AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ವಿರುದ್ಧ ಈಗಾಗಲೇ ವಿಶ್ವ ದಾಖಲೆ ಬರೆದಿರುವ ವೈಭವ್, ಸೆಮೀಸ್‌ನಲ್ಲಿ ಏನು ಮಾಡ್ತಾರೆ?

2026ರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಸೆಮಿಫೈನಲ್‌ನಲ್ಲಿ ಭಾರತ ಎ ತಂಡ ಶ್ರೀಲಂಕಾ ಎ ತಂಡವನ್ನು ಎದುರಿಸಲಿದೆ. ಭಾರತದ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಮೇಲೆ ಎಲ್ಲರ ಕಣ್ಣಿದೆ. ಇತ್ತೀಚೆಗೆ 204 ರನ್ ಸಿಡಿಸಿ ಗಮನ ಸೆಳೆದ ವೈಭವ್, ಶ್ರೀಲಂಕಾ ಎ ವಿರುದ್ಧ ಹಿಂದೆಯೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ತ್ರಿಕೋನ ಸರಣಿಯ ಫೈನಲ್‌ನಲ್ಲಿ 11 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ವಿಶ್ವದಾಖಲೆ ಬರೆದಿದ್ದ ಅವರು, ಸೆಮಿಫೈನಲ್‌ನಲ್ಲೂ ಸ್ಫೋಟಕ ಇನ್ನಿಂಗ್ಸ್ ನಿರೀಕ್ಷೆಯಿದೆ.

ಶ್ರೀಲಂಕಾ ವಿರುದ್ಧ ಈಗಾಗಲೇ ವಿಶ್ವ ದಾಖಲೆ ಬರೆದಿರುವ ವೈಭವ್, ಸೆಮೀಸ್‌ನಲ್ಲಿ ಏನು ಮಾಡ್ತಾರೆ?
Vaibhav Sooryavanshi
ಪೃಥ್ವಿಶಂಕರ
|

Updated on: Nov 25, 2026 | 5:35 PM

Share

2026ರ ಏಷ್ಯಾಕಪ್ ರೈಸಿಂಗ್ ಸ್ಟಾರ್ಸ್ ಟೂರ್ನಿಯ ಮೊದಲ ಸೆಮಿಫೈನಲ್‌ನಲ್ಲಿ ಭಾರತ ಎ ತಂಡ ಶ್ರೀಲಂಕಾ ಎ ತಂಡವನ್ನು ಎದುರಿಸಲಿದೆ. ನವೆಂಬರ್ 26ರಂದು ದೋಹಾದಲ್ಲಿ ಈ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣು ಭಾರತದ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಮೇಲಿದೆ. ಇದಕ್ಕೆ ಕಾರಣವೂ ಇದೆ. ಯುಎಇ ವಿರುದ್ಧದ ಕಳೆದ ಪಂದ್ಯದಲ್ಲಿ ವೈಭವ್ ಕೇವಲ 53 ಎಸೆತಗಳಲ್ಲಿ 204 ರನ್ ಸಿಡಿಸಿ ವಿಶ್ವ ಕ್ರಿಕೆಟ್‌ನ ಗಮನ ಸೆಳೆದಿದ್ದಾರೆ. ಇದೀಗ ಸೆಮಿಫೈನಲ್‌ನಲ್ಲೂ ಅವರಿಂದ ಮತ್ತೊಂದು ಸ್ಫೋಟಕ ಇನ್ನಿಂಗ್ಸ್ ನಿರೀಕ್ಷಿಸಲಾಗುತ್ತಿದೆ. ವಿಶೇಷವೆಂದರೆ, ಶ್ರೀಲಂಕಾ ಎ ತಂಡ ವೈಭವ್‌ಗೆ ಹೊಸ ಎದುರಾಳಿಯೇನಲ್ಲ. ಈ ತಂಡದ ವಿರುದ್ಧ ಈಗಾಗಲೇ ಮೂರು ಪಂದ್ಯಗಳನ್ನಾಡಿರುವ ಅವರು, ಇದೀಗ ನಾಲ್ಕನೇ ಬಾರಿಗೆ ಮುಖಾಮುಖಿಯಾಗಲಿದ್ದಾರೆ. ಹಾಗಾದರೆ ಶ್ರೀಲಂಕಾ ಎ ವಿರುದ್ಧ ವೈಭವ್ ಅವರ ಹಿಂದಿನ ಪ್ರದರ್ಶನ ಹೇಗಿತ್ತು?

