AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

68, 175, 67, 96, 94..! ನಿರ್ಣಾಯಕ ಪಂದ್ಯಗಳಲ್ಲಿ ಅಬ್ಬರಿಸುವ ವೈಭವ್ ಸೂರ್ಯವಂಶಿ

Vaibhav Sooryavanshi: ವೈಭವ್ ಸೂರ್ಯವಂಶಿ ಕ್ರಿಕೆಟ್ ಲೋಕದ ಹೊಸ ಸೂಪರ್ ಸ್ಟಾರ್. U19 ವಿಶ್ವಕಪ್, IPL ಮತ್ತು ತ್ರಿಕೋನ ಸರಣಿಯಂತಹ ನಿರ್ಣಾಯಕ ಪಂದ್ಯಗಳಲ್ಲಿ ತಂಡಕ್ಕೆ ಆಸರೆಯಾಗಿ ನಿಂತು, ಅದ್ಭುತ ಪ್ರದರ್ಶನ ನೀಡಿದ್ದಾರೆ. ಒತ್ತಡದ ಸಂದರ್ಭಗಳಲ್ಲಿ ಏಕಾಂಗಿ ಹೋರಾಟ ನೀಡಿ ಪಂದ್ಯಗಳನ್ನು ಗೆಲ್ಲಿಸಿಕೊಡುವ ಇವರ ಸಾಮರ್ಥ್ಯ ಎದುರಾಳಿಗಳಿಗೆ ನಡುಕ ಹುಟ್ಟಿಸುತ್ತದೆ. ಇವರ ಅಮೋಘ ಅಂಕಿಅಂಶಗಳೇ ಇದಕ್ಕೆ ಸಾಕ್ಷಿ.

68, 175, 67, 96, 94..! ನಿರ್ಣಾಯಕ ಪಂದ್ಯಗಳಲ್ಲಿ ಅಬ್ಬರಿಸುವ ವೈಭವ್ ಸೂರ್ಯವಂಶಿ
Vaibhav Sooryavanshi
ಪೃಥ್ವಿಶಂಕರ
|

Updated on:Jun 21, 2026 | 5:37 PM

Share

ನಿರ್ಣಾಯಕ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುವ ಆಟಗಾರನಿಗೆ ಕ್ರಿಕೆಟ್​ ಲೋಕದಲ್ಲಿ ಸಾಕಷ್ಟು ಮನ್ನಣೆ ಸಿಗುತ್ತದೆ. ಆತ ಕ್ರೀಸ್​ನಲ್ಲಿದ್ದರೆ ಎದುರಾಳಿ ತಂಡಗಳಿಗೆ ನಡುಕದ ಜೊತೆಗೆ ಸೋಲಿನ ಭಯವೂ ಇರುತ್ತದೆ. ಆ ರೀತಿಯ ಭಯ ಹುಟ್ಟಿಸಿರುವ ಆಟಗಾರರ ಪಟ್ಟಿಗೆ ಇತ್ತೀಚೆಗೆ ಸೇರ್ಪಡೆಗೊಂಡಿರುವ ಹೆಸರು ವೈಭವ್ ಸೂರ್ಯವಂಶಿ (Vaibhav Sooryavanshi). ತನ್ನ ಹೊಡಿಬಡಿ ಆಟದ ಮೂಲಕ ವಿಶ್ವ ಕ್ರಿಕೆಟ್​ನಲ್ಲಿ ಸಂಚಲನ ಮೂಡಿಸಿರುವ ವೈಭವ್ ನಿರ್ಣಾಯಕ ಪಂದ್ಯಗಳಲ್ಲಿ ಮತ್ತು ತಂಡ ಸಂಕಷ್ಟದಲ್ಲಿದ್ದ ಸಮಯದಲ್ಲಿ ಏಕಾಂಗಿ ಹೋರಾಟ ನೀಡುವುದರಲ್ಲಿ ನಿಸ್ಸೀಮ. ಇದನ್ನು ಸುಖಾಸುಮ್ಮನೆ ಹೇಳುತ್ತಿಲ್ಲ. ಬದಲಿಗೆ ಅಂಕಿಅಂಶಗಳೇ ಇದನ್ನು ಸಾಭೀತುಪಡಿಸಿವೆ.

U19 ವಿಶ್ವಕಪ್ ಸೆಮಿಫೈನಲ್‌ನಲ್ಲಿ ಅದ್ಭುತ ಪ್ರದರ್ಶನ

ಈ ವರ್ಷ ಭಾರತದ ಅಂಡರ್-19 ತಂಡ ಏಕದಿನ ವಿಶ್ವಕಪ್ ಗೆದ್ದಿತು. ಈ ಗೆಲುವಿನಲ್ಲಿ ವೈಭವ್ ಸೂರ್ಯವಂಶಿ ನಿರ್ಣಾಯಕ ಪಾತ್ರ ವಹಿಸಿದರು. ಫೆಬ್ರವರಿ 4, 2026 ರಂದು ನಡೆದಿದ್ದ ಅಫ್ಘಾನಿಸ್ತಾನ ವಿರುದ್ಧದ ಅಂಡರ್-19 ವಿಶ್ವಕಪ್ ಸೆಮಿಫೈನಲ್‌ ಪಂದ್ಯದಲ್ಲಿ ವೈಭವ್, 33 ಎಸೆತಗಳಲ್ಲಿ 200 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ 68 ರನ್ ಗಳಿಸಿದರು. ವೈಭವ್ ಸೂರ್ಯವಂಶಿ ಅವರ ಈ ಇನ್ನಿಂಗ್ಸ್ ಭಾರತದ ಅಂಡರ್-19 ತಂಡವನ್ನು ಫೈನಲ್ ತಲುಪಲು ಸಹಾಯ ಮಾಡಿತು.

ಫೈನಲ್‌ನಲ್ಲಿ 175 ರನ್ ಚಚ್ಚಿದ ವೈಭವ್

ಸೆಮಿಫೈನಲ್ ಬಳಿಕ ಅಂಡರ್-19 ವಿಶ್ವಕಪ್ ಫೈನಲ್ ಪಂದ್ಯದಲ್ಲಿಯೂ ವೈಭವ್ ಸೂರ್ಯವಂಶಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ವೈಭವ್ ಸೂರ್ಯವಂಶಿ 80 ಎಸೆತಗಳಲ್ಲಿ 200 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್ ನಲ್ಲಿ 175 ರನ್ ಗಳಿಸಿದರು. ವೈಭವ್ ಅವರ ಈ ಆಟದಿಂದಾಗಿ ಭಾರತ ಈ ಪಂದ್ಯವನ್ನು 100 ರನ್ ಗಳಿಂದ ಗೆದ್ದು ಟ್ರೋಫಿಯನ್ನು ಎತ್ತಿಹಿಡಿದಿತ್ತು.

ಐಪಿಎಲ್​ನಲ್ಲೂ ಮಿಂಚಿದ್ದ ವೈಭವ್

2026 ರ ಐಪಿಎಲ್​ನ ಎಲಿಮಿನೇಟರ್ ಮತ್ತು ಕ್ವಾಲಿಫೈಯರ್ ಪಂದ್ಯಗಳಲ್ಲಿಯೂ ವೈಭವ್ ಸೂರ್ಯವಂಶಿ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಎಲಿಮಿನೇಟರ್ ಪಂದ್ಯದಲ್ಲಿ ವೈಭವ್, ಕೇವಲ 29 ಎಸೆತಗಳಲ್ಲಿ 67 ರನ್ ಗಳಿಸಿದರು. ಈ ಇನ್ನಿಂಗ್ಸ್ ರಾಜಸ್ಥಾನ್ ರಾಯಲ್ಸ್ ತಂಡವು ಕ್ವಾಲಿಫೈಯರ್ 2ಗೆ ಅರ್ಹತೆ ಪಡೆಯಲು ಸಹಾಯ ಮಾಡಿತು. ಹಾಗೆಯೇ ಕ್ವಾಲಿಫೈಯರ್ ಪಂದ್ಯದಲ್ಲಿಯೂ ವೈಭವ್ 47 ಎಸೆತಗಳಲ್ಲಿ 96 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೆ ಇತರರ ವೈಫಲ್ಯದಿಂದಾಗಿ ಈ ಪಂದ್ಯದಲ್ಲಿ ರಾಜಸ್ಥಾನ್ ಸೋಲು ಕಂಡಿತು.

ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ ಎಂದ ಟೀಂ ಇಂಡಿಯಾದ ಮಾಜಿ ನಾಯಕ

ತ್ರಿಕೋನ ಸರಣಿಯ ಫೈನಲ್‌ನಲ್ಲಿ ಬೆಂಕಿ ಉಗುಳಿದ ವೈಭವ್

ಇದೀಗ ತ್ರಿಕೋನ ಸರಣಿಯ ಫೈನಲ್​ನಲ್ಲೂ ವೈಭವ್ ಬ್ಯಾಟ್ ಅಬ್ಬರಿಸಿದೆ. ಈ ಸರಣಿಯ ಮೊದಲ ನಾಲ್ಕು ಪಂದ್ಯಗಳಲ್ಲಿ ಒಂದೇ ಒಂದು ಅರ್ಧಶತಕ ಗಳಿಸದ ವೈಭವ್ ಸೂರ್ಯವಂಶಿ, ಶ್ರೀಲಂಕಾ ಎ ವಿರುದ್ಧದ ಸರಣಿ ಫೈನಲ್‌ನಲ್ಲಿ ಕೇವಲ 29 ಎಸೆತಗಳಲ್ಲಿ 94 ರನ್ ಗಳಿಸುವ ಮೂಲಕ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿದರು. ಲಿಸ್ಟ್ ಎ ಕ್ರಿಕೆಟ್‌ನಲ್ಲಿ 11 ಎಸೆತಗಳಲ್ಲಿ ಅತಿ ವೇಗದ ಅರ್ಧಶತಕದ ದಾಖಲೆಯನ್ನು ಸಹ ಅವರು ನಿರ್ಮಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Sun, 21 June 26

Follow Us
ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ
ಶಾಲೆ ಬಳಿ ಬೈಕ್​ನಲ್ಲಿ ಇಟ್ಟುಕೊಂಡು ಪಿಸ್ತೂಲ್ ಮಾರುತ್ತಿದ್ದ ಇಬ್ಬರ ಬಂಧನ
ಉಪ್ಪಿನಂಗಡಿಯಲ್ಲಿ ಹೈಟೆಕ್ ನಕಲಿ ನೋಟು ದಂಧೆ ಪತ್ತೆ
ಉಪ್ಪಿನಂಗಡಿಯಲ್ಲಿ ಹೈಟೆಕ್ ನಕಲಿ ನೋಟು ದಂಧೆ ಪತ್ತೆ
CET ಕೋರ್ಸ್​ಗಳಿಗೆ ಕೌನ್ಸೆಲಿಂಗ್ ಬಗ್ಗೆ KEA ನಿರ್ದೇಶಕ ಪ್ರಸನ್ನ ಅಪ್ಡೇಟ್
CET ಕೋರ್ಸ್​ಗಳಿಗೆ ಕೌನ್ಸೆಲಿಂಗ್ ಬಗ್ಗೆ KEA ನಿರ್ದೇಶಕ ಪ್ರಸನ್ನ ಅಪ್ಡೇಟ್
ಪ್ರವಾಸಿಗರೇ ಎಚ್ಚರ!: ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ ಗೋಪುರ
ಪ್ರವಾಸಿಗರೇ ಎಚ್ಚರ!: ಅಪಾಯಕಾರಿ ಸ್ಥಿತಿ ತಲುಪಿರುವ ಅಬ್ಬಿ ಫಾಲ್ಸ್‌ ಗೋಪುರ
ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ
ಅಕುಲ್ ಬಾಲಾಜಿಯ ಹೊಸ ಮನೆಗೆ ಭೇಟಿ ಕೊಟ್ಟ ಶಿವರಾಜ್ ಕುಮಾರ್ ದಂಪತಿ: ವಿಡಿಯೋ
ಭಾರತದಲ್ಲಿ ವಿಶ್ವದ ಅತಿಶಕ್ತಿಶಾಲಿ ಹೈಡ್ರೋಜನ್ ರೈಲು
ಭಾರತದಲ್ಲಿ ವಿಶ್ವದ ಅತಿಶಕ್ತಿಶಾಲಿ ಹೈಡ್ರೋಜನ್ ರೈಲು
ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್
ರಾಯಚೂರಲ್ಲಿ ಖತರ್ನಾಕ್ ಬೈಕ್ ಮೆಕ್ಯಾನಿಕ್ ಗ್ಯಾಂಗ್ ಅರೆಸ್ಟ್
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ಸಿದ್ಧತೆ ಹೇಗಿದೆ ನೋಡಿ
ಚಾಮುಂಡಿ ಬೆಟ್ಟದಲ್ಲಿ ಆಷಾಢ ಮಾಸದ ಮೊದಲ ಶುಕ್ರವಾರದ ಸಿದ್ಧತೆ ಹೇಗಿದೆ ನೋಡಿ
ಬೆಂಗಳೂರು: ಶಾಲೆ ಕೊಠಡಿ ಒಳಗಡೆ ಕುಸಿದುಬಿದ್ದು 5ನೇ ತರಗತಿ ಬಾಲಕ ಸಾವು
ಬೆಂಗಳೂರು: ಶಾಲೆ ಕೊಠಡಿ ಒಳಗಡೆ ಕುಸಿದುಬಿದ್ದು 5ನೇ ತರಗತಿ ಬಾಲಕ ಸಾವು
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ
ಇಷ್ಟಪಟ್ಟು ಕಾರು ತಗೊಂಡೆ, ಇಎಂಐ ಕಟ್ಟೋದು ಕಷ್ಟ ಆಗ್ತಿದೆ: ಮೋಕ್ಷಿತಾ