಂಟೆಗೆ

ಇದನ್ನೂ ಓದಿ: ಸಿರಾಜ್​ರನ್ನು ಕೈ ಬಿಟ್ಟಿದ್ದೇಕೆ? ಟೀಮ್ ಇಂಡಿಯಾ ಮಾಜಿ ಆಟಗಾರನ ಪ್ರಶ್ನೆ

ಭಾರತ vs ಇಂಗ್ಲೆಂಡ್ ಸರಣಿ ವೇಳಾಪಟ್ಟಿ:

ಪಂದ್ಯ ದಿನಾಂಕ (2026) ಕ್ರೀಡಾಂಗಣ / ಸ್ಥಳ ಸಮಯ (IST)
1ನೇ ಟಿ20 ಪಂದ್ಯ ಜುಲೈ 01, ಬುಧವಾರ ರಿವರ್ಸೈಡ್ ಗ್ರೌಂಡ್, ಚೆಸ್ಟರ್-ಲೆ-ಸ್ಟ್ರೀಟ್ ರಾತ್ರಿ 10:00 ಗಂಟೆಗೆ
2ನೇ ಟಿ20 ಪಂದ್ಯ ಜುಲೈ 04, ಶನಿವಾರ ಓಲ್ಡ್ ಟ್ರಾಫರ್ಡ್, ಮ್ಯಾಂಚೆಸ್ಟರ್ ಸಂಜೆ 7:00 ಗಂಟೆಗೆ
3ನೇ ಟಿ20 ಪಂದ್ಯ ಜುಲೈ 07, ಮಂಗಳವಾರ ಟ್ರೆಂಟ್ ಬ್ರಿಡ್ಜ್, ನಾಟಿಂಗ್‌ಹ್ಯಾಮ್ ರಾತ್ರಿ 10:00 ಗಂಟೆಗೆ
4ನೇ ಟಿ20 ಪಂದ್ಯ ಜುಲೈ 09, ಗುರುವಾರ ಬ್ರಿಸ್ಟಲ್ ಕೌಂಟಿ ಗ್ರೌಂಡ್, ಬ್ರಿಸ್ಟಲ್ ರಾತ್ರಿ 10:00 ಗಂಟೆಗೆ
5ನೇ ಟಿ20 ಪಂದ್ಯ ಜುಲೈ 11, ಶನಿವಾರ ರೋಸ್ ಬೌಲ್, ಸೌತಾಂಪ್ಟನ್ ಸಂಜೆ 7:00 ಗಂಟೆಗೆ
1ನೇ ಏಕದಿನ ಪಂದ್ಯ ಜುಲೈ 14, ಮಂಗಳವಾರ ಎಡ್ಜ್‌ಬಾಸ್ಟನ್, ಬರ್ಮಿಂಗ್ಹ್ಯಾಮ್ ಮಧ್ಯಾಹ್ನ 3:30ಕ್ಕೆ
2ನೇ ಏಕದಿನ ಪಂದ್ಯ ಜುಲೈ 16, ಗುರುವಾರ ಸೋಫಿಯಾ ಗಾರ್ಡನ್ಸ್, ಕಾರ್ಡಿಫ್ ಸಂಜೆ 5:30ಕ್ಕೆ
3ನೇ ಏಕದಿನ ಪಂದ್ಯ ಜುಲೈ 19, ಭಾನುವಾರ ಲಾರ್ಡ್ಸ್ ಕ್ರಿಕೆಟ್ ಮೈದಾನ, ಲಂಡನ್ ಮಧ್ಯಾಹ್ನ 3:30ಕ್ಕೆ

Published On - 10:10 am, Tue, 23 June 26

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು