200ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ!

India A vs Afghanistan A: ಶ್ರೀಲಂಕಾದಲ್ಲಿ ನಡೆಯುತ್ತಿರುವ ಎ ತಂಡಗಳ ನಡುವಣ ತ್ರಿಕೋನ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಎ ಮತ್ತು ಅಫ್ಘಾನಿಸ್ತಾನ್ ಎ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಅಫ್ಘಾನಿಸ್ತಾನ್ ತಂಡ ನಾಯಕ ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

200ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿದ ವೈಭವ್ ಸೂರ್ಯವಂಶಿ!
Vaibhav Sooryavanshi
Image Credit source: x.com

Updated on: Jun 11, 2026 | 11:04 AM

ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಫ್ಘಾನಿಸ್ತಾನ್ ಎ ವಿರುದ್ಧದ ಪಂದ್ಯದಲ್ಲಿ ವೈಭವ್ ಸೂರ್ಯವಂಶಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡ ನಾಯಕ ಇಮ್ರಾನ್ ಮಿರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಎ ಪರ ವೈಭವ್ ಸೂರ್ಯವಂಶಿ ಹಾಗೂ ಪ್ರಭ್​ಸಿಮ್ರಾನ್ ಸಿಂಗ್ ಆರಂಭಿಕರಾಗಿ ಕಣಕ್ಕಿಳಿದಿದ್ದರು.

ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ವೈಭವ್ ಸೂರ್ಯವಂಶಿ ಬ್ಯಾಕ್ ಟು ಬ್ಯಾಕ್ ಫೋರ್​ಗಳನ್ನು ಬಾರಿಸುವ ಮೂಲಕ ಗಮನ ಸೆಳೆದರು. ಯುವ ದಾಂಡಿಗನ ಈ ಅಬ್ಬರದೊಂದಿಗೆ ಟೀಮ್ ಇಂಡಿಯಾ ಮೊದಲ 7 ಓವರ್​ಗಳಲ್ಲಿ 74 ರನ್​ ಕಲೆಹಾಕಿತು.

ಆದರೆ 8ನೇ ಓವರ್​ನ ಮೊದಲ ಎಸೆತವನ್ನು ಅಪ್ಪರ್ ಕಟ್ ಮಾಡಿ ಮೈದಾನದ ಹೊರಗೆ ಅಟ್ಟುಲು ಯತ್ನಿಸಿದ ವೈಭವ್ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು. ಇದರೊಂದಿಗೆ ವೈಭವ್ ಸೂರ್ಯವಂಶಿಯ ಸ್ಫೋಟಕ ಇನಿಂಗ್ಸ್ ಅಂತ್ಯಗೊಂಡಿತು.

200ರ ಸ್ಟ್ರೈಕ್​ ರೇಟ್​ನಲ್ಲಿ ಅಬ್ಬರಿಸಿದ ವೈಭವ್:

ಈ ಪಂದ್ಯದಲ್ಲಿ 22 ಎಸೆತಗಳನ್ನು ಎದುರಿಸಿದ ವೈಭವ್ ಸೂರ್ಯವಂಶಿ 200ರ ಸ್ಟ್ರೈಕ್​ ರೇಟ್​ನಲ್ಲಿ ಬ್ಯಾಟ್ ಬೀಸಿ 44 ರನ್ ಕಲೆಹಾಕಿದರು. ಇದರ ನಡುವೆ 9 ಭರ್ಜರಿ ಫೋರ್​ಗಳನ್ನು ಬಾರಿಸಿದ್ದರು.

ಆದರೆ ಅರ್ಧಶತಕದ ಅಂಚಿನಲ್ಲಿ ವಿಕೆಟ್ ಒಪ್ಪಿಸುವ ಮೂಲಕ ಕೇವಲ 6 ರನ್​ಗಳಿಂದ ಭಾರತ ಎ ಪರ ಚೊಚ್ಚಲ ಅರ್ಧಶತಕ ಬಾರಿಸುವ ಅವಕಾಶವನ್ನು ಕೈ ಚೆಲ್ಲಿಕೊಂಡರು.

ಇನ್ನು ವೈಭವ್ ಸೂರ್ಯವಂಶಿ ಔಟಾದ ಬಳಿಕ ಬಂದ ಪ್ರಿಯಾಂಶ್ ಆರ್ಯ ಕೇವಲ 8 ರನ್​ಗಳಿಸಿ ಔಟಾಗಿದ್ದಾರೆ. ಇದೀಗ ಪ್ರಭ್​ಸಿಮ್ರಾನ್ ಸಿಂಗ್ ಹಾಗೂ ರುತುರಾಜ್ ಗಾಯಕ್ವಾಡ್ ಬ್ಯಾಟಿಂಗ್ ಮುಂದುವರೆಸಿದ್ದು, 12 ಓವರ್​ಗಳ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 2 ವಿಕೆಟ್ ಕಳೆದುಕೊಂಡು 104 ರನ್​ ಕಲೆಹಾಕಿದೆ.

ಭಾರತ ಎ ಪ್ಲೇಯಿಂಗ್ 11:  ವೈಭವ್ ಸೂರ್ಯವಂಶಿ ,ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್ ), ಪ್ರಿಯಾಂಶ್ ಆರ್ಯ , ರುತುರಾಜ್ ಗಾಯಕ್ವಾಡ್ , ತಿಲಕ್ ವರ್ಮಾ (ನಾಯಕ), ಆಯುಷ್ ಬದೋನಿ, ಸೂರ್ಯಾಂಶ್ ಶೆಡ್ಗೆ, ಅರ್ಷದ್ ಖಾನ್, ವಿಪ್ರಾಜ್ ನಿಗಮ್, ಅನ್ಕುಲ್ ರಾಯ್, ಅನ್ಶುಲ್ ಕಂಬೋಜ್.

ಇದನ್ನೂ ಓದಿ: ಒಲಿಂಪಿಕ್ಸ್​ಗೆ ಕೊಹ್ಲಿಯನ್ನು ಆಯ್ಕೆ ಮಾಡಿ: ಮಾಜಿ ಆಟಗಾರನ ಸಲಹೆ!

ಅಫ್ಘಾನಿಸ್ತಾನ್ ಪ್ಲೇಯಿಂಗ್ 11: ಇಮ್ರಾನ್ ಮೀರ್ (ನಾಯಕ), ಹಸನ್ ಐಸಾಖಿಲ್, ಖಾಲಿದ್ ತನಿವಾಲ್ , ಇಜಾಝ್ ಅಹ್ಮದ್ ,
ಬಹೀರ್ ಶಾ , ಇಶಾಕ್ ರಹೀಮಿ (ವಿಕೆಟ್ ಕೀಪರ್) , ಖಲೀಲ್ ಗುರ್ಬಾಝ್ , ಝಹೀರ್ ಖಾನ್ , ಅಬ್ದುಲ್ಲಾ ಅಹ್ಮದ್​ಝಾಹಿ,  ಮೊಹಮ್ಮದ್ ಇಬ್ರಾಹಿಂ , ಫರ್ಮಾನುಲ್ಲಾ ಸಫಿ.

 

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us