ಶ್ರೀಲಂಕಾ ಎ ವಿರುದ್ಧ ವೈಭವ್ ದಾಖಲೆ ಹೇಗಿದೆ?

2026ರ ಜೂನ್‌ನಲ್ಲಿ ಶ್ರೀಲಂಕಾದಲ್ಲಿ ನಡೆದ ತ್ರಿಕೋನ ಸರಣಿಯಲ್ಲಿ ವೈಭವ್ ಮೊದಲ ಬಾರಿಗೆ ಶ್ರೀಲಂಕಾ ಎ ತಂಡವನ್ನು ಎದುರಿಸಿದ್ದರು. ಈ ಸರಣಿಯಲ್ಲಿ ಭಾರತ ಎ ತಂಡವೂ ಭಾಗವಹಿಸಿತ್ತು. ಶ್ರೀಲಂಕಾ ಎ ವಿರುದ್ಧ ವೈಭವ್ ಒಟ್ಟು ಮೂರು ಪಂದ್ಯಗಳನ್ನಾಡಿದ್ದರು. ಈ ಪೈಕಿ ಮೊದಲ ಎರಡು ಪಂದ್ಯಗಳಲ್ಲಿ ಅವರ ಬ್ಯಾಟ್‌ನಿಂದ ದೊಡ್ಡ ಮೊತ್ತ ದಾಖಲಾಗಿರಲಿಲ್ಲ. ಮೊದಲ ಪಂದ್ಯದಲ್ಲಿ ಕೇವಲ 12 ಎಸೆತಗಳನ್ನು ಎದುರಿಸಿದ್ದ ವೈಭವ್ ಮೂರು ಬೌಂಡರಿಗಳ ನೆರವಿನಿಂದ 14 ರನ್ ಗಳಿಸಿದ್ದರು. ಇನ್ನು ಸರಣಿಯ ನಾಲ್ಕನೇ ಪಂದ್ಯದಲ್ಲಿ ಶ್ರೀಲಂಕಾ ಎ ವಿರುದ್ಧ ಎರಡನೇ ಬಾರಿ ಕಣಕ್ಕಿಳಿದ ಅವರು, 14 ಎಸೆತಗಳಲ್ಲಿ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ಸಹಿತ 21 ರನ್ ಗಳಿಸಿದ್ದರು. ಆದರೆ ಫೈನಲ್ ಪಂದ್ಯದಲ್ಲಿ ಮಾತ್ರ ವೈಭವ್ ಅಬ್ಬರವೇ ಬೇರೆಯಾಗಿತ್ತು.

ಫೈನಲ್‌ನಲ್ಲಿ ವಿಶ್ವ ದಾಖಲೆ ನಿರ್ಮಿಸಿದ್ದ ವೈಭವ್

2026ರ ಜೂನ್ 21ರಂದು ದಂಬುಲ್ಲಾದಲ್ಲಿ ನಡೆದ ತ್ರಿಕೋನ ಸರಣಿಯ ಫೈನಲ್‌ನಲ್ಲಿ ವೈಭವ್ ಸೂರ್ಯವಂಶಿ ಶ್ರೀಲಂಕಾ ಎ ತಂಡದ ಬೌಲರ್‌ಗಳ ಬೆವರಿಳಿಸಿದ್ದರು. ಈ ಪಂದ್ಯದಲ್ಲಿ ಕೇವಲ 29 ಎಸೆತಗಳನ್ನು ಎದುರಿಸಿದ ವೈಭವ್ 324.13ರ ಸ್ಟ್ರೈಕ್‌ರೇಟ್‌ನಲ್ಲಿ 94 ರನ್ ಸಿಡಿಸಿದ್ದರು. ಅವರ ಈ ಸ್ಫೋಟಕ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಹಾಗೂ 8 ಭರ್ಜರಿ ಸಿಕ್ಸರ್‌ಗಳು ಸೇರಿದ್ದವು. ಅಷ್ಟೇ ಅಲ್ಲ, ಈ ಪಂದ್ಯದಲ್ಲಿ ವೈಭವ್ ಹೊಸ ವಿಶ್ವ ದಾಖಲೆಯನ್ನೂ ನಿರ್ಮಿಸಿದ್ದರು. ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಅತಿ ವೇಗವಾಗಿ ಅರ್ಧಶತಕ ಸಿಡಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಅವರು ಕೇವಲ 11 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಇದಕ್ಕೂ ಮೊದಲು ಈ ದಾಖಲೆ ಶ್ರೀಲಂಕಾದ ಕುಸಲ್ಯ ವೀರರತ್ನ ಹೆಸರಿನಲ್ಲಿತ್ತು. ಅವರು 2005-06ರ ಸಾಲಿನಲ್ಲಿ 12 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರು. ಇದೀಗ ಆ ದಾಖಲೆಯನ್ನು ವೈಭವ್ ಮುರಿದಿದ್ದರು.

ವೈಭವ್ ಸೂರ್ಯವಂಶಿ ಅಬ್ಬರಕ್ಕೆ ವಿಶ್ವವೇ ಬೆರಗು: ಒಂದೇ ಪಂದ್ಯದಲ್ಲಿ 6 ವಿಶ್ವದಾಖಲೆ ಉಡೀಸ್

ಸೆಮಿಫೈನಲ್‌ನಲ್ಲೂ ವೈಭವ್ ಅಬ್ಬರದ ನಿರೀಕ್ಷೆ

ಇದೀಗ ಮತ್ತೊಮ್ಮೆ ಶ್ರೀಲಂಕಾ ಎ ತಂಡದ ವಿರುದ್ಧ ಕಣಕ್ಕಿಳಿಯಲು ವೈಭವ್ ಸಜ್ಜಾಗಿದ್ದಾರೆ. ಆದರೆ ಈ ಬಾರಿ ಇದು ಫೈನಲ್ ಪಂದ್ಯವಲ್ಲ, ಏಷ್ಯಾ ಕಪ್ ರೈಸಿಂಗ್ ಸ್ಟಾರ್ಸ್‌ನ ಸೆಮಿಫೈನಲ್ ಕದನ. ಯುಎಇ ವಿರುದ್ಧದ ಪಂದ್ಯದಲ್ಲಿ ವೈಭವ್ ತೋರಿದ ಬ್ಯಾಟಿಂಗ್ ಪರಾಕ್ರಮದ ಬಳಿಕ ಶ್ರೀಲಂಕಾ ಎ ತಂಡದ ಬೌಲರ್‌ಗಳಿಗೆ ದೊಡ್ಡ ಸವಾಲು ಎದುರಾಗಲಿದೆ. ಈಗಾಗಲೇ ಪರಿಚಿತ ಎದುರಾಳಿಯಾಗಿರುವ ಶ್ರೀಲಂಕಾ ವಿರುದ್ಧ ವೈಭವ್ ತಮ್ಮ ಹಿಂದಿನ ದಾಖಲೆಗಳನ್ನು ಮತ್ತಷ್ಟು ಉತ್ತಮಪಡಿಸಿಕೊಳ್ಳುತ್ತಾರಾ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಕಳೆದ ಒಂದು ದಶಕದಿಂದ ಕನ್ನಡದ ನಂ.1 ಸುದ್ದಿ ವಾಹಿನಿ ಟಿವಿ9 ಕನ್ನಡದೊಂದಿಗೆ ಪತ್ರಿಕೋದ್ಯಮದ ಪಯಣ ಮುಂದುವರಿಸಿದ್ದೇನೆ. ಕ್ರೀಡಾ ಜಗತ್ತಿನ ಆಗುಹೋಗುಗಳು, ಆಟಗಾರರ ಸಾಧನೆಗಳು, ಮೈದಾನದ ರೋಚಕ ಕ್ಷಣಗಳು ಹಾಗೂ ಕ್ರೀಡೆಯ ಹಿಂದಿನ ಆಸಕ್ತಿದಾಯಕ ಕಥನಗಳನ್ನು ಅಕ್ಷರಗಳ ಮೂಲಕ ಓದುಗರಿಗೆ ತಲುಪಿಸುವುದು ನನ್ನ ವೃತ್ತಿ ಮತ್ತು ಪ್ರವೃತ್ತಿ. ಕ್ರೀಡೆಯನ್ನು ಕೇವಲ ಆಟವಾಗಿ ನೋಡದೆ, ಅದರೊಳಗಿನ ಪರಿಶ್ರಮ, ಹೋರಾಟ, ಸಾಧನೆ ಮತ್ತು ಭಾವನೆಗಳನ್ನು ಗುರುತಿಸಿ ಬರವಣಿಗೆಯಲ್ಲಿ ಕಟ್ಟಿಕೊಡುವುದು ನನ್ನ ಪ್ರಯತ್ನ. ಮೂಲತಃ ಹಾಸನ ಜಿಲ್ಲೆಯವನು. ಹಾಸನದ ನೆಲದ ಸೊಗಡು ಮತ್ತು ಕನ್ನಡದ ಮೇಲಿನ ಅಭಿಮಾನ ನನ್ನ ಹೆಮ್ಮೆ. ವೃತ್ತಿಪರತೆಯೊಂದಿಗೆ ಹೊಸ ವಿಷಯಗಳನ್ನು ಕಲಿಯುತ್ತಾ, ಕ್ರೀಡಾ ಪತ್ರಿಕೋದ್ಯಮದಲ್ಲಿ ಹೊಸ ಮೈಲಿಗಲ್ಲುಗಳನ್ನು ಸಾಧಿಸುವ ಹಂಬಲ ನನ್ನದು.

Read More
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮತ್ತೆ ತಲೆ ಓಡಿಸಿದ ಯಶಸ್, ಗೊಂದಲದಲ್ಲಿ ಮನೆ ಮಂದಿ: ವಿಡಿಯೋ
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಮರಿಗಳಿಗೆ ರಕ್ಷಣಾ ಕೋಟೆ ಕಟ್ಟಿ ಸಾಗುತ್ತಿರುವ 39 ಕಾಡಾನೆಗಳ ದಂಡು
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಜಾಮೀನು ರದ್ದು: ಮನೆಯಿಂದ ಕಣ್ಣೀರು ಹಾಕುತ್ತಾ ಹೊರಬಂದ ವಿನಯ್ ಕುಲಕರ್ಣಿ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ಆಶಾ ಕಾರ್ಯಕರ್ತರ ಬಗ್ಗೆ ನೀಡಿದ್ದ ಹೇಳಿಕೆಗೆ ಸಚಿವ ನರೇಂದ್ರಸ್ವಾಮಿ ವಿಷಾದ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ವಿನಯ್ ಕುಲಕರ್ಣಿ ಜಾಮೀನು ರದ್ದು: ಸುಪ್ರೀಂ ಕೋರ್ಟ್ ತೀರ್ಪಿಗೆ ಹರ್ಷ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಆಶಾ ಕಾರ್ಯಕರ್ತರ ಪ್ರತಿಭಟನೆಗೆ ತಾರಾ ಬೆಂಬಲ: ಗೌರವಧನ ಹೆಚ್ಚಳಕ್ಕೆ ಆಗ್ರಹ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾರವಾರ: ದಿಶಾ ಸಮಿತಿ ಸಭೆಯಲ್ಲಿ 'ವಂದೇ ಮಾತರಂ' ಜಟಾಪಟಿ
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ಕಾಫಿತೋಟದಿಂದ ಇಳಿದು ಭತ್ತದ ಗದ್ದೆಗಳನ್ನ ದಾಟಿ ಹೋಗಿರುವ ಕಾಡಾನೆಗಳು
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
ವಿನಯ್ ಕುಲಕರ್ಣಿಗೆ ಮತ್ತೆ ಜೈಲು: ವಕೀಲರು ಹೇಳಿದ್ದೇನು ನೋಡಿ
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'
'ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ಒಳ್ಳೇದು ಅನ್ನಿಸುತ್ತೆ